ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಮಗಳಿಗೆಕ್ಲಿನ್ ಕಾರಾ ಕೊನಿಡೆಲಾ ಎಂದು ನಾಮಕರಣ ಮಾಡಿದ್ದಾರೆ. ಈ ಹೆಸರನ್ನು  ಲಲಿತಾ ಸಹಸ್ರನಾಮದಿಂದ ತೆಗೆದುಕೊಳ್ಳಲಾಗಿದೆ ಎಂದು ಬಹಿರಂಗ ಪಡಿಸಿದ್ದಾರೆ. 

ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವನ್ನು ಸ್ವಾಗತಿಸಿದ ಟಾಲಿವುಡ್ ಸ್ಟಾರ್ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಇದೀಗ ನಾಮಕರಣ ಮಾಡಿದ್ದಾರೆ. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮುದ್ದಾದ ಮಗುವಿಗೆ ಹೆಸರಿಟ್ಟಿದ್ದಾರೆ. ಜೂನ್ 20ರಂದು ಬೆಳಗ್ಗೆ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬಂದಿದೆ. ಹೈದರಾಬಾದ್‌ ಅಪೋಲೋ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ಜನ್ಮ ನೀಡಿ 3 ದಿನಗಳ ಬಳಿಕ ಉಪಾಸನಾ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದು ಇದೀಗ ನಾಮಕರಣ ಸಂಭ್ರಮ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂದಹಾಗೆ ಮಗಳಿಗೆ 'ಕ್ಲಿನ್ ಕಾರ ಕೊನಿಡೆಲಾ' ಎಂದು ನಾಮಕರಣ ಮಾಡಿದ್ದಾರೆ. ಈ ಬಗ್ಗೆ ಚಿರಂಜೀವಿ ಕುಟುಂಬ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕ್ಲಿನ್ ಕಾರಾ ಎಂದರೆ ದೈವಿಕ ತಾಯಿ ಶಕ್ತಿ ಎನ್ನುವ ಅರ್ಥವಿದೆ. ಅಂದಹಾಗೆ ಈ ಹೆಸರನ್ನು ಲಲಿತಾ ಸಹಸ್ರನಾಮದಿಂದ ತೆಗೆದುಕೊಳ್ಳಲಾಗಿದೆ ಎಂದು ಬಹಿರಂಗ ಪಡಿಸಿದ್ದಾರೆ. 'ಕ್ಲಿನ್ ಕಾರ' ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ 'ಶಕ್ತಿ'ಯ ಪರಮ ಶಕ್ತಿಯನ್ನು ಆವರಿಸುತ್ತದೆ. ಮತ್ತು ಶಕ್ತಿಯುತವಾದ ಕಂಪನವನ್ನು ಹೊಂದಿದೆ ಎಂದು ಹೆಸರಿನ ಬಗ್ಗೆ ವಿವರಣೆ ನೀಡಿದ್ದಾರೆ. 

'ಪುಟ್ಟ ರಾಜಕುಮಾರಿಯು ಬೆಳೆದಂತೆ ಈ ಗುಣಗಳನ್ನು ತನ್ನ ವ್ಯಕ್ತಿತ್ವದಲ್ಲಿ ಅಳವಡಿಸಿಕೊಳ್ಳುತ್ತಾಳೆ ಎಂದು ನಮಗೆಲ್ಲರಿಗೂ ಖಚಿತವಾಗಿದೆ' ಎಂದು ಹೇಳಿದ್ದಾರೆ. ಹೆಸರಿನ ಬಗ್ಗೆ ದೀರ್ಘವಾದ ಪೋಸ್ಟ್ ಶೇರ್ ಮಾಡಿ ಚಿರಂಜೀವಿ ದಂಪತಿ ಮತ್ತು ಉಪಾಸನಾ ತಂದೆ-ತಾಯಿ ಮಗುವಿನ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ.

Scroll to load tweet…

ಚಿನ್ನದ ತೊಟ್ಟಿಲು ಉಡುಗೊರೆ

ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಟಾಲಿವುಡ್ ಸ್ಟಾರ್ ರಾಮ್ ಚರಣ್ ಮತ್ತು ಉಪಾಸನಾ ಮಗುವಿಗೆ 1 ಕೋಟಿ ಬೆಲೆಯ ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಚಿನ್ನದ ತೊಟ್ಟಿಲು ಇದಾಗಿದ್ದು ದುಬಾರಿ ಉಡುಗೊರೆ ಕೊಟ್ಟಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಅಷ್ಟೆಯಲ್ಲದೇ ತೊಟ್ಟಿಲಿನ ವಿಡಿಯೋ ಕೂಡ ವೈರಲ್ ಆಗಿದೆ. 

ಉಪಾಸನಾ ಮತ್ತು ರಾಮ್ ಚರಣ್ ಮದುವೆಯಾಗಿ 11 ವರ್ಷಗಳ ಬಳಿಕ ಮಗು ಜನಿಸಿದ್ದು ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ರಾಮ್ ಚರಣ್ ಮತ್ತು ಉಪಾಸನಾ ದಂಪತಿ 2012 ರಲ್ಲಿ ಜೂನ್ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಉಪಾಸನಾ ಗರ್ಭಿಣಯಾಗಿರುವ ವಿಚಾರವನ್ನು ಡಿಸೆಂಬರ್‌ನಲ್ಲಿ ಬಹಿರಂಗ ಪಡಿಸಿದ್ದರು. ಮನೆಗೆ ಮೊಮ್ಮಗಳು ಬಂದ ಖುಷಿಯನ್ನು ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂಭ್ರಮಿಸಿದ್ದರು. ಲಿಟ್ಲ್ ಪ್ರಿನ್ಸ್ ಎಂದು ನಟ ಚಿರಂಜೀವಿ ಬಣ್ಣಿಸಿದ್ದರು. 'ಲಿಟಲ್ ಮೆಗಾ ಪ್ರಿನ್ಸೆಸ್‌ಗೆ ಸುಸ್ವಾಗತ. ನಿನ್ನ ಆಗಮನಿಂದ ಲಕ್ಷಾಂತರ ಮೆಗಾ ಕುಟುಂಬದಲ್ಲಿ ಉತ್ಸಾಹ ತುಂಬಿದ್ದಿಯಾ. ನೀನು ಪೋಷಕರಾದ ರಾಮ್ ಚರಣ್ ಮತ್ತು ಉಪಾಸನಾ ಕೊನಿಡೇಲಾ ಮತ್ತು ನಾವು ಅಜ್ಜ-ಅಜ್ಜಿಯರಿಗೆ ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡಿದ್ದೀಯಾ' ಎಂದು ಪೋಸ್ಟ್ ಶೇರ್ ಮಾಡಿದ್ದರು.