ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿನಲ್ಲಿ ಮಹಾ ಶಿವರಾತ್ರಿ ಆಚರಿಸಿದ್ದಾರೆ. ಪತ್ನಿ ಜೊತೆ ಧ್ಯಾನ ಮಾಡುತ್ತಿರುವ ಫೋಟೋ ವೈರಲ್ ಆಗಿವೆ. 

ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಕರ್ನಾಟಕದಲ್ಲಿದ್ದಾರೆ. ಕರ್ನಾಟಕದ ಕೆಲವು ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ತಲೈವ ಸದ್ಯ ಜೈಲರ್ ಸಿನಿಮಾದ ಶೂಟಿಂಗ್ ನಲ್ಲಿದ್ದಾರೆ. ನಿರೀಕ್ಷೆಯ ಜೈಲರ್ ಸಿನಿಮಾದ ಚಿತ್ರೀಕರಣ ಕರ್ನಾಟಕದ ಕೆಲವು ಸ್ಥಳಗಲ್ಲಿ ನಡೆಯುತ್ತಿದೆ. ಈ ನಡುವೆ ಸೂಪರ್ ಸ್ಟಾರ್ ಮಹಾ ಶಿವರಾತ್ರಿಯನ್ನು ಬೆಂಗಳೂರಿನಲ್ಲಿ ಆಚರಿಸಿದ್ದಾರೆ. ಫೆಬ್ರವರಿ 18ರಂದು ಮಹಾ ಶಿವರಾತ್ರಿಯನ್ನು ದೇಶಾದ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಈ ವಿಶೇಷ ದಿನದಂದು ರಜನಿಕಾಂತ್ ಮತ್ತು ಅವರ ಪತ್ನಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮಹಾ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಿದ್ದರು.

Add Asianetnews Kannada as a Preferred SourcegooglePreferred

ಬೆಂಗಳೂರಿನಲ್ಲಿ ಶ್ರೀ ಶ್ರೀ ರವಿಶಂಕರ್ ಆರ್ಟ್ ಆಫ್ ಲಿವಿಂಗ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವದಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಜೊತೆಗೆ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾಕೂಡ ರಜನಿಕಾಂತ್ ಜೊತೆ ಭಾಗಿಯಾಗಿದ್ದರು. ರಜನಿಕಾಂತ್ ಪತ್ನಿ ಲತಾ ಜೊತೆ ಧ್ಯಾನ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಲತಾ ಪಿಂಕ್ ಮತ್ತು ಬ್ಲ್ಯಾಕ್ ಡ್ರೆಸ್ ಧರಿಸಿದ್ದರೆ, ರಜನಿಕಾಂತ್ ಬಿಳಿ ಕುರ್ತಾ ಧರಿಸಿದ್ದಾರೆ. ರಜನಿಕಾಂತ್ ಪುತ್ರಿ ಐಶ್ವರ್ಯ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನಲ್ಲಿ ಮಹಾಶಿವರಾತ್ರಿ ಆಚರಣೆ ಮಾಡಿದ ಫೋಟೋಗಳನ್ನು ಶೇರ್ ಮಾಡಿದ್ದಾರೆ. 

ಮಂಗಳೂರಿನ ಪಿಲಿಕುಳದಲ್ಲಿ ರಜನಿಕಾಂತ್ 'ಜೈಲರ್' ಚಿತ್ರೀಕರಣ: ಪ್ರವೇಶ ‌ನಿರ್ಬಂಧ!

ಶಿವರಾತ್ರಿಗೂ ಮೊದಲು ರಜನಿಕಾಂತ್ ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ತಮಿಳುನಾಡಿನ ಕೊಯಮತ್ತೂರು ಬಳಿ ಸ್ಥಾಪಿಸಿರುವ ಆದಿಯೋಗಿ ಮಾದರಿಯಲ್ಲಿ ಚಿಕ್ಕಬಳ್ಳಾಪುರದಲ್ಲಿ 112 ಎತ್ತರದ ಆದಿಯೋಗಿ ಪ್ರತಿಮೆ ಸ್ಥಾಪಿಸಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ ಆದಿಯೋಗಿ ಪ್ರತಿಮೆ ವೀಕ್ಷಿಸಿದ್ದರು.

ಜೈಲರ್ ಸಿನಿಮಾದ ಬಗ್ಗೆ 

ನೆಲ್ಸನ್ ದಿಲೀಪ್ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿದೆ ಜೈಲರ್ ಸಿನಿಮಾ. ಸದ್ಯ ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ಜಾಕಿ ಶ್ರಾಫ್, ರಮ್ಯಾ ಕೃಷ್ಣನ್, ತಮನ್ನಾ, ಯೋಗಿ ಬಾಬು ಸೇರಿದಂತೆ ಅನೇಕರು ನಟಿಸಿದ್ದಾರೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಶಿವಣ್ಣ ಮತ್ತು ರಜನಿಕಾಂತ್ ಇಬ್ಬರ ಶೂಟಿಂಗ್ ಫೋಟೋಗಳು ವೈರಲ್ ಆಗಿತ್ತು. 

ಆದಿಯೋಗಿ ಪ್ರತಿಮೆ ವೀಕ್ಷಣೆಗೆ ಸದ್ದಿಲ್ಲದೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ ನಟ ರಜನಿಕಾಂತ್!

ಜೈಲರ್ ಸಿನಿಮಾ ಸನ್ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿದೆ. ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಜೈಲರ್ ಈ ವರ್ಷದ ಕೊನೆಯಲ್ಲಿ ಚಿತ್ರಮಂದಿರಗಳಿಗೆ ಬರಲು ಸಜ್ಜಾಗಿದ್ದಾರೆ. ರಜನಿಕಾಂತ್ ಕೊನೆಯದಾಗಿ ಅಣ್ಣಾತ್ತೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.