ಸತತ ಸೋಲಿನ ನಡುವೆಯೂ ಮತ್ತೊಂದು ಹಿಂದಿ ಸಿನಿಮಾ ಒಪ್ಪಿಕೊಂಡ ರಶ್ಮಿಕಾ; ಈ ಬಾರಿ ಯಾರ ಜೊತೆ ರೊಮ್ಯಾನ್ಸ್?
ಸತತ ಸೋಲಿನ ನಡುವೆಯೂ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಸಿನಿಮಾಗೆ ಸಹಿ ಮಾಡಿದ್ದಾರೆ.
ಸೌತ್ ಸಿನಿಮಾರಂಗ ಮತ್ತು ಬಾಲಿವುಡ್ ಎರಡೂ ಕಡೆ ನಟಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಕೈತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ರಶ್ಮಿಕಾ ಹಿಂದಿಯಲ್ಲಿ ಸಕ್ಸಸ್ ಕಾಣಲು ಸಾಧ್ಯವಾಗಿಲ್ಲ. ಈಗಾಗಲೇ ರಶ್ಮಿಕಾ ನಟನೆಯ ಎರಡು ಸಿನಿಮಾಗಳು ರಿಲೀಸ್ ಆಗಿದ್ದು ಹಿಂದಿ ಅಭಿಮಾನಿಗಳನ್ನು ಸೆಳೆಯುವಲ್ಲಿ ವಿಫಲವಾಗಿದ್ದಾರೆ. ಗುಡ್‌ಬೈ ಸಿನಿಮಾ ಮೂಲಕ ಮೊದಲ ಬಾರಿಗೆ ರಶ್ಮಿಕಾ ಬಾಲಿವುಡ್‌ನಲ್ಲಿ ಮಿಂಚಿದರು. ಆದರೆ ಆ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿತು. ನಂತರ ಬಂದ ಮಿಷನ್ ಮಜ್ನು ಸಿನಿಮಾ ಕೂಡ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ವಿಫಲವಾಯಿತು. ಸದ್ಯ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಸತತ ಸೋಲಿನ ಬಳಿಕವೂ ರಶ್ಮಿಕಾ ಮತ್ತೊಂದು ಹಿಂದಿ ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ಅಮಿತಾಭ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರ ಮತ್ತು ರಣಬೀರ್ ಕಪೂರ್ ಬಳಿಕ ಇದೀಗ ರಶ್ಮಿಕಾ ವಿಕ್ಕಿ ಕೌಶಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ದಿನೇಶ್ ವಿಜನ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹಿಸ್ಟೋರಿಕಲ್ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರಂತೆ. ಈಗಾಗಲೇ ಟೈಟಲ್ ಕೂಡ ಬಾಲಿವುಡ್ ವೈರಲ್ ಆಗಿದೆ. 'ಛಾವಾ' ಎಂದು ಸಿನಿಮಾಗೆ ಟೈಟಲ್ ಇಡಲಾಗಿದೆ. ಇದು ಮರಾಠ ಮರಾಠಾ ಸಾಮ್ರಾಜ್ಯದ ಸಂಸ್ಥಾಪಕ ಮತ್ತು ಮಹಾನ್ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜ್, ಹಿರಿಯ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಕುರಿತು ಇರುವ ಸಿನಿಮಾ ಇದಾಗಿದೆ ಎನ್ನಲಾಗಿದೆ.
ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್ ಕಾಣಿಸಿಕೊಳ್ಳುತ್ತಿದ್ದಾರೆ. ಪತ್ನಿಯ ಪಾತ್ರಕ್ಕೆ ರಶ್ಮಿಕಾ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ರಶ್ಮಿಕಾ ಈ ಪಾತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ 'ಸಂಭಾಜಿ ಮಹಾರಾಜರ ಶೌರ್ಯ, ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ ಗಂಡ ಮತ್ತು ಹೆಂಡತಿ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ' ಎಂದು ಮೂಲಗಳು ತಿಳಿಸಿವೆ.
ಗೋಲ್ಡನ್ ಗರ್ಲ್ ಆಗಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ; ಫ್ಯಾನ್ಸ್ ಹೇಳಿದ್ದೇನು?
ಈಗಾಗಲೇ ಛಾವಾ ಸಿನಿಮಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಇನ್ನೂ ಉಳಿದಂತೆ ಸಿನಿಮಾದಲ್ಲಿ ಯಾರೆಲ್ಲ ಕಲಾವಿದರನ್ನು ಆಯ್ಕೆ ಮಾಡಬೇಕು, ತಂತ್ರಜ್ಞರು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಿನಿಮಾತಂಡ ಭರ್ಜರಿ ತಯಾರಿ ಮಾಡುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆ ಸೇರಿದಂತೆ ಪಾತ್ರಕ್ಕೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ.
ರಶ್ಮಿಕಾ ಮಂದಣ್ಣ ಸೆಲ್ಫಿ, ಗಡ್ಡ ಶೇವ್ ಮಾಡು ತಾಯಿ ಎಂದ ನೆಟ್ಟಿಗರು!
ರಶ್ಮಿಕಾ ಮತ್ತು ವಿಕ್ಕಿ ಕೌಶಲ್ ಇಬ್ಬರೂ ಈ ಹಿಂದೆ ಒಳಉಡುಪಿನ ಜಾಹೀರಾತಿನಲ್ಲಿ ಒಟ್ಟಿಗೆ ಕಾಸಿಕೊಂಡಿದ್ದರು. ಇದೀಗ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಸತತ ಸೋಲು ಕಂಡಿರುವ ರಶ್ಮಿಕಾ ಈ ಸಿನಿಮಾವಾದರೂ ಸಕ್ಸಸ್ ತಂದು ಕೊಡುತ್ತಾ ಕಾದು ನೋಡಬೇಕಿದೆ.