ಬಿಡುಗಡೆಗೂ ಮೊದಲೇ ವಿಕ್ರಾಂತ್ ರೋಣ ಭರ್ಜರಿ ಕಮಾಯಿ ಮಾಡಲು ಶುರು ಮಾಡಿದೆ. ಈಗಾಗಲೇ ವಿಕ್ರಾಂತ್ ರೋಣ ಸಿನಿಮಾದ ಓವರ್‌ಸೀಸ್ ರೈಟ್ಸ್(Overseas Rights Sold) ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಸುದ್ದಿ ಬಹಿರಂಗವಾಗಿದೆ. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಸದ್ಯ ವಿಕ್ರಾಂತ್ ರೋಣ(Vikrant Rona) ಸಿನಿಮಾ ಬಿಡುಗಡೆ ತಯಾರಿಯಲ್ಲಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಬಹಿರಂಗವಾಗಿದೆ. ಹೌದು, ಸಿನಿಮಾ ಬಿಡುಗಡೆಗೂ ಮೊದಲೇ ವಿಕ್ರಾಂತ್ ರೋಣ ಭರ್ಜರಿ ಕಮಾಯಿ ಮಾಡಲು ಶುರು ಮಾಡಿದೆ. ಈಗಾಗಲೇ ವಿಕ್ರಾಂತ್ ರೋಣ ಸಿನಿಮಾದ ಓವರ್‌ಸೀಸ್ ರೈಟ್ಸ್(Overseas Rights Sold) ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಸುದ್ದಿ ಬಹಿರಂಗವಾಗಿದೆ.

ಒನ್ ಟ್ವೆಂಟಿ 8 ಮಧ್ಯಮವು ಸಾಗರೋತ್ತರ ಮಾರುಕಟ್ಟೆಯ ರೈಟ್ಸ್ ಖರೀದಿ ಮಾಡಿದೆ. ಭಾರಿ ಮೊತ್ತಕ್ಕೆ ಸಿನಿಮಾದ ರೈಟ್ಸ್ ಸೇಲ್ ಆಗಿದ್ದು ಸಿನಿಮಾತಂಡ ಫುಲ್ ಖುಷ್ ಆಗಿದೆ. ಈ ಬಗ್ಗೆ ಆಂಗ್ಲ ಮಾಧ್ಯಮಕ್ಕೆ ಪ್ರತಿಕ್ರಿಯೇ ನೀಡಿರುವ ನಿರ್ಮಾಪಕ ಜಾಕ್ ಮಂಜು, ಚಿತ್ರದ ವಿಷಯವು ಸಾರ್ವತ್ರಿಕವಾಗಿದೆ. ಓವರ್ ಸೀಸ್ ರೈಟ್ಸ್ ಮಾರಾಟ ವಾಗಿರುವುದು ತುಂಬಾ ಸಂತೋಷವಾಗಿದೆ. ಚಿತ್ರದ ಬಗ್ಗೆ ಉಳಿದ ವಿವರಗಳು ಆದಷ್ಟು ಬೇಗ ನೀಡುತ್ತೇವೆ. ಇದು ಕನ್ನಡ ಚಿತ್ರವೊಂದಕ್ಕೆ ಸಿಕ್ಕಿದ ಅತ್ಯಧಿಕ ಬೆಲೆಯಾಗಿದೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಸಿನಿಮಾದ ವಿದೇಶಿ ಹಕ್ಕು 1.3 ಮಿಲಿಯನ್ ಡಾಲರ್‌ಗೆ ಮಾರಾಟವಾಗಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಅಂದರೆ 10 ಕೋಟಿ ರೂಪಾಯಿ ಎನ್ನಲಾಗಿದೆ. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ 3ಡಿಯಲ್ಲಿ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾತಂಡ ಪ್ರಚಾರಕಾರ್ಯಕ್ಕೆ ಸಿದ್ಧತೆ ನಡೆಸಿದ್ದು ಸದ್ಯದಲ್ಲೇ ದೇಶದಾದ್ಯಂತ ಪ್ರಚಾರ ಕಾರ್ಯ ನಡೆಸಲಿದೆ.

ಸುದೀಪ್ 'ವಿಕ್ರಾಂತ್ ರೋಣ' Next Level ಸಿನಿಮಾವೆಂದು ಹಾಡಿಹೊಗಳಿದ RGV

ಅಂದಹಾಗೆ ವಿಕ್ರಾಂತ್ ರೋಣ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಸಿನಿಮಾದ ಬಗ್ಗೆ ಹೇಳುವುದಾದರೆ ಚಿತ್ರದಲ್ಲಿ ಕಿಚ್ಚ ಸುದೀಪ್ ನಾಯಕನಾಗಿ ಮಿಂಚಿದ್ರೆ, ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದಿದೆ.

'ವಿಕ್ರಾಂತ್ ರೋಣ' ಟೀಸರ್ ಡೈಲಾಗ್‌ನಲ್ಲಿ RCB ತಂಡದ ಗ್ಲೆನ್ ಮ್ಯಾಕ್ಸ್ವೆಲ್ ..!

ಚಿತ್ರದ ಮತ್ತೊಂದು ವಿಶೇಷ ಎಂದರೆ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಲುಕ್ ಈಗಾಗಲೇ ವೈರಲ್ ಆಗಿದೆ. ಕಿಚ್ಚ ಮತ್ತು ಜಾಕ್ವೆಲಿನ್ ಕಾಂಬಿನೇಷನ್ ಹಾಡು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇನ್ನು ಚಿತ್ರಕ್ಕೆ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.