ಕನ್ನಡ ಮಾತನಾಡಿ ಕನ್ನಡಿಗರ ಹೃದಯ ಗೆದ್ದ ಸಾಯಿ ಪಲ್ಲವಿ; ವಿಡಿಯೋ ವೈರಲ್

ಸಾಯಿ ಪಲ್ಲವಿ ನಟನೆಯ ಹೊಸ ಸಿನಿಮಾ ಗಾರ್ಗಿ(Gargi) ಮೂಲಕ ಕನ್ನಡಿಗರ ಮುಂದೆ ಬರ್ತಿದ್ದಾರೆ. ಸಾಯಿ ಪಲ್ಲವಿ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ. ಈ ಸಿನಿಮಾ ಕನ್ನಡ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ಕನ್ನಡದಲ್ಲಿ ಅವರೇ ಡಬ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

 

Sai Pallavi dubs her own lines in Kannada for her next film Gargi sgk

ಬಹುಭಾಷ ನಟಿ, ನ್ಯಾಚುರಲ್ ಸ್ಟಾರ್ ಸಾಯಿ ಪಲ್ಲವಿ(Sai Pallavi) ಇತ್ತೀಚಿಗಷ್ಟೆ ಹುಟ್ಟುಹಬ್ಬ(Birthday) ಆಚರಿಸಿಕೊಂಡಿದ್ದಾರೆ. ಸೌತ್ ಸ್ಟಾರ್ ಸಾಯಿ ಪಲ್ಲವಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರು ವಿಶ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಸಾಯಿ ಪಲ್ಲವಿ ಸಹಜ ಸೌಂದರ್ಯದ ಜೊತೆಗೆ ಪ್ರತಿಭೆಯಿಂದ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಸಾಯಿ ಪಲ್ಲವಿ ಸರಳತೆಗೆ ವಿಶ್ವಾದಾದ್ಯಂತ ಅಭಿಮಾನಿಗಳಿದ್ದಾರೆ. ಕನ್ನಡಿಗರು ಸಹ ಸಾಯಿ ಪಲ್ಲವಿ ನಟನೆಗೆ ಫಿದಾ ಆಗಿದ್ದಾರೆ.

ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ನಟಿಸಿರುವ ಸಾಯಿ ಪಲ್ಲವಿ ಕನ್ನಡದಲ್ಲಿ ಇನ್ನು ಬಣ್ಣ ಹಚ್ಚಿಲ್ಲ. ಆದರೀಗ ಹೊಸ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆಯೂ ಬರಲು ಸಜ್ಜಾಗಿದ್ದಾರೆ. ಹೌದು, ಸಾಯಿ ಪಲ್ಲವಿ ನಟನೆಯ ಹೊಸ ಸಿನಿಮಾ ಗಾರ್ಗಿ(Gargi) ಮೂಲಕ ಕನ್ನಡಿಗರ ಮುಂದೆ ಬರ್ತಿದ್ದಾರೆ. ಸಾಯಿ ಪಲ್ಲವಿ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ. ಈ ಸಿನಿಮಾ ಕನ್ನಡ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ಕನ್ನಡದಲ್ಲಿ ಅವರೇ ಡಬ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಸಾಯಿ ಪಲ್ಲವಿ ಕನ್ನಡದಲ್ಲಿ ಡಬ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡದಲ್ಲಿ ಮಾತನಾಡುವ ಮೂಲಕ ಸಾಯಿ ಪಲ್ಲವಿ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನೇಕ ಕಲಾವಿದರು ಕನ್ನಡ ಬಂದರೂ ಕನ್ನಡದಲ್ಲಿ ಡಬ್ ಮಾಡಲು ಹಿಂದೇಟು ಹಾಕುತ್ತಾರೆ. ಆದರೆ ಸಾಯಿ ಪಲ್ಲವಿ ಕನ್ನಡ ಕಲಿತು ಡಬ್ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಇತ್ತೀಚಿಗೆ ಕನ್ನಡಕ್ಕೆ ಡಬ್ ಆದ ಸಿನಿಮಾಗಳಲ್ಲಿ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಕನ್ನಡದಲ್ಲಿ ಡಬ್ ಮಾಡಿ ಗಮನ ಸೆಳೆದಿದ್ದರು. ಇದೀಗ ಪ್ರೇಮ್ ಬ್ಯೂಟಿ ಕೂಡ ಕನ್ನಡಿಗರಿಗೆ ಮತ್ತಷ್ಟು ಹತ್ತಿರ ಆಗಿದ್ದಾರೆ.

Sai Pallavi; ಹುಟ್ಟುಹಬ್ಬದ ದಿನ ಕೆಂಪು ಸೀರೆಯುಟ್ಟು ಬ್ಯಾಗ್ ಹಿಡಿದು ಹೊರಟ 'ಪ್ರೇಮಂ' ಸುಂದರಿ

ಗಾರ್ಗಿ ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು ಅದನ್ನು ಶೇರ್ ಮಾಡಿ ಚಿತ್ರದ ಬಗ್ಗೆ ನಿರೀಕ್ಷೆ ಇರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಸಾಯಿ ಪಲ್ಲವಿ ಬಹಿರಂಗ ಪಡಿಸಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡಬೇಕು ಎಂದು ತಿಂಗಳುಗಳಿಂದ ನಾನು ಕಾದಿದ್ದೆ. ಕೊನೆಗೂ ನನ್ನ ತಂಡ ಹುಟ್ಟುಹಬ್ಬದ ದಿನ ರಿಲೀಸ್ ಮಾಡಿದೆ. ಗಾರ್ಗಿ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬರೆದು ಫಸ್ಟ್ ಲುಕ್ ಶೇರ್ ಮಾಡಿದ್ದಾರೆ.

ಕನ್ನಡದಲ್ಲಿ ಡಬ್ ಮಾಡಲು ಸಾಯಿ ಪಲ್ಲವಿ ಹಲವಾರು ಟೇಕ್ ತೆಗೆದುಕೊಂಡಿದ್ದಾರೆ. ಪದಗಳನ್ನು ಉಚ್ಚರಿಸಲು ಸರಿಯಾಗಿ ಕಲಿತು ಕೊನೆಗೂ ಕನ್ನಡದಲ್ಲಿ ಡಬ್ ಮಾಡಿ ಮನ ಗೆದ್ದಿದ್ದಾರೆ. ಈ ಮೇಕಿಂಗ್ ವಿಡಿಯೋ ವೈರಲ್ ಆಗಿದೆ. ಪೋಸ್ಟರ್ ನಲ್ಲಿ ಸಾಯಿ ಪಲ್ಲವಿ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಉದ್ದನೆಯ ಬ್ಯಾಗ್ ಹಾಕಿದ್ದಾರೆ. ಬ್ಯಾಕ್ ಡ್ರಾಪ್ ನಲ್ಲಿ ನ್ಯಾಯದೇವತೆ ಫೋಟೋ ಇದೆ. ಈ ಪೋಸ್ಟರ್ ನೋಡಿದ್ರೆ ಗೊತ್ತಾಗುತ್ತದೆ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ನ್ಯಾಯಕ್ಕಾಗಿ ಹೋರಾಡುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಹುಟ್ಟುಹಬ್ಬದ ಪ್ರಯುಕ್ತ ಸಾಯಿ ಪಲ್ಲವಿ ನಟಿಸಿರುವ ವಿರಾಟ ಪರ್ವಂ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಕೆಂಪು ಸೀರೆ ಧರಿಸಿ ಬ್ಯಾಗ್ ಹಿಡಿದು ಹೊರಟಿರುವ ಸಾಯಿ ಪಲ್ಲವಿ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಈ ಸಿನಿಮಾ ಜುಲೈ 1ರಂದು ತೆರೆಗೆ ಬಂದಿದೆ.

ಗಾಸಿಪ್ ಮಾಡೋರಿಗೆ ಕಾಲು ತೋರಿಸಿದ್ರಾ ಸಾಯಿ ಪಲ್ಲವಿ? ಫೋಟೋ ವೈರಲ್

 

ಮದುವೆ ವಿಚಾರ ವೈರಲ್

ಸದ್ಯ ಸಾಯಿ ಪಲ್ಲವಿ ವಿರಾಟ ಪರ್ವಂ(Virata Parvam) ಸಿನಿಮಾ ಬಳಿಕ ಯಾವುದೇ ಸಿನಿಮಾಗ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಅನೇಕ ಸಿನಿಮಾಗಳ ಆಫರ್ ಬರುತ್ತಿದ್ದರೂ ಸಾಯಿ ಪಲ್ಲಿ ನೋ ಎನ್ನುತ್ತಿದ್ದಾರಂತೆ. ಹಾಗಾಗಿ ಮದುವೆ ತಯಾರಿಯಲ್ಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸದ್ಯ ಸಿನಿಮಾ ಕಡೆ ಗಮನ ಹರಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಯಿ ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಎನ್ನಲಾಗುತ್ತಿತ್ತು. ಆದರೆ ಹೊಸ ಸಿನಿಮಾದ ಪೋಸ್ಟರ್ ರಿವೀಲ್ ಮಾಡುವ ಮೂಲಕ ಗಾಸಿಪಿಗರ ಬಾಯಿ ಮುಚ್ಚಿಸಿದ್ದಾರೆ.

 

Latest Videos
Follow Us:
Download App:
  • android
  • ios