ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೊಲೆ ಪ್ರಕರಣವನ್ನು ಸುಪ್ರಿಂ ಕೋರ್ಟ್‌ ಸಿಬಿಐಗೆ ಹಸ್ತಾಂತರಿಸಿದ ಬೆನ್ನಲ್ಲೇ ಇದೀಗ ನಟಿ ರಿಯಾ ಚಕ್ರವರ್ತಿ ಫಿಲ್ಮ್ ಆಫರ್ ಕಳೆದುಕೊಂಡಿದ್ದಾರೆ.

ಚಿಕನ್ ಬಿರಿಯಾನಿ ಹಾಗೂ ಯೇ ಹೇ ಇಂಡಿಯಾ ಖ್ಯಾತಿಯ ಲೋಮ್ ಹರ್ಷ ತಮ್ಮ ಪ್ರಾಜೆಕ್ಟ್‌ನಿಂದ ರಿಯಾ ಚಕ್ರವರ್ತಿಯನ್ನು ಕೈಬಿಟ್ಟಿದ್ದಾರೆ. ನಟ ಸುಶಾಂತ್ ಅಭಿಮಾನಿಗಳ ಭಾವನೆಗಳಿಗೆ ನೋವು ಮಾಡುವುದು ನನಗೆ ಇಷ್ಟವಿಲ್ಲ ಎಂದಿರುವ ಹರ್ಷ ರಿಯಾಳನ್ನು ಕೈಬಿಡುತ್ತಿರುವುದಾಗಿ ಹೇಳಿದ್ದಾರೆ.

ಸುಶಾಂತ್ ಕೇಸ್ CBIಗೆ: ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್ ಸ್ಟಾರ್ಸ್‌

ಈಗಾಗಲೇ ಪ್ರಾಜೆಕ್ಟ್ ಸ್ಥಗಿತವಾಗಿದ್ದು, ದಿನ ಕಳೆದಂತೆ ರಿಯಾ ಸುತ್ತ ವಿವಾದಗಳು ಹುಟ್ಟುತ್ತಲೇ ಇರುವ ನಿಟ್ಟಿನಲ್ಲಿ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಜೂನ್ 14ರಂದು ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಸುಶಾಂತ್ ತಂದೆ ಕೆಕೆ ಸಿಂಗ್ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರಿಂ ಕೋರ್ಟ್‌ ತೀರ್ಪು ನೀಡಿದೆ. ನಟಿ ರಿಯಾ ಚಕ್ರವರ್ತಿ ಸುಶಾಂತ್ ಸಾವಿನ ತನಿಖೆಯನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ರಿಯಾ ಚಕ್ರವರ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ನೀಡಿದೆ. ಸುಶಾಂತ್ ಸಾವಿಗೆ ಸಂಬಂಧಿಸಿ ಮುಂಬೈ ಪೊಲೀಸರು ಕಲೆ ಹಾಕಿದ ಎಲ್ಲ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ.