ನಾಲ್ಕು ಮಕ್ಕಳ ಜೊತೆ ಸೈಫ್ ಅಲಿ ಫೋಟೋ ಶೇರ್ ಮಾಡಿದ್ರೆ ಹೀಗೆಲ್ಲಾ ಕಮೆಂಟ್ ಹಾಕೋದಾ?
ಸೈಫ್ ಅಲಿ ಖಾನ್ ಅವರು ಹಾಲಿ ಪತ್ನಿ ಕರೀನಾ ಕಪೂರ್ ಮತ್ತು ನಾಲ್ವರು ಮಕ್ಕಳ ಜೊತೆ ರಕ್ಷಾ ಬಂಧನಕ್ಕೆ ಕ್ಯೂಟ್ ಫೋಟೋ ಶೇರ್ ಮಾಡಿದ್ದಾರೆ. ಆದರೆ ಕಮೆಂಟಿಗರು ಇದನ್ನು ಸಕತ್ ಟ್ರೋಲ್ ಮಾಡುತ್ತಿದ್ದಾರೆ.
ಬಾಲಿವುಡ್ನ ಸದ್ಯದ ಯಶಸ್ವಿ ಜೋಡಿಗಳಲ್ಲಿ ಒಂದೆನಿಸಿದೆ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಜೋಡಿ. ಎಲ್ಲರಿಗೂ ತಿಳಿದಿರುವಂತೆ ಇದು ಸೈಫ್ ಅಲಿ ಅವರಿಗೆ ಎರಡನೆಯ ಮದುವೆ. ಅವರ ಮೊದಲ ಮದುವೆಯಾದದ್ದು ನಟಿ ಅಮೃತಾ ಸಿಂಗ್ ಅವರ ಜೊತೆಗೆ. ತಮ್ಮ ಮೊದಲ ಮದುವೆಗೆ ಬಂದಿದ್ದ ಕರೀನಾ ಕಪೂರ್ ಅವರನ್ನು ಮಗಳೇ ಎಂದು ಕರೆದಿದ್ದ ಸೈಫ್ ಅಲಿ ನಂತರ ಆಕೆಯನ್ನೇ ಮದುವೆಯಾಗಿ ಟ್ರೋಲ್ಗೂ ಒಳಗಾಗಿದ್ದಿದೆ. ಅದೇನೇ ಇದ್ದರೂ ಸದ್ಯ ಈ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಕೆಲವು ಖ್ಯಾತನಾಮ ನಟರಂತೆಯೇ ಸೈಫ್ ಅಲಿ ಕೂಡ ಇಬ್ಬರೂ ಹಿಂದೂ ಯುವತಿಯರನ್ನು ಮದುವೆಯಾಗಿ ಸಕತ್ ಸುದ್ದಿ ಮಾಡಿದವರು. ಸೈಫ್ ಅಲಿ ಖಾನ್ ಕರೀನಾರಿಗಿಂತಲೂ 10 ವರ್ಷ ದೊಡ್ಡವರು. 5 ವರ್ಷಗಳ ಕಾಲ ಲಿವ್-ಇನ್ (Live in relation) ಸಂಬಂಧದಲ್ಲಿದ್ದ ಈ ಜೋಡಿ ಕೊನೆಗೆ ಮದುವೆಯಾಗಿತ್ತು. ಅದಾಗಲೇ ಲವ್ ಜಿಹಾದ್ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಸುದ್ದಿಯೇ ಆಗಿಬಿಟ್ಟಿತ್ತು.
ನಟ ಸೈಫ್ ಅಲಿ ಇದೀಗ ತಮಗಿಂತ 10 ವರ್ಷ ಚಿಕ್ಕವರಾಗಿರುವ ನಟಿ ಕರೀನಾರನ್ನು (Kareena Kapoor) ಮದುವೆಯಾಗಿದ್ದರೆ, ಅಮೃತಾ ಸಿಂಗ್ ಅವರನ್ನು ಮದುವೆಯಾದಾಗ ಸೈಫ್ ಅವರಿಗೆ ವಯಸ್ಸು 21. ಆದರೆ ಅಮೃತಾ ಸಿಂಗ್ ಅವರಿಗೆ 32 ವರ್ಷ ವಯಸ್ಸಾಗಿತ್ತು! ಎಲ್ಲರನ್ನೂ ಎದುರು ಹಾಕಿಕೊಂಡು 12 ವರ್ಷ ಹಿರಿಯ ನಟಿಯನ್ನು ಮದುವೆಯಾಗಿದ್ದರು ಎಂದೇ ಸುದ್ದಿಯಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಹಲ್ಚಲ್ ಸೃಷ್ಟಿಸಿತ್ತು. ನಂತರ ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್ 13 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನ ಪಡೆದರು. 2004ರಲ್ಲಿ ಸೈಫ್ ಹಾಗೂ ಅಮೃತಾ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸಿದಾಗ ಸಾರಾ 10 ಮತ್ತು ಇಬ್ರಾಹಿಂ 4 ವರ್ಷ ವಯಸ್ಸಿನವರಾಗಿದ್ದರು.
ಅಮೃತಾ ಸಿಂಗ್ರನ್ನು ಗುಟ್ಟಾಗಿ ಮದ್ವೆಯಾಗಿದ್ರಾ ಕರೀನಾ ಕಪೂರ್ ಪತಿ ಸೈಫ್?
ಇದೀಗ 53 ವರ್ಷದ ಸೈಫ್ ಅಲಿ ಖಾನ್ ಅವರಿಗೆ ಅಮೃತಾ ಸಿಂಗ್ ಮತ್ತು ಕರೀನಾ ಕಪೂರ್ ಈ ಇಬ್ಬರು ಪತ್ನಿಯರಿಂದ ನಾಲ್ವರು ಮಕ್ಕಳಿದ್ದಾರೆ. ಅವರ ಹೆಸರು ಸಾರಾ ಅಲಿ ಖಾನ್ (Sara Ali Khan), ಇಬ್ರಾಹಿಂ ಅಲಿ ಖಾನ್, ತೈಮೂರು ಅಲಿ ಖಾನ್ ಹಾಗೂ ಜೆಹ್ ಅಲಿ ಖಾನ್. ತಮ್ಮ ಮೊದಲ ಪತ್ನಿಯ ಜೊತೆ ಸೈಫ್ ಸಂಪರ್ಕದಲ್ಲಿ ಇಲ್ಲದಿದ್ದರೂ ಅವರ ಮಕ್ಕಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಈ ಪೈಕಿ ಸಾರಾ ಅಲಿ ಖಾನ್ ಇತ್ತೀಚಿಗೆ ತುಂಬಾ ಸುದ್ದಿಯಲ್ಲಿರುವ ನಟಿ. ಅಮ್ಮನಂತೆ ಅಪ್ಪಟ ಹಿಂದೂ ಧರ್ಮ ಪಾಲಿಸುತ್ತಿದ್ದಾರೆ. ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಭಾರಿ ಟೀಕೆ-ಗಲಾಟೆಗಳ ನಡುವೆಯೇ ಕೇದಾರನಾಥ, ಅಮರನಾಥ ಯಾತ್ರೆಯನ್ನೂ ಮುಗಿಸಿ ಪೂಜೆ ಸಲ್ಲಿಸಿ ಬಂದಿದ್ದಾರೆ. ಇದೀಗ ಈ ಕ್ಯೂಟ್ ಫ್ಯಾಮಿಲಿಯ ಫೋಟೋ ವೈರಲ್ ಆಗಿದೆ.
ಫೋಟೋದಲ್ಲಿ ಸೈಫ್ ಅಲಿ, ಕರೀನಾ ಕಪೂರ್, ನಾಲ್ವರು ಮಕ್ಕಳು ಹಾಗೂ ಸೈಫ್ ಅಲಿಯ ಸಹೋದರರಿಯನ್ನು ನೋಡಬಹುದು. ರಕ್ಷಾ ಬಂಧನದ ನಿಮಿತ್ತ ಈ ಫೋಟೋ ಎಂದು ಹೇಳಲಾಗುತ್ತಿದೆ. ಆದರೆ ಯಾರ ಕೈಯಲ್ಲಿಯೂ ರಾಖಿ ಇಲ್ಲದೇ ಇರುವ ಕಾರಣ ಈ ಫೋಟೋ ಸಕತ್ ಟ್ರೋಲ್ಗೂ ಒಳಗಾಗುತ್ತಿವೆ. ಅಷ್ಟೇ ಅಲ್ಲದೇ, ಸುಂದರ ಫ್ಯಾಮಿಲಿ ಎಂದು ಹೇಳುವ ಬದಲು ಸೈಫ್ ಅಲಿ ಹಾಗೂ ಕರೀನಾ (Kareena Kapoor Khan) ವಿರುದ್ಧ ಟೀಕೆಗಳು ಕೇಳಿಬರುತ್ತಿವೆ. ನಾಲ್ವರು ಖಾನ್ ಮಕ್ಕಳು ಸಾಕಾಗಿದ್ಯೋ ಅಥವಾ ಇನ್ನೂ ಬರುವುದು ಇದೆಯೋ ಎಂದು ಒಬ್ಬಾತ ಪ್ರಶ್ನೆ ಮಾಡಿದರೆ, ಲವ್ ಜಿಹಾದ್ನ ಪ್ರತಿರೂಪ ಈ ಫೋಟೋ ಎನ್ನುತ್ತಿದ್ದಾರೆ. ಸಾರಾ ಅಲಿಯ ಅಮ್ಮ ಅಮೃತಾ ಸಿಂಗ್ ಇದ್ದರೆ ಈ ಫೋಟೋ ಕಂಪ್ಲೀಟ್ ಎನಿಸುತ್ತಿತ್ತು ಎಂದು ಇನ್ನೋರ್ವ ಕಮೆಂಟ್ ಮಾಡಿದ್ದಾರೆ. ಈ ಫೋಟೋಗೆ ಡಿಸ್ಲೈಕ್ ಕೊಡಬೇಕು, ಬಟನ್ ಯಾಕೆ ಇಲ್ಲ ಎಂದು ಕೆಲವರು ಕೇಳಿದ್ದಾರೆ.
ಯಾ ಅಲ್ಹಾ... ಮಹಿಳೆಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸು... ಮೆಕ್ಕಾದಲ್ಲಿ ಬಿಕ್ಕಿಬಿಕ್ಕಿ ಅತ್ತ ರಾಖಿ ಸಾವಂತ್!