ಶೂಟಿಂಗ್‌ ಸೆಟ್‌ನಲ್ಲಿ ಸಿಗರೇಟು ಸೇದುತ್ತಾ ಕುಳಿತ ಸಲ್ಮಾನ್ ಖಾನ್; ವಿಡಿಯೋ ವೈರಲ್

ಶೂಟಿಂಗ್‌ ಸೆಟ್‌ನಲ್ಲಿ ಸಿಗರೇಟು ಸೇದುತ್ತಾ ಕುಳಿತ ಸಲ್ಮಾನ್ ಖಾನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Salman Khan SMOKING a cigarette on the sets of Tiger 3 video goes viral sgk

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸದ್ಯ ಸಿಕಿ ಕಾ ಭಾಯ್ ಕಿಸಿ ಕಿ ಜಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈದ್ ಪ್ರಯುಕ್ತ ಬಂದ ಸಿಕಿ ಕಾ ಭಾಯ್ ಕಿಸಿ ಕಿ ಜಾನ್ ಸಿನಿಮಾ ನಿರೀಕ್ಷೆಯ ಸಕ್ಸಸ್ ಕಂಡಿಲ್ಲ. ಬಾಕ್ಸ್ ಆಫೀಸ್ ಕಲೆಕ್ಷನ್‌ನಲ್ಲಿ ಬ್ಯಾಡ್ ಬಾಯ್ ಸಿನಿಮಾ ಭಾರಿ ನಿರಾಸೆ ಮೂಡಿಸಿದೆ. ಭಾರಿ ನಿರೀಕ್ಷೆಯೊಂದಿಗೆ ಅದ್ದೂರಿಯಾಗಿ ತೆರೆಗೆ ಬಂದ ಈ ಸಿನಿಮಾ ಹೇಳಿಕೊಳ್ಳುವಷ್ಟು ಕಮಾಯಿ ಮಾಡಿಲ್ಲ. ಈ ನಡುವೆ ಸಲ್ಮಾನ್ ಖಾನ್ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶೂಟಿಂಗ್ ಸೆಟ್ ನಲ್ಲಿ ಸಲ್ಮಾನ್ ಖಾನ್ ಹರಟೆ ಹೊಡೆಯುತ್ತಾ ಸಿಗರೇಟು ಸಿದುತ್ತಾ ಕುಳಿತಿರುವ ವಿಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ. 

 ಈದ್ ಸಮಯದಲ್ಲಿ ಈ ವಿಡಿಯೋ ಶೇರ್ ಮಾಡಿದ್ದು ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಅಂದಹಾಗೆ ಸದ್ಯ ವೈರಲ್ ಆಗಿರುವ ವಿಡಿಯೋ ಟೈಗರ್ -3 ಸಿನಿಮಾದ್ದು ಎನ್ನಲಾಗಿದೆ. ಮನಿಶ್ ಶರ್ಮಾ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಚಿತ್ರೀಕರಣ ವೇಳೆ ಸಲ್ಮಾನ್ ಖಾನ್ ಸಿಗರೇಟು ಸೇದಿದ್ದಾರೆ. ಈ ಸಿನಿಮಾದಲ್ಲಿ ಕತ್ರಿನಾ ಕೈಫ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 

ಸಲ್ಮಾನ್ ಖಾನ್ ಸಿಗರೇಟ್ ವಿಡಿಯೋ ನೋಡಿ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಪಠಾಣ್ ಗಿಂತ ಅಣ್ಣನ ಸಿಗರೇಟು ಫೇಮಸ್ ಆಗಿದೆ ಎಂದು ಹೇಳಿದ್ದಾರೆ. ಮತ್ತೋರ್ವ ಕಾಮೆಂಟ್ ಕೆಜಿಎಫ್ ಸಿನಿಮಾದ ರಾಕಿ ಭಾಯ್ ಪಾತ್ರದ ಹಾಗೆ ಸಲ್ಮಾನ್ ಖಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. 

ಸಲ್ಮಾನ್ ಖಾನ್‌ನಿಂದ ದೂರ ಉಳಿ; ರಾಖಿ ಸಾವಂತ್‌ಗೆ ಜೀವ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್!

ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಸಿಗರೇಟು ಬಿಟ್ಟಿದ್ದರು ಎನ್ನಲಾಗಿತ್ತು. ಆರೋಗ್ಯ ಸಮಸ್ಯೆಯಿಂದ ಧೂಮಪಾನ ತ್ಯಜಿಸಿದ್ದಾರೆ ಎನ್ನಲಾಗಿತ್ತು. ಸಲ್ಮಾನ್ ಖಾನ್ ಚೈನ್ ಸ್ಮೋಕರ್ ಆಗಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಸಿಗರೇಟಿನಿಂದ ದೂರ ಇದ್ದರು ಎನ್ನಲಾಗಿತ್ತು. ಆದರೀಗ ಶೂಟಿಂಗ್ ಸೆಟ್ ನಲ್ಲಿ ಸಲ್ಮಾನ್ ಖಾನ್ ಕೈಯಲ್ಲಿ ಸಿಗರೇಟು ನೋಡಿ ಅಭಿಮಾನಿಗಳು ಅಚ್ಚರಿ ಪಡುತ್ತಿದ್ದಾರೆ.

2023ರ ನಿರೀಕ್ಷೆಯ ಸಿನಿಮಾಗಳಲ್ಲಿ ದಕ್ಷಿಣದ ಏಕೈಕ ಚಿತ್ರ; ಶಾರುಖ್, ಸಲ್ಮಾನ್ ಹಿಂದಿಕ್ಕಿದ ಅಲ್ಲು ಅರ್ಜುನ್

ಸಲ್ಮಾನ್ ಖಾನ್ ಸದ್ಯ ಟೈಗರ್ -3 ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾ ಮೂಲಕ ಸಲ್ಮಾನ್ ಖಾನ್ ಯಾವುದೇ ಸಿನಿಮಾ ಅನೌನ್ಸ್ ಮಾಡಿಲ್ಲ. ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಸದ್ಯ ಬಾಲಿವುಡ್‌ನಲ್ಲಿಅನೇಕ ಸಿನಿಮಾಗಳು ಸೋಲು ಕಾಣುತ್ತಿವೆ. ಪಠಾಣ್ ಸಿನಿಮಾ ಬಿಟ್ಟರೇ ಉಳಿದ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಕ್ಸಸ್ ಕಾಣುತ್ತಿಲ್ಲ. ಹಾಗಾಗಿ ಸಲ್ಮಾನ್ ಖಾನ್ ಕೂಡ ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಯೋಚಿಸುತ್ತಿದ್ದಾರೆ. ಯಾವುದೇ ಸಿನಿಮಾ ಒಪ್ಪಿಕೊಳ್ಳದೆ ಕೊಂಚ ಗ್ಯಾಪ್‌ನ ಬಳಿಕ ಮುಂದಿನ ಸಿನಿಮಾ ಅನೌನ್ಸ್ ಮಾಡುವ ಸಾಧ್ಯತೆ ಇದೆ. 

Latest Videos
Follow Us:
Download App:
  • android
  • ios