ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರ ವಿವಾಹವು ಚರ್ಚೆಗೆ ಗ್ರಾಸವಾಗಿದೆ. ಹಿಂದೂ-ಮುಸ್ಲಿಂ ವಿವಾಹ ಮತ್ತು ತಂದೆಯ ಒಪ್ಪಿಗೆ ಇಲ್ಲದಿರುವುದು ವಿವಾದಕ್ಕೆ ಕಾರಣವಾಯಿತು. ಸೋನಾಕ್ಷಿ ಮತಾಂತರದ ಬಗ್ಗೆ ಪ್ರತಿಕ್ರಿಯಿಸಿ, ತಾನು ಮತಾಂತರಗೊಳ್ಳುವುದಿಲ್ಲ ಎಂದಿದ್ದಾರೆ. ಇದು ವಿಶೇಷ ವಿವಾಹ ಕಾಯ್ದೆಯಡಿ ನಡೆದಿದ್ದು, ಪ್ರೀತಿಯಿಂದ ವಿವಾಹವಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯ ಟೀಕೆಗಳನ್ನು ನಿಲ್ಲಿಸುವಂತೆ ಕೋರಿದ್ದಾರೆ.
ಮೈಮನ ಎಲ್ಲವನ್ನೂ ರಾಮಮಯವಾಗಿಸಿಕೊಂಡಿರುವ, ರಾಮನ ಭಕ್ತ ನಟ ಶತ್ರುಘ್ನ ಸಿನ್ಹಾ ಅವರ ಪುತ್ರಿ ಸೋನಾಕ್ಷಿ ಸಿನ್ಹಾ, ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿ ಸೋನಾಕ್ಷಿ ಜಹೀರ್ ಇಕ್ಬಾಲ್ ಆಗಿರುವುದು ಹಳೆಯ ಸುದ್ದಿ. ದಂಪತಿ ಈಗ ವಿದೇಶಗಳನ್ನು ಸುತ್ತುತ್ತಾ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ಅಷ್ಟಕ್ಕೂ ನಟಿ ಮದುವೆಯಾದಾಗಿನಿಂದಲೂ ಸದ್ದು ಮಾಡುತ್ತಲೇ ಇದ್ದಾರೆ. ಹಿಂದೂ-ಮುಸ್ಲಿಂ ಮದುವೆಯಾದ್ದರಿಂದ ಜೊತೆಗೆ ಅಪ್ಪನಿಗೆ ತಿಳಿಸದೇ ನಟಿ ಮದುವೆಯಾಗಿದ್ದರಿಂದಲೂ ಇವರ ಬಗ್ಗೆ ಇನ್ನೂ ಸುದ್ದಿಯಾಗುತ್ತಲೇ ಇದೆ. ಹೋದಲ್ಲಿ, ಬಂದಲ್ಲಿ ಇವರ ಮೇಲೆ ಕ್ಯಾಮೆರಾ ಕಣ್ಣು ನೆಟ್ಟಿರುತ್ತದೆ.
ಅಷ್ಟಕ್ಕೂ ಇವರೇನೂ ದಿಢೀರ್ ಮದುವೆಯಾಗಿದ್ದಲ್ಲ. ಆರೇಳು ವರ್ಷ ಒಟ್ಟಿಗೇ ಇದ್ದು, ಡೇಟಿಂಗ್ ಮಾಡಿದ ಬಳಿಕ ಮದುವೆಯಾಗಿದ್ದಾರೆ. ಇವರು ಡೇಟಿಂಗ್ ಮಾಡುತ್ತಿದ್ದ ವಿಷಯ ಅಷ್ಟೊಂದು ಬೆಳಕಿಗೆ ಬಂದಿರದ ಹಿನ್ನೆಲೆಯಲ್ಲಿ ಮದುವೆಯಾದ ಮೇಲೆ ದಿಢೀರನೆ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಈ ಮದುವೆ ಲವ್ ಜಿಹಾದ್ ಎನ್ನುವ ಮಟ್ಟಕ್ಕೂ ಚರ್ಚೆಯಾಗಿ ಬಿಟ್ಟಿತು. ಸಾಲದು ಎನ್ನುವುದಕ್ಕೆ ಸೋನಾಕ್ಷಿ ತಮ್ಮ ತಂದೆಗೇ ತಿಳಿಸದೇ ಈ ಮದುವೆಯಾಗಿರುವುದು ಮತ್ತಷ್ಟು ವಿವಾದಕ್ಕೆ ಈಡಾಗಿತ್ತು. ಈಗ ಎಲ್ಲವೂ ಒಂದು ಹಂತಕ್ಕೆ ಬಂದಿದ್ದರೂ, ಸೋನಾಕ್ಷಿ ಮದುವೆಯ ವಿಷಯವನ್ನು ಕೆದಕುವುದು ನೆಟ್ಟಿಗರಿಗೆ ಇನ್ನಿಲ್ಲದ ಖುಷಿ ಎನ್ನಿಸುತ್ತಿದೆ.
ಹಿಂದೂಗಳು ಪಟಾಕಿ ಹಚ್ಚಿದರೆ ಮೂರ್ಖರು, ಈಗ..? ನಟಿ ಸೋನಾಕ್ಷಿ ವಿಡಿಯೋಗೆ ನೆಟ್ಟಿಗರು ಕಿಡಿ ಕಿಡಿ...
ಸೋನಾಕ್ಷಿ ವಿವಾಹವಾದ ಮೇಲೆ ಮತಾಂತರ ಆಗುತ್ತಿದ್ದಾರೆ ಎನ್ನುವ ಬಗ್ಗೆ ಇದಾಗಲೇ ಸಾಕಷ್ಟು ಗಾಳಿ ಸುದ್ದಿಗಳು ಹರಡುತ್ತಿವೆ. ಆದರೆ ಆಕೆಯ ಅಭಿಮಾನಿಗಳು ಮಾತ್ರ ಇದು ಸಾಧ್ಯವಿಲ್ಲ. ಆಕೆ ಹಾಗೆ ಮಾಡುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಇದೇ ಮೊದಲ ಬಾರಿಗೆ ನಟಿ, ಮತಾಂತರ ಬಗ್ಗೆ ಮೌನ ಮುರಿದಿದ್ದಾರೆ. 'ಮದುವೆಯಾದಾಗಿನಿಂದಲೂ ಮತಾಂತರದ ಸುದ್ದಿ ಕೇಳಿ ಕೇಳಿ ತಲೆಚಿಟ್ಟು ಹಿಡಿದು ಹೋಗಿದೆ. ನಾನ್ಯಾಕೆ ಮತಾಂತರ ಆಗಬೇಕು. ಆ ವಿಷಯ ನಮ್ಮಿಬ್ಬರ ನಡುವೆ ಎಂದಿಗೂ ಬರಲಿಲ್ಲ. ಆತ ಹಿಂದೂ ಹಬ್ಬಗಳನ್ನು ಆಚರಿಸುತ್ತಾನೆ, ನಾನೂ ಮುಸ್ಲಿಂ ಹಬ್ಬಗಳಲ್ಲಿ ಭಾಗಿಯಾಗುತ್ತೇನೆ. ಅನವಶ್ಯಕವಾಗಿ ಟೀಕೆ ಮಾಡುವುದನ್ನು ನಿಲ್ಲಿಸಿ. ನಾವಿಬ್ಬರೂ ಪ್ರೀತಿಸಿ ಮದುವೆಯಾದವರು. ನಮ್ಮ ನಡುವೆ ಧರ್ಮ ಎಲ್ಲಾ ಏನೂ ಬಂದಿಲ್ಲ. ಕಾನೂನಿನ ಪ್ರಕಾರ ವಿಶೇಷ ವಿವಾಹ ಕಾಯ್ದೆ ಅಡಿ ಮದುವೆಯಾಗಿದ್ದೇವೆ. ಆದರೆ ಪದೇ ಪದೇ ಇದನ್ನೇ ಸಾಮಾಜಿಕ ಜಾಲತಾಣಗಳಲ್ಲಿ ಕೆದಕುವುದು ಸರಿ ಕಾಣುತ್ತಿಲ್ಲ' ಎಂದು ಗರಂ ಆಗಿದ್ದಾರೆ ನಟಿ.
ಅಂದಹಾಗೆ, ಈ ಹಿಂದೆಯೇ, ಜಹೀರ್ ತಂದೆ ಇಕ್ಬಾಲ್ ರತನ್ಸಿ, ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದು ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ. ಇದು ನಾಗರಿಕ ವಿವಾಹವಾಗಲಿದೆ ಎಂದಿದ್ದರು. ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಳ್ಳುತ್ತಾಳೆ ಎಂಬ ವರದಿಯಲ್ಲಿ ಸತ್ಯವಿಲ್ಲ. ಇದು ಸತ್ಯಕ್ಕೆ ದೂರವಾದ ವಿಷಯ ಎಂದಿದ್ದರು. ಅವಳು ಮತಾಂತರಗೊಳ್ಳುತ್ತಿಲ್ಲ. ಇದು ನಿಶ್ಚಿತ. ಅವರಿಬ್ಬರದ್ದೂ ಹೃದಯಗಳು ಒಂದಾಗಿವೆ. ಇದರ ನಡುವೆ ಧರ್ಮವು ಯಾವುದೇ ಪಾತ್ರವನ್ನು ವಹಿಸುವುದಿಲ್ಲ. ಸೋನಾಕ್ಷಿ ಮತಾಂತರವಾಗುವುದಿಲ್ಲ. ನಾನು ಮಾನವೀಯತೆಯನ್ನು ನಂಬುತ್ತೇನೆ. ದೇವರನ್ನು ಹಿಂದೂಗಳು ಭಗವಾನ್ ಮತ್ತು ಮುಸ್ಲಿಮರು ಅಲ್ಲಾ ಎಂದು ಕರೆಯುತ್ತಾರೆ. ಆದರೆ ದಿನದ ಕೊನೆಯಲ್ಲಿ, ನಾವೆಲ್ಲರೂ ಮನುಷ್ಯರು. ನನ್ನ ಆಶೀರ್ವಾದ ಜಹೀರ್ ಮತ್ತು ಸೋನಾಕ್ಷಿ ಅವರ ಮೇಲಿದೆ. ಸುಮ್ಮನೇ ಸುಳ್ಳು ಸುದ್ದಿ ಹರಡಿಸಬೇಡಿ ಎಂದು ಅವರು ಹೇಳಿದ್ದರು.
ಆಸ್ಟ್ರೇಲಿಯಾದಲ್ಲಿ ಸೋನಾಕ್ಷಿ- ಜಹೀರ್ ಹನಿಮೂನ್ಗೆ ಭಂಗ ತಂದ ಸಿಂಹ! ಶಾಕಿಂಗ್ ವಿಡಿಯೋ ವೈರಲ್
