ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿರುವ ಕೆಜಿಎಫ್-2 ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ. ಮೂಲಗಳ ಪ್ರಕಾರ ಕೆಜಿಎಫ್-2 ಒಟಿಟಿ ಬಿಡುಗಡೆ ದಿನಾಂಕ ಲಾಕ್ ಆಗಿದೆ ಎನ್ನಲಾಗಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿಗಳ ಪ್ರಕಾರ ಕೆಜಿಎಫ್-2 ಮೇ ತಿಂಗಳ 27ರಂದು ಒಟಿಟಿಗೆ(OTT) ಬರ್ತಿದೆ ಎನ್ನಲಾಗಿದೆ.

ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್-2 (KGF 2)ಬ್ಲಾಕ್ ಬಸ್ಟರ್ ಕೆಜಿಎಫ್-2 ಸಿನಿಮಾ ಭಾರತೀಯ ಸಿನಿಮಾರಂಗದಲ್ಲಿ ಇತಿಹಾಸ ಬರೆದಿದೆ. ಎಲ್ಲಾ ದಾಖಲೆಗಳನ್ನು ದೂಳಿಪಟ ಮಾಡಿರುವ ಕೆಜಿಎಫ್-2 ಸಿನಿಮಾ ಬಿಡುಗಡೆಯಾಗಿ ವಾರ ಕಳೆದರೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಪ್ರೇಕ್ಷಕರು ರಾಕಿ ಭಾಯ್ ನೋಡಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲಿ ದಾಖಲೆ ಕಲೆಕ್ಷನ್ ಮಾಡುವ ಮೂಲಕ ಹಿಂದಿ ಮಂದಿಯನ್ನು ಬೆಚ್ಚಿಬೀಳಿಸಿರುವ ಕೆಜಿಎಫ್-2 ಬಿಡುಗಡೆಯಾಗಿ 7 ದಿನಗಳಲ್ಲಿ ಬರೋಬ್ಬರಿ 250 ಕೋಟಿ ಕಲೆಕ್ಷನ್ ಮಾಡಿದೆ. ಈ ವಾರಾಂತ್ಯದಲ್ಲಿ ಕೆಜಿಎಫ್-2 300 ಕೋಟಿ ರೂಪಾಯಿ ಕ್ಲಬ್ ಸೇರುವುದು ಖಚಿತವಾಗಿದೆ.

ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿರುವ ಕೆಜಿಎಫ್-2 ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ. ಮೂಲಗಳ ಪ್ರಕಾರ ಕೆಜಿಎಫ್-2 ಒಟಿಟಿ ಬಿಡುಗಡೆ ದಿನಾಂಕ ಲಾಕ್ ಆಗಿದೆ ಎನ್ನಲಾಗಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿಗಳ ಪ್ರಕಾರ ಕೆಜಿಎಫ್-2 ಮೇ ತಿಂಗಳ 27ರಂದು ಒಟಿಟಿಗೆ(OTT) ಬರ್ತಿದೆ ಎನ್ನಲಾಗಿದೆ. ಆದರೆ ಸಿನಿಮಾತಂಡ ಇನ್ನು ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಅಂದಹಾಗೆ ಕೆಜಿಎಫ್-2 ಒಟಿಟಿಗಳ ದೈತ್ಯ ಅಮೆಜಾನ್ ಪ್ರೈಮ್ ನಲ್ಲಿ(Amazon Prime) ಸ್ಟ್ರೀಮಿಂಗ್ ಆಗುತ್ತಿದೆ. ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಂಡಿದ್ದ ಅಭಿಮಾನಿಗಳು ಇದೀಗ ಒಟಿಟಿಯಲ್ಲಿ ನೋಡಿ ಎಂಜಾಯ್ ಮಾಡಲು ತಯಾರಾಗಿದ್ದಾರೆ.

ಅಂದಹಾಗೆ ಕೆಜಿಎಫ್-2 ಈಗಾಗಲೇ ಎಲ್ಲಾ ದಾಖಲೆಗಳನ್ನು ಬ್ರೇಕ್ ಮಾಡಿ ಮುನ್ನುಗ್ಗುತ್ತಿದೆ. ಬಾಹುಬಲಿ-2, ಆರ್ ಆರ್ ಆರ್ ಕಲೆಕ್ಷನ್ ದಾಖಲೆಯನ್ನು ಕೆಜಿಎಫ್-2 ಮುರಿದು ನಂಬರ್ 1 ಆಗಿ ಅಬ್ಬರಿಸುತ್ತಿದೆ. 1000 ಕೋಟಿ ರೂಪಾಯಿ ನತ್ತ ದಾಪುಗಾಲಿಟ್ಟಿರುವ ಕೆಜಿಎಫ್-2 ಸದ್ಯದಲ್ಲೇ 1000 ಕೋಟಿ ಕ್ಲಬ್ ಸೇರುವ ಮೂಲಕ ಮತ್ತೊಂದು ದಾಖಲೆ ಬರೆಯಲಿದೆ. ಕನ್ನಡ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಆಮೀರ್ ಖಾನ್ 'ದಂಗಲ್' ಸಿನಿಮಾದ ಕಲೆಕ್ಷನ್ ಬ್ರೇಕ್ ಮಾಡಿದ 'ಕೆಜಿಎಫ್-2'

ಸದ್ಯ ವಿಶ್ವದಾದ್ಯಂತ ಕೆಜಿಎಫ್-2 ಸಿನಿಮಾದೆ ಸದ್ದು. ಎಲ್ಲಾ ಭಾಷೆಯಲ್ಲೂ ಕೆಜಿಎಫ್-2 ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಮಾನಿಗಳ ಜೊತೆಗೆ ಸಿನಿಮಾ ಗಣ್ಯರು ಸಹ ಕೆಜಿಎಫ್-2 ನೋಡಿ ಹಾಡಿಹೊಗಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಂತೂ ಕೆಜಿಎಫ್2 ಸಿನಿಮಾದ್ದೇ ಸದ್ದು. ಸಿನಿಮಾ ಬಿಡುಗಡೆಯಾಗಿ ವಾರ ಕಳೆದರು ಟ್ವಿಟ್ಟರ್ ನಲ್ಲಿ ಯಶ್ ಮತ್ತು ಕೆಜಿಎಫ್2 ಹೆಸರು ಟ್ರೆಂಡಿಂಗ್ ನಲ್ಲಿದೆ.

Firing: ಕೆಜಿಎಫ್ 2 ಪ್ರದರ್ಶನದ ವೇಳೆ ಶೂಟೌಟ್‌: ಹಾವೇರಿಯಲ್ಲಿ ತಲ್ಲಣ..!

ಪ್ರಶಾಂತ್ ನೀಲ್ ನಿರ್ದೇಶನ, ಯಶ್ ಅಭಿನಯ, ಸಂಜಯ್ ದತ್ ಆರ್ಭಟ, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಅರ್ಚನಾ ಜೋಯಿಶ್, ಪ್ರಕಾಶ್ ರೈ ಹೀಗೆ ಪ್ರತಿಯೊಂದು ಪಾತ್ರಗಳು ಅಭಿಮಾನಿಗಳ ಹೃದಯ ಗೆದ್ದಿದೆ. ಅದ್ದೂರಿ ಮೇಕಿಂಗ್, ಆಕ್ಷನ್, ಸಂಗೀತ, ಮಾಸ್ ಎಲಿಮೆಂಟ್, ತಾಯಿ ಸೆಂಟಿಮೆಂಟ್ ಪ್ರತಿಯೊಂದು ವಿಭಾಗದಲ್ಲೂ ಕೆಜಿಎಫ್-2 ಅಭಿಮಾನಿಗಳ ಹೃದಯ ಗೆದ್ದಿದೆ. ವಾರದ ಬಳಿಕವೂ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದಾರೆ.