ಮಾಲ್ಡೀವ್ಸ್ ಎಂಟ್ರಿ ಕೊಡುತ್ತಿದ್ದಂತೆ ರಶ್ಮಿಕಾ ಫೋಟೋ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ಕುಳಿತು ಸೆಲ್ಫಿ ಕ್ಲಿಕ್ಕಿಸಿರುವ ಫೋಟೋವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಸೌತ್ ಸಿನಿ ರಂಗದ ಸೆನ್ಸೇಷನ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ಮತ್ತು ವಿಜಯ್ ನಡುವೆ ಬ್ರೇಕಪ್ ಆಗಿದೆ, ದೂರ ದೂರ ಆಗಿದ್ದಾರೆ ಎನ್ನುವ ಸುದ್ದಿ ಇತ್ತೀಚಿಷ್ಟೆ ವೈರಲ್ ಆಗಿತ್ತು. ಆದರೆ ಇತ್ತೀಚಿಗಷ್ಟೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಬ್ಬರೂ ಒಟ್ಟಿಗೆ ಏರ್ಪೋರ್ಟ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ್ದರು. ಅಷ್ಟೆಯಲ್ಲ ಈ ಜೋಡಿ ಮಾಲ್ಡೀವ್ಸ್‌ಗೆ ಹಾರಿದೆ ಎನ್ನುವ ವದಂತಿ ವೈರಲ್ ಆಗಿತ್ತು. ವಿಜಯ್ ದೇವರಕೊಂಡ ಏರ್ಪೋರ್ಟ್‌ಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಕೆಲವೇ ಕ್ಷಣಗಳ ಅಂತರದಲ್ಲಿ ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡ ರೂಮರ್ ಜೋಡಿ ಇದೀಗ ಮಾಲ್ಡೀವ್ಸ್‌ನಲ್ಲಿರುವುದು ಖಚಿತವಾಗಿದೆ.
ಮಾಲ್ಡೀವ್ಸ್ ಎಂಟ್ರಿ ಕೊಡುತ್ತಿದ್ದಂತೆ ರಶ್ಮಿಕಾ ಫೋಟೋ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ಕುಳಿತು ಸೆಲ್ಫಿ ಕ್ಲಿಕ್ಕಿಸಿರುವ ಫೋಟೋ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ರಶ್ಮಿಕಾ ಫೋಟೋ ನೋಡಿ ನೆಟ್ಟಿಗರು ಅನುಮಾನ ನಿಜವಾಯ್ತು, ಇಬ್ಬರೂ ಮಾಲ್ಡೀವ್ಸ್ ಪ್ರವಾಸ ಎಂಜಾಯ್ ಮಾಡುತ್ತಿದ್ದೀರಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಮತ್ತೋರ್ವ ನಿಮ್ಮ ಜೊತೆ ವಿಜಯ್ ದೇವರಕೊಂಡ ಸಹ ಇದ್ದಾರೆ ಎನ್ನುವುದು ಗೊತ್ತಿದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಸದ್ಯ ರಶ್ಮಿಕಾ ಮಾತ್ರ ಮಾಲ್ಡೀವ್ಸ್‌ನಿಂದ ಫೋಟೋ ಶೇರ್ ಮಾಡಿದ್ದಾರೆ. ವಿಜಯ್ ದೇವರಕೊಂಡ ಯಾವುದೇ ಫೋಟೋ ಹಂಚಿಕೊಂಡಿಲ್ಲ. ಒಂದು ವೇಳೆ ವಿಜಯ್ ಕೂಡ ಮಾಲ್ಡೀವ್ಸ್ ನಿಂದ ಪೋಟೋ ಶೇರ್ ಮಾಡಿದ್ರೆ ಇಬ್ಬರೂ ಒಟ್ಟಿಗೆ ಮಾಲ್ಡೀವ್ಸ್ ಪ್ರವಾಸ ಎಂಜಾಯ್ ಮಾಡುತ್ತಿರುವ ವದಂತಿ ನಿಜವಾಗುವ ಜೊತೆಗೆ ಇಬ್ಬರ ನಡುವಿನ ಡೇಟಿಂಗ್ ಸುದ್ದಿ ಕೂಡ ಅಧಿಕೃತ ಆಗಲಿದೆ.
ಏರ್ಪೋಟ್‌ನಲ್ಲಿ ವಿಜಯ್ ಜೊತೆ ರಶ್ಮಿಕಾ; ಮಾಲ್ಡೀವ್ಸ್‌ಗೆ ಹಾರಿದ್ರಾ ಸೆನ್ಸೇಷನ್ ಜೋಡಿ?
ಅಂದಹಾಗೆ ರಶ್ಮಿಕಾ ಪೋಟೋ ಶೇರ್ ಮಾಡಿ, 'ಹಾಯ್, ಲವ್ಸ್' ಎಂದು ಕ್ಯಾಕ್ಷನ್ ನೀಡಿದ್ದಾರೆ. ಅಂದಹಾಗೆ ರಶ್ಮಿಕಾ ನಟನೆಯ ಮೊದಲ ಹಿಂದಿ ಸಿನಿಮಾ ಗುಡ್ ಬೈ ರಿಲೀಸ್ ಆಗಿದೆ. ಅಕ್ಟೋಬರ್ 7ರಂದು ಗುಡ್ ಬೈ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆದ ದಿನವೇ ರಶ್ಮಿಕಾ ಮಾಲ್ಡೀವ್ಸ್ ಕಡೆ ಮುಖ ಮಾಡಿದ್ದಾರೆ. ಗುಡ್ ಬೈ ಸಿನಿಮಾದ ಪ್ರಮೋಷನ್ ಮುಗಿಸಿ ರಶ್ಮಿಕಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿ ಹಾಯಾಗಿ ಇದ್ದಾರೆ. ಇನ್ನು ರಶ್ಮಿಕಾ ಬಳಿ ಕೈ ತುಂಬಾ ಸಿನಿಮಾಗಳಿವೆ. ಹಿಂದಿಯಲ್ಲಿ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣ ಮುದಿಸಿದ್ದು ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ರಣಬೀರ್ ಕಪೂರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಪುಷ್ಪ-2 ಹಾಗೂ ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.
ವಿಜಯ್ ದೇವರಕೊಂಡ ಜೊತೆ ಲಿಪ್‌ಲಾಕ್ ಮಾಡಿ ಟ್ರೋಲ್ ಆದಾಗ ತುಂಬಾ ಅತ್ತಿದ್ದೆ; ರಶ್ಮಿಕಾ ಮಂದಣ್ಣ
ಇತ್ತ ವಿಜಯ್ ದೇವರಕೊಂಡ ಇತ್ತೀಚಿಗಷ್ಟೆ ಲೈಗರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗುವ ಮೊದಲೇ ರಶ್ಮಿಕಾ ಜೊತೆ ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದಾರೆ ಎನ್ನಲಾಗಿದೆ.
