ಹೊಸ ವರ್ಷಕ್ಕೆ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ರಕ್ತಸಿಕ್ತವಾಗಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 

ಇಡೀ ಜಗತ್ತು ಹೊಸ ವರ್ಷದ ಸಂಭ್ರಮದಲ್ಲಿದೆ. 2023ರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಹಳೆಯ ವರ್ಷಕ್ಕೆ ಅದ್ದೂರಿಯಾಗಿ ಬೈ ಬೈ ಹೇಳಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಅದ್ದೂರಿಯಾಗಿ ಪಾರ್ಟಿ ಮೂಡುವ ಮೂಲಕ ಹೊಸ ವರ್ಷಾಚರಣೆ ಮಾಡಿದ್ದಾರೆ. ಈ ನಡುವೆ ರಣಬೀರ್ ಕಪೂರ್ ರಕ್ತಸಿಕ್ತವಾಗಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬಾಲಿವುಡ್ ಸ್ಟಾರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. 2022 ರಣಬೀರ್ ಕಪೂರ್ ಅವರಿಗೆ ತುಂಬಾ ವಿಶೇಷವಾದ ವರ್ಷ. ನಟಿ ಅಲಿಯಾ ಭಟ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟರು. ಮದುವೆಯಾಗಿ ಒಂದು ವರ್ಷದೊಳಗೆ ಮಗಳನ್ನು ಸ್ವಾಗತಿಸಿದರು. ಇದೀಗ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟಿದ್ದರು ನೋಡಿ ಅಭಿಮಾನಿಗಳು ಅಚ್ಚರಿ ಪಡುತ್ತಿದ್ದಾರೆ. 

ರಣಬೀರ್ ಕಪೂರ್ ಹೆಚ್ಚಾಗಿ ಲವರ್ ಬಾಯ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಸಖತ್ ಮಾಸ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಅಂದಹಾಗೆ ರಣಬೀರ್ ಕಪೂರ್ ನಟನೆಯ ಎನಿಮಲ್ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ರಣಬೀರ್ ಕಪೂರ್ ಅವರನ್ನು ವಿಭಿನ್ನ ಲುಕ್ ನಲ್ಲಿ ನೋಡಿ ಅಭಿಮಾನಿಗಳು ಸಂತಸ ಪಡುತ್ತಿದ್ದಾರೆ. ಹೊಸ ವರ್ಷದ ಪ್ರಯುಕ್ತ ಅನಿಮಲ್ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ. ಪೋಸ್ಟರ್ ನಲ್ಲಿ ರಣಬೀರ್ ರಕ್ತಸಿಕ್ತವಾಗಿ ಕಾಣಿಸಿಕೊಂಡಿದ್ದಾರೆ. ಸಿಗರೇಟ್ ಹಚ್ಚುತ್ತಾ ಬಗಲಲ್ಲಿ ರಕ್ತ ಮೆತ್ತಿದ ಕೊಡಲಿ ಹಿಡಿದು ನಿಂತಿದ್ದಾರೆ. ಭಯ ಹುಟ್ಟಿಸುವ ರಣಬೀರ್ ಲುಕ್‌ಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ.

ರಣಬೀರ್ ಇನ್ನು ರೊಮ್ಯಾಂಟಿಕ್ ಕಾಮಿಡಿ ಚಿತ್ರ ಮಾಡೋಲ್ವಂತೆ! ಅದ್ಯಾಕೋ?

 ಅಂದಹಾಗೆ ಅನಿಮಲ್ ಸಿನಿಮಾಗೆ ದಕ್ಷಿಣ ಭಾರತದ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಸೌತ್ ಸುಂದರಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ರಶ್ಮಿಕಾ ರಣಬೀರ್ ಜೊತೆ ನಟಿಸುತ್ತಿದ್ದಾರೆ. ಇನ್ನು ನಿರ್ದೇಶಕ ಸಂದೀಪ್ ಅವರಿಗೂ ಇದು ಮೊದಲ ಹಿಂದಿ ಸಿನಿಮಾವಾಗಿದೆ. ರಶ್ಮಿಕಾ ಮತ್ತು ರಣಬೀರ್ ಜೊತೆಗೆ ಬಾಲಿವುಡ್ ನ ಮತ್ತೋರ್ವ ಖ್ಯಾತ ನಟ ಅನಿಲ್ ಕಪೂರ್ ಕೂಡ ಕಾಣಿಸಿಕೊಂಡಿದ್ದಾರೆ.

Scroll to load tweet…

ಕೇವಲ 15 ವರ್ಷಕ್ಕೆ ವರ್ಜಿನಿಟಿ ಕಳೆದುಕೊಂಡೆ; ರಣಬೀರ್ ಕಪೂರ್ ಶಾಕಿಂಗ್ ಹೇಳಿಕೆ

ಸದ್ಯ ಪೋಸ್ಟರ್ ಮೂಲಕ ಬಾರಿ ಕುತೂಹಲ ಮೂಡಿಸಿರುವ ಅನಿಮಲ್ ಸಿನಿಮಾ ಹಿಂದಿ ಜೊತೆಗೆ ಅನೇಕ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ದಕ್ಷಿಣ ಭಾರತೀಯರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಾಲಿವುಡ್ ಇತ್ತೀಚಿಗೆ ಅನೇಕ ಹಿಂದಿ ಸಿನಿಮಾಗಳು ಸೌತ್ ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ. ಅನಿಮಲ್ ಕೂಡ ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ.