Asianet Suvarna News Asianet Suvarna News

'ಪಠಾಣ್' ಬಾಕ್ಸ್‌ಆಫೀಸ್ ಲೆಕ್ಕಾಚಾರ; ಶಾರುಖ್ ನಟನೆಯ 2ನೇ ಅತೀ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಲಿದೆಯಂತೆ

ಶಾರುಖ್ ಖಾನ್ ನಟನೆಯ ಬಹುನಿರೀಕ್ಷೆಯ ಪಠಾಣ್ ಸಿನಿಮಾ ಮೊದಲ ದಿನ 40 ಕೋಟಿ ರೂಪಾಯಿ ಕಲೆಕ್ಷನ್ ಮಾಡಬಹುದು ಎಂದು ಅಂದಾಜು ಮಾಡಲಾಗಿದೆ. 

Shahrukh Khan starrer Pathan Box Office Estimate Day 1: Film likely to open with more than Rs 40 crore on Day 1 sgk
Author
First Published Jan 19, 2023, 2:40 PM IST

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಶಾರುಖ್ ಅನೇಕ ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಶಾರುಖ್ ಖಾನ್ ಅವರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಪಠಾಣ್ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈಗಾಗಲೇ  ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಪಠಾಣ್ ತಂಡ ಮುಂಗಡ ಟಿಕೆಟ್ ಬುಕ್ಕಿಂಗ್ ಡೇಟ್ ಅನೌನ್ಸ್ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದೆ. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡು ರಿಲೀಸ್ ಆದಮೇಲಿನಿಂದನೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ವಿವಾದದ ಜೊತೆಗೆ ಪಠಾಣ್ ಟ್ರೈಲರ್ ಮತ್ತು ಹಾಡುಗಳನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. 

ಸದ್ಯ ಭಾರಿ ನಿರೀಕ್ಷೆಯ ಸಿನಿಮಾದ ಮುಂಗಡ ಬುಕ್ಕಿಂಗ್ ಜನವರಿ 20ರಿಂದ ಓಪನ್ ಆಗುತ್ತಿದೆ. ಈಗಾಗಲೇ ಮುಂಗಡ ಬುಕ್ಕಿಂಗ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಟಿಕೆಟ್ ಧರ ಕೂಡ ಗಗನಕ್ಕೇರಿದೆ. ಈ ನಡುವೆ ಪಠಾಣ್ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಕುತೂಹಲ ಹೆಚ್ಚಿಸಿದೆ. ಸಿನಿ ಪಂಡಿತರ ಲೆಕ್ಕಾಚಾರದ ಪ್ರಕಾರ ಪಠಾಣ್ ಸಿನಿಮಾ ಮೊದಲ ದಿನ 39 ರಿಂದ 41 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ ಎಂದು ಲೆಕ್ಕಾಚಾರ ಮಾಡಿದ್ದಾರೆ. ಇದು ಶಾರುಖ್ ನಟನೆಯ ಎರಡೇ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಲಿದೆ ಎಂದು ಅಂದಾಜು ಮಾಡಲಾಗಿದೆ. 

Pathaan Trailer; ದುಬೈನಲ್ಲಿ ಶಾರುಖ್ ಸಿನಿಮಾ ಪ್ರಚಾರ; ಬುರ್ಜ್ ಖಲೀಫ ಮೇಲೆ ರಾರಾಜಿಸಿದ ಪಠಾಣ್ ಟ್ರೈಲರ್

ಶಾರುಖ್ ನಟನೆಯ ಹ್ಯಾಪಿ ನ್ಯೂ ಇಯರ್ ಸಿನಿಮಾ 44.97 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಪಠಾಣ್, ಹ್ಯಾಪಿ ನ್ಯೂ ಇಯರ್ ಸಿನಿಮಾದ ಕಲೆಕ್ಷನ್  ಬೀಟ್ ಮಾಡಲ್ಲ ಎನ್ನಲಾಗುತ್ತಿದೆ. ಆದರೆ ಉಳಿದ ಸಿನಿಮಾಗಳಾದ  ಚೆನ್ನೈ ಎಕ್ಸ್‌ಪ್ರೆಸ್‌, ದಿಲ್ವಾಲೆ, ರಯೀಸ್  ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿನಿ ಪಂಡಿತರು ಹೇಳುತ್ತಿದ್ದಾರೆ.  ಮೊದಲ ದಿನ ಹ್ಯಾಪಿ ನ್ಯೂ ಇಯರ್‌ ಸಿನಿಮಾದ ಕಲೆಕ್ಷನ್ ಬ್ರೇಕ್ ಮಾಡದಿದ್ದರೂ ನಂತರ ವೀಕೆಂಡ್‌ನಲ್ಲಿ ಪಠಾಣ್ ಸಿನಿಮಾ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ತನ್ನದೆ ಸಿನಿಮಾದ ದಾಖಲೆ ಮುರಿಯಲಿದ್ದಾರೆ ಎಂದು ಅಂದಾಜು ಮಾಡಲಾಗಿದೆ. 

2022 ಬಾಲಿವುಡ್‌‌ಗೆ ನಿರಾಸೆಯ ವರ್ಷವಾಗಿತ್ತು. ಯಾವುದೇ ಸಿನಿಮಾವೂ ಮೊದಲ ದಿನ ಉತ್ತಮ ಕಲೆಕ್ಷನ್ ಮಾಡಿಲ್ಲ. ಇದೀಗ ಶಾರುಖ್ ಸಿನಿಮಾ ಮೂಲಕ ಬಾಲಿವುಡ್ ಮತ್ತೆ ಯಶಸ್ಸಿನ ಹಾದಿಗೆ ಮರಳುವ ಸಾಧ್ಯತೆ ಇದೆ. ವರ್ಷದ ಆರಂಭದಲ್ಲಿ ಬಾಲಿವುಡ್ ಸಕ್ಸಸ್ ಸಿನಿಮಾ ಮೂಲಕ ಸಾಗಲಿದೆ. 

'ಪಠಾಣ್‌' ವಿವಾದ: ಅನಗತ್ಯ ಟೀಕೆ ಮಾಡ್ಬೇಡಿ.. ಬಿಜೆಪಿ ಮುಖಂಡರಿಗೆ ಮೋದಿ ಸಲಹೆ!

ಪಠಾಣ್ ಸಿನಿಮಾದಲ್ಲಿ ಶಾರುಖ್ ಜೊತೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಮತ್ತು ಶಾರುಖ್ ನಟನೆಯಯ ನಾಲ್ಕನೇ ಸಿನಿಮಾ ಇದಾಗಿದೆ. ಇಬ್ಬರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಜಾನ್ ಅಬ್ರಹಾಂ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಸಿದ್ಧಾರ್ಥ್ ಆನಂದ್ ಸಾರಥ್ಯದಲ್ಲಿ ಬಂದಿರುವ ಈ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದೆ. ಶಾರುಖ್ ಹೈ ವೋಲ್ಟೇಜ್ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.    

Follow Us:
Download App:
  • android
  • ios