Asianet Suvarna News Asianet Suvarna News

Rashmika and Tamanna: ಐಪಿಎಲ್​ನಲ್ಲಿ ಸೊಂಟ ಬಳುಕಿಸ್ತಿದ್ದಾರೆ ಈ ಬಾಲಿವುಡ್​ ಬೆಡಗಿಯರು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಮಾರ್ಚ್ 31ರಿಂದ ಆರಂಭವಾಗಲಿದ್ದು, ಈ ಆಟದಲ್ಲಿ ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಮೆರುಗು ನೀಡಲಿದ್ದಾರೆ. 
 

Rashmika Mandanna and Tamannaah Bhatia set to perform at the opening ceremony in IPL 2023
Author
First Published Mar 24, 2023, 10:59 PM IST

ಕ್ರಿಕೆಟ್ ಸೀಸನ್ ಮತ್ತೆ ಆರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತನ್ನ 16 ನೇ ಋತುವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ನಾಲ್ಕು ವರ್ಷಗಳ ಅನುಪಸ್ಥಿತಿಯ ನಂತರ ಈ ಋತುವಿನ ಉದ್ಘಾಟನಾ ಸಮಾರಂಭ ನಡೆಯಲಿದೆ.  ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಆರಂಭಿಕ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೆಣಸಲಿದೆ. ಸಿಎಸ್​ಕೆ ನಾಯಕ ಎಂಎಸ್ ಧೋನಿ (MS Dhoni) ಒಂದು ತಿಂಗಳ ಮುಂಚಿತವಾಗಿಯೇ ಅಭ್ಯಾಸ ಶುರುಮಾಡಿಕೊಂಡಿದ್ದರು. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಇದೇ ಮೊದಲ ಬಾರಿಗೆ ಐಪಿಎಲ್​ ಲೀಗ್‌ಗಾಗಿ ಓಪನಿಂಗ್ ಸಮಾರಂಭವನ್ನು ಆಯೋಜಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಇದಕ್ಕಾಗಿ ಬಿಸಿಸಿಐ ಭರ್ಜರಿ ಸಿದ್ಧತೆ ನಡೆಸುತ್ತಿದೆ. ನಾಲ್ಕು ವರ್ಷಗಳ ನಂತರ ಓಪನಿಂಗ್ ಸಮಾರಂಭಕ್ಕೆ ಅದ್ಧೂರಿ ಸಿದ್ಧತೆ ನಡೆದಿದೆ. ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 70 ಲೀಗ್ ಪಂದ್ಯಗಳಿಗಾಗಿ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸುವುದರೊಂದಿಗೆ ಈ ವರ್ಷದ ಐಪಿಎಲ್​ ನಡೆಯಲಿದೆ. ಕಳೆದ ಡಿಸೆಂಬರ್​ನಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಎಲ್ಲ 10 ಫ್ರಾಂಚೈಸಿಗಳು ತಮಗೆ ಅಗತ್ಯವಿರುವ ಆಟಗಾರರನ್ನು ಖರೀದಿ ಮಾಡಿದೆ. ಈ ವಾರ ಕೆಲ ವಿದೇಶಿ ಆಟಗಾರರನ್ನು ಹೊರತು ಪಡಿಸಿ ಉಳಿದ ಎಲ್ಲ ಪ್ಲೇಯರ್ಸ್ ತಮ್ಮ ತಮ್ಮ ತಂಡ ಸೇರಿಕೊಳ್ಳಲಿದ್ದಾರೆ. 

ಕಲರ್​​ಫುಲ್​​​​ ಲೀಗ್​​​​ ಮತ್ತಷ್ಟು ಮೆರಗು ತರಲು ಬಿಸಿಸಿಐ ಯೋಜನೆ ರೂಪಿಸಿದ್ದು, ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ಬಾರಿ  ಉದ್ಘಾಟನಾ ಸಮಾರಂಭಕ್ಕೆ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಮೆರುಗು ನೀಡಲಿದ್ದಾರೆ ಎಂದು ವರದಿಯಾಗಿದೆ. ಉಳಿದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಈ ಕಾರ್ಯಕ್ರಮದಲ್ಲಿ ಹಾಡು ಹಾಡಲಿದ್ದಾರೆ ಎಂದು ಹೇಳಲಾಗಿದೆ.  ಮುಂಬೈನಲ್ಲಿ ಬಿಸಿಸಿಐ ಆಯೋಜಿಸಿದ್ದ  ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭದಲ್ಲಿ  ಬಾಲಿವುಡ್  ನಟಿಯರಾದ ಕೃತಿ ಸನನ್ (Kriti Sanon) ಮತ್ತು ಕಿಯಾರಾ ಅಡ್ವಾಣಿ (Kiara Advani) ನೃತ್ಯ ಮಾಡಿದ್ದರು.  ಇವರ ಜೊತೆಗೆ ಖ್ಯಾತ ಪಂಜಾಬಿ ಗಾಯಕ ಎಪಿ ಧಿಲ್ಲೋನ್    ಮೋಡಿ ಮಾಡಿದ್ದರು. ಇದೀಗ  ಈ ಐಪಿಎಲ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ  ತಮನ್ನಾ ಸೊಂಟ ಬಳುಕಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಾಮಿ ಸಾಮಿ ಡಾನ್ಸ್​ ಇನ್ನು ಮಾಡೋಲ್ಲ ಎಂದ Rashmika Mandanna: ಕಾರಣ ಕೇಳಿ ಫ್ಯಾನ್ಸ್ ಸುಸ್ತು!

ಅಂದಹಾಗೆ ಈ ಐಪಿಎಲ್​ನ ಸಂಪೂರ್ಣ ಸೊಬರನ್ನು  ರಿಲಯನ್ಸ್ ಜಿಯೋದ ಜಿಯೋ ಸಿನಿಮಾ (Reliance Jio Cinema) ಆ್ಯಪ್​ನಲ್ಲಿ ನೇರಪ್ರಸಾರದಲ್ಲಿ ಸವಿಯಬಹುದು. ಜಿಯೋ ಬಳಕೆದಾರರು ಉಚಿತವಾಗಿ ವೀಕ್ಷಿಸಬಹುದು. ಇದುವರೆಗೆ ಐಪಿಎಲ್ ಅನ್ನು ದೇಶದಲ್ಲಿ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಮಾತ್ರ ಸ್ಟ್ರೀಮ್ ಮಾಡಲಾಗುತ್ತಿತ್ತು. ಇದಕ್ಕಾಗಿ ಚಂದಾದಾರಿಕೆಯನ್ನು ಹೊಂದಿರುವುದು ಅಗತ್ಯವಿತ್ತು. ಆದರೀಗ ಜಿಯೋ ಎಲ್ಲವನ್ನು ಉಚಿತವಾಗಿ ನೀಡುತ್ತಿದೆ. ಪ್ಯಾರಾಮೌಂಟ್ ಗ್ಲೋಬಲ್ ಮತ್ತು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ನಡುವಿನ ಜಂಟಿ ಉದ್ಯಮವಾಗಿರುವ ವಯೋಕಾಮ್‌18 ಮೀಡಿಯಾ ಪ್ರೈ. ಕಳೆದ ವರ್ಷದ ಹರಾಜಿನಲ್ಲಿ ಭಾರತದ ಉಪಖಂಡದಲ್ಲಿನ ಡಿಜಿಟಲ್‌ ಐಪಿಎಲ್‌ ಪ್ರಸಾರದ ಹಕ್ಕುಗಳನ್ನು 20,500 ಕೋಟಿ ರೂ.ಗೆ ಪಡೆದುಕೊಂಡಿತ್ತು. ಹೀಗಾಗಿ ಜಿಯೋ ಸಿನಿಮಾದಲ್ಲಿ ಐಪಿಎಲ್ ಲೈವ್ (Live) ಕಾಣಲಿದೆ.  

52 ದಿನಗಳ ಅವಧಿಯಲ್ಲಿ 12 ಸ್ಥಳಗಳಲ್ಲಿ ಒಟ್ಟು 70 ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಲೀಗ್ ಹಂತದಲ್ಲಿ ತಂಡಗಳು ಕ್ರಮವಾಗಿ 7 ತವರಿನ ಪಂದ್ಯಗಳನ್ನು ಮತ್ತು 7 ಬೇರೆಡೆ ಪಂದ್ಯಗಳನ್ನು ಆಡಲಿವೆ. ಪ್ರತಿ ತಂಡವು ಅದೇ ಗುಂಪಿನ ಇತರ 4 ತಂಡಗಳನ್ನು 2 ಬಾರಿ ಎದುರಿಸಲಿದೆ.

Liplock ಮಾಡಿ ಪೇಚಿಗೆ ಸಿಲುಕಿದ ನಟಿ ತಮನ್ನಾ ಭಾಟಿಯಾ

Follow Us:
Download App:
  • android
  • ios