ಫಿಟ್ನೆಸ್ ಫ್ರೀಕ್ ಸಮಂತಾ ವರ್ಕೌಟ್ ಗೆ ಫ್ಯಾನ್ಸ್ ಫಿದಾ; ವಿಡಿಯೋ ವೈರಲ್
ಫಿಟ್ನೆಸ್ ಫ್ರೀಕ್ ಸಮಂತಾ ಹೊಸ ವರ್ಕೌಟ್ ವಿಡಿಯೋ ಹಂಚಿಕೊಂಡಿದ್ದಾರೆ. ಸ್ಟ್ರಾಂಗ್ ಬಾಡಿ ಸ್ಟ್ರಾಂಗ್ ಮನಸ್ಸು ಎಂದು ಕ್ಯಾಪ್ಷನ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ತೆಲುಗಿನ ಸ್ಟಾರ್ ನಟಿ ಸಮಂತಾ(Samantha) ಒಂದಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಕೈತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಸಮಂತಾ ಸಖತ್ ಬ್ಯುಸಿಯಾಗಿದ್ದಾರೆ. ಸಿನಿಮಾ ಕೆಲಸಗಳ ನಡುವೆಯೂ ಸಮಂತಾ ಜಿಮ್ ನಲ್ಲಿ ಬೆವರಿಳಿಸುತ್ತಿದ್ದಾರೆ. ಸಮಂತಾ ವರ್ಕೌಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪತಿ ನಾಗಚೈತನ್ಯ(Naga Chaitanya) ಅವರಿಂದ ದೂರ ಆದ ಬಳಿಕ ಸಮಂತಾ ಜೀವನ ಶೈಲಿ ಸಾಕಷ್ಟು ಬದಲಾಗಿದೆ. ಸಿನಿಮಾಗಾಗಿ ಹೆಚ್ಚು ಸಮಯ ಮೀಸಲಿಟ್ಟಿರುವ ಸಮಂತಾ ಫಿಟ್ನೆಸ್ ಕಡೆಯೂ ಅಷ್ಟೆ ಗಮನ ಹರಿಸಿದ್ದಾರೆ. ಇತ್ತೀಚಿಗಷ್ಟೆ ಸಮಂತಾ ಜಿಮ್ ನಲ್ಲಿ ಬೆವರಿಳಿಸುತ್ತಿರುವ ಹೊಸ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದು ಬರುತ್ತಿವೆ.
ವರ್ಕೌಟ್ ವಿಡಿಯೋ ಶೇರ್ ಮಾಡಿ ಅದಕ್ಕೆ ಸಮಂತಾ ಸ್ಟ್ರಾಂಗ್ ಬಾಡಿ ಸ್ಟ್ರಾಂಗ್ ಮನಸ್ಸು(Strong body, stronger mind) ಎಂದು ಕ್ಯಾಪ್ಷನ್ ನೀಡಿದ್ದಾರೆ. ಅಂದಹಾಗೆ ಸಮಂತಾ ಸಿನಿಮಾಗಳ ಆಯ್ಕೆಯ ವಿಚಾರದಲ್ಲೂ ಬದಲಾಗಿದ್ದಾರೆ. ಗ್ಲಾಮರ್ ಪಾತ್ರಗಳಿಗೆ ಮಾತ್ರ ಹೆಚ್ಚು ಒತ್ತು ನೀಡುತ್ತಿದ್ದ ಸಮಂತಾ ಇದೀಗ ಡಿ ಗ್ಲಾಮ್ ಪಾತ್ರಗಳ ಜೊತೆಗೆ ಮಾಸ್ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಆಕ್ಷನ್ ದೃಶ್ಯಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಸಮಂತಾ ಫಿಟ್ ಆಗಿರಲು ಹೆಚ್ಚು ಶ್ರಮಿಸುತ್ತಿದ್ದಾರೆ. ದಿ ಫ್ಯಾಮಿಲಿ ಮ್ಯಾನ್ ಸಿನಿಮಾದಲ್ಲಿ ಸಮಂತಾ ಹೆಚ್ಚು ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಸಮಂತಾ ಪಾತ್ರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ರೀತಿಯ ಪಾತ್ರಗಳನ್ನು ಮಾಡಲು ಫಿಟ್ ಆಗಿರಬೇಕೆಂದು ಸಮಂತಾ ವರ್ಕೌಟ್ ಕಡೆಯೂ ಅಷ್ಟೆ ಗಮನ ಹರಿಸಿದ್ದಾರೆ.
ವಿಚ್ಛೇದನದ ಬಳಿಕ ಮೊದಲ ಬಾರಿಗೆ ಮಾಜಿ ಪತಿಯ ಫೋಟೋ ಶೇರ್ ಮಾಡಿದ ಸಮಂತಾ
ಸಮಂತಾ ಸದ್ಯ ಸಾಲು ಸಾಲು ಸಿನಿಮಾಳಲ್ಲಿ ಬ್ಯುಸಿಯಾಗಿದ್ದಾರೆ. ಶಾಕುಂತಲಂ ಸಿನಿಮಾ ಚಿತ್ರೀಕರಣ ಮುಗಿಸಿರುವ ಸಮಂತಾ ಯಶೋಧ, ಆರೆಂಜ್ ಮೆಂಟ್ಸ್ ಆಫ್ ಲವ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ಕಾದು ವಾಕುಲ ರೆಂಡು ಕಾದಲ್ ಚಿತ್ರೀಕರಣ ಮುಗಿಸಿದ್ದು ಏಪ್ರಿಲ್ 28ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ. ಇನ್ನು ಯಶೋಧ ಸಿನಿಮಾದಲ್ಲೂ ಸಮಂತಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಉನ್ನಿ ಮುಕುಂದನ್, ವರಲಕ್ಷ್ಮೀ ಶರತ್ ಕುಮಾರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲೂ ಸಮಂತಾ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಮಂತಾ ಆಕ್ಷನ್ ದೃಶ್ಯಕ್ಕೆ ಹಾಲಿವುಡ್ ಸ್ಟಂಟ್ ಮಾಸ್ಟರ್ ನಿರ್ದೇಶನ ಮಾಡುತ್ತಿದ್ದಾರೆ.
ಸಮಂತಾ ಲೈಫ್‌ನಲ್ಲಿ ಹ್ಯಾಪಿಯಾಗಿರೋಕೆ ಏನ್ ಮಾಡ್ತಾರೆ ?
ದಕ್ಷಿಣ ಭಾರತೀಯ ಸಿನಿಮಾಗಳ ಜೊತೆಗೆ ಸಮಂತಾ ಬಾಲಿವುಡ್ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ದಿ ಫ್ಯಾಮಿಲಿ ಮ್ಯಾನ್ ನಿರ್ದೇಶಕರಾದ ರಾಜ್ ಮತ್ತು ಡಿಕೆ ಜೊತೆ ಮತ್ತೆ ಕೆಲಸ ಮಾಡುತ್ತಿದ್ದಾರೆ. ಸಿಟಾಡೆಲ್ ಎನ್ನುವ ವೆಬ್ ಸರಣಿಯಲ್ಲಿ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಈ ಸರಣಿಯಲ್ಲಿ ಬಾಲಿವುಡ್ ಸ್ಟಾರ್ ನಟ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ದಿ ಫ್ಯಾಮಿಲಿ ಮ್ಯಾನ್ ಸೂಪರ್ ಸಕ್ಸಸ್ ಬಳಿಕ ಸಮಂತಾ ಪುಷ್ಪ ಸಿನಿಮಾದ ಐಟಂ ಹಾಡಿನಲ್ಲಿ ಕಾಣಿಸಿಕೊಂಡು ಮತ್ತೆ ಸದ್ದು ಮಾಡಿದರು. ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದ ಹಾಡು ದೊಡ್ಡ ಮಟ್ಟದಲ್ಲಿ ಖ್ಯಾತಿಗಳಿಸಿದೆ. ಈ ಹಾಡು ವಿಶ್ವದ ನಂಬರ್ ಒನ್ ಟ್ರೆಂಡಿಂಗ್ ನಲ್ಲಿತ್ತು. ಇದೀಗ ಸಮಂತಾ, ವಿಘ್ನೇಶ್ ಶಿವನ್ ನಿರ್ದೇಶನದ ಹೊಸ ಸಿನಿಮಾದ ಹಾಡಿನ ಮೂಲಕ ಮಿಂಚುತ್ತಿದ್ದಾರೆ. ಈ ಹಾಡಿನಲ್ಲಿ ಸಮಂತಾ ಮತ್ತೆ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಯುವಕರ ನಿದ್ದೆಗೆಡಿಸಿದ್ದಾರೆ.