ಸೆಟ್ಟೇರಿತು ಬುಚ್ಚಿಬಾಬು-ರಾಮ್ ಚರಣ್ ಜೋಡಿ ಸಿನಿಮಾ; ಬಲಗಾಲಿಟ್ಟು ಬಂದ್ರು ಜಾಹ್ನವಿ ಕಪೂರ್
ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ತ್ರಿಬಲ್ ಆರ್ (RRR)ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ (Ramcharn) ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ 'RC 16' ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹೈದ್ರಾಬಾದ್ ನಲ್ಲಿ ನೆರವೇರಿದೆ.
ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
ಡ್ಯಾಡಿಯೇ ಮಗಳನ್ನು 'ಮಂಕಿ' ಎಂದಿದ್ರು, ಆಕೆ ತುಂಬಾ ಕೋಪಗೊಂಡಿದ್ರು; ಏನಿದು ಪ್ರಿಯಾಂಕಾ ಚೋಪ್ರಾ ಕಥೆ?
ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್ ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತ ಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.
ವಿವಿಧ ಭಾಷೆ ಮತ್ತು ಜಾನರ್ ಸಿರೀಸ್-ಸಿನಿಮಾಗಳ ಲಾಂಚ್ ಮಾಡಲು ಸಜ್ಜಾದ ಪ್ರೈಮ್ ವೀಡಿಯೋ
ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ.
ಸೈನ್ಸ್ ಬಿಟ್ಟು ಆರ್ಟ್ಸ್ ಓದಿದ್ಯಾಕೆ ಖ್ಯಾತ ಗಾಯಕ; ಮುಖ್ಯವಾದ ಘಟನೆ ಹಂಚಿಕೊಂಡ್ರು ಅರಿಜಿತ್ ಸಿಂಗ್!
ಅತಿಲೋಕ ಸುಂದರಿ ಖ್ಯಾತಿಯ ನಟಿ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಸದ್ಯ ಜೂನಿಯರ್ ಎನ್‌ಟಿಆರ್ ನಟನೆಯ 'ದೇವರ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಮತ್ತೆ ಇನ್ನೊಂದು ತೆಲುಗು ಸಿನಿಮಾಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿ ಕೂಡ ಜಾಹ್ನವಿ ಕಪೂರ್ ಹಲವು ಸಿನಿಮಾಗಳ ಆಫರ್ ಪಡೆದುಕೊಂಡಿದ್ದಾರೆ.
ನಿಜವಾಗಿ ಹೇಳೆಬೇಕೆಂದರೆ, ಇಂದು ಭಾರತದ ಸಿನಿಮಾ ಉದ್ಯಮದಲ್ಲಿ ಸೌತ್ ಮತ್ತು ನಾರ್ತ್ ಎಂಬ ಭೇದಭಾವ ಹೊರಟು ಹೋಗಿದೆ. ಈಗ ಬಿಗ್ ಬಜೆಟ್ ಸಿನಿಮಾಗಳೆಲ್ಲವೂ ಕನಿಷ್ಠ ನಾಲ್ಕೈದು ಭಾಷೆಗಳಲ್ಲಿ ರೆಡಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿವೆ.
ಎಲ್ಲೋ ಜೋಗಪ್ಪ ನಿನ್ನರಮನೆ ಎಂದ 'ಜವಾನ್' ಗಾಯಕಿ, ಕನ್ನಡದ ಹಾಡಿಗೆ ಧ್ವನಿಯಾದ ರಕ್ಷಿತಾ ಸುರೇಶ್