ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಬಾಲಿವುಡ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮೊದಲ ಸಿನಿಮಾ ಬಿಡುಗಡೆಗೂ ಮೊದಲೇ ರಶ್ಮಿಕಾ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು ರಣಬೀರ್ ಕಪೂರ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ(Rashmika Mandanna) ತೆಲುಗು ಬಳಿಕ ಬಾಲಿವುಡ್ ಸಿನಿಮಾರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಹಿಂದಿಯಲ್ಲಿ ಮೊದಲ ಸಿನಿಮಾ ಬಿಡುಗಡೆಗೂ ಮೊದಲು ರಶ್ಮಿಕಾ ಸಾಲು ಸಾಲು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಾರೆ. ಮಿಷನ್ ಮಜ್ನು(Mission Majnu) ಸಿನಿಮಾ ಮೂಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಮೊದಲ ಸಿನಿಮಾದ ಚಿತ್ರೀಕರಣ ಪ್ರಾರಂಭಕ್ಕೂ ಮೊದಲೇ ಅಮಿತಾಬ್ ಬಚ್ಚನ್( Amitabh Bachchan) ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಮತ್ತೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದು, ಸ್ಟಾರ್ ನಾಯಕನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ಗೆ(Ranbir Kapoor) ನಾಯಕಿಯಾಗಿ ರಶ್ಮಿಕಾ ನಟಿಸುತ್ತಿದ್ದಾರೆ. ತೆಲುಗಿನ ಸೂಪರ್ ಹಿಟ್ ಅರ್ಜುನ್ ರೆಡ್ಡಿ ಚಿತ್ರದ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ಸಾರಥ್ಯದಲ್ಲಿ ಮೂಡಿಬರುತ್ತಿರುವ ಅನಿಮಲ್ ಸಿನಿಮಾಗೆ ರಶ್ಮಿಕಾ ಆಯ್ಕೆಯಾಗಿರುವುದು ಬಹುತೇಕ ಖಚಿತವಾಗಿದೆ. ಈ ಮೊದಲು ಅನಿಮಲ್ ಸಿನಿಮಾದ ನಾಯಕಿ ಸ್ಥಾನಕ್ಕೆ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹೆಸರು ಕೇಳಿಬಂದಿತ್ತು. ಆದರೆ ಪರಿಣೀತಿ ಈ ಚಿತ್ರದ ಭಾಗವಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಇದೀಗ ಪರಿಣೀತಿ ಜಾಗಕ್ಕೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ರಣಬೀರ್ ಕಪೂರ್ ಜೊತೆ ಅನಿಲ್ ಕಪೂರ್, ಬಾಬಿ ಡಿಯೋಲ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಶ್ಮಿಕಾ ಆಯ್ಕೆ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಇನ್ನು ಬಹಿರಂಗಪಡಿಸಿಲ್ಲ. ಆದರೆ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ, ರಶ್ಮಿಕಾ ಪಾತ್ರಕ್ಕೆ ಹೊಂದಿಕೆ ಆಗುತ್ತಾರೆ ಎನ್ನುವ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ರಶ್ಮಿಕಾ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದಂತೆ ರಣಬೀರ್ ಮತ್ತು ರಶ್ಮಿಕಾ ಅವರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಮೂಲಗಳ ಪ್ರಕಾರ ರಶ್ಮಿಕಾ ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಪತ್ನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಮಾತೃಭಾಷೆ ಮಾನ ಉಳಿಸಿದ ನಟ, ಕನ್ನಡಿಗರ ಹೃದಯ ಗೆದ್ದ Jr NTR
ಅಂದಹಾಗೆ ಈ ಸಿನಿಮಾ ಬೇಸಿಗೆಯಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಚಿತ್ರವನ್ನು ಟಿ ಸೀರಿಸ್ ಅಡಿಯಲ್ಲಿ ಭೂಷಣ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ರಣಬೀರ್ ಕಪೂರ್ ಸಂಜು ಸಿನಿಮಾದ ಬಳಿಕ ತೆರೆಮೇಲೆ ಬಂದಿಲ್ಲ. 2018ರಲ್ಲಿ ಬಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾ ಬಳಿಕ ರಣಬೀರ್ ಮತ್ತೆ ಅಭಿಮಾನಿಗಳ ಮುಂದೆ ಬಂದಿಲ್ಲ. ಆದರೆ ರಣಬೀರ್ ಬಳಿ ಅನೇಕ ಸಿನಿಮಾಗಳಿವೆ. ಸದ್ಯ ಬಹುನಿರೀಕ್ಷೆಯ ಬ್ರಹ್ಮಾಸ್ತ್ರ ಸಿನಿಮಾದ ಚಿತ್ರೀಕರಣ ಮುಕ್ತಾಯ ಮಾಡಿದ್ದಾರೆ. ಜೊತೆಗೆ ನಿರ್ದೇಶಕ ಲಿವ್ ರಂಜನ್ ಅವರ ಇನ್ನು ಹೆಸರಿಡದ ಸಿನಿಮಾದಲ್ಲಿ ರಣಬೀರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಂಶೇರ ಸಿನಿಮಾದ ಚಿತ್ರೀಕರಣ ಸಹ ಮುಗಿಸಿದ್ದಾರೆ. ಈ ವರ್ಷದ ಕೊನೆಯಲ್ಲಿ ಮತ್ತು ರಣಬೀರ್ ಎರಡು ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಇನ್ನು ಅನಿಮಲ್ ಮುಂದಿನ ವರ್ಷ ಬಿಡುಗಡೆಯಾಗಲಿದೆ.
Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾಗೆ ಬುದ್ಧಿ ಕಲಿಸಲು ಮುಂದಾದ ನೆಟ್ಟಿಗರು!
ರಶ್ಮಿಕಾ ಮಂದಣ್ಣ ಸಹ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಮತ್ತು ಬಾಲಿವುಡ್ ಎರಡು ಸಿನಿಮಾರಂಗದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇತ್ತೀಚಿಗಷ್ಟೆ ಪುಷ್ಪ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ತೆಲುಗಿನಲ್ಲಿ ರಶ್ಮಿಕಾ ಬಳಿ ಪುಷ್ಪಾ-2 ಮತ್ತು ನಾಯಕ ಶರ್ವಾನಂದ್ ಜೊತೆ ನಟಿಸಿರುವ ಸಿನಿಮಾವಿದೆ. ಬಾಲಿವುಡ್ ನಲ್ಲಿ ಎರಡು ಸಿನಿಮಾದ ಚಿತ್ರೀಕರಣ ಮುಗಿಸಿ ಮೂರನೆ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
