'ಅನಿಮಲ್' ಯಶಸ್ಸು ಡೇಂಜರಸ್ ಎಂದ ಜಾವೇದ್ ಅಖ್ತರ್! ನೀವು ಕಲಾವಿದನೇ ಅಲ್ಲ ಎಂದು ನಿರ್ದೇಶಕ ಗರಂ
ಹೆಣ್ಣಿನ ಮೇಲೆ ಮಿತಿ ಮೀರಿದ ದೌರ್ಜನ್ಯ ಇರುವ ಅನಿಮಲ್ ಚಿತ್ರದ ಯಶಸ್ಸು ಡೇಂಜರಸ್ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯ ಪಟ್ಟಿದ್ದರೆ, ಹಾಗಿದ್ದರೆ ಇವರು ಕಲಾವಿದರೇ ಅಲ್ಲ ಎಂದ್ರು ಅನಿಮಲ್ ನಿರ್ದೇಶಕ!
ಬಾಲಿವುಡ್ ಪುರುಷ ಪ್ರಧಾನವಾಗಿದ್ದು, ಮಹಿಳೆಯರು ಇಲ್ಲಿ ಬಟ್ಟೆ ಬಿಚ್ಚಲು ಅಷ್ಟೇ ಸೀಮಿತರು ಎನ್ನುವ ಮಾತು ಬಹಳ ವರ್ಷಗಳಿಂದಲೂ ರೂಢಿಯಲ್ಲಿದೆ. ಅದಕ್ಕೆ ತಕ್ಕನಾಗಿ ಇಂದಿನ ನಟಿಯರೂ ಹಿಂದೆ ಬಿದ್ದಿಲ್ಲ. ಪೈಪೋಟಿಗೆ ಬಿದ್ದವರಂತೆಯೇ ಬಟ್ಟೆ ಬಿಚ್ಚುತ್ತಿದ್ದಾರೆ. ಅನಿಮಲ್ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣನ ಹಸಿಬಿಸಿ ದೃಶ್ಯ ಹಾಗೂ ತೃಪ್ತಿ ಡಿಮ್ರಿ ಅವರು ಸಂಪೂರ್ಣ ಬೆತ್ತಲಾದ ಮೇಲಂತೂ ಇಂದು ಬಾಲಿವುಡ್ ಇಂಡಸ್ಟ್ರಿಯಲ್ಲಿ ನಟಿಯರಿಗೆ ಇರುವ ಸ್ಥಾನದ ಬಗ್ಗೆ ಪರಿಪೂರ್ಣವಾಗಿ ತೋರಿಸಲಾಗಿದೆ. ಈ ಚಿತ್ರ ಭರ್ಜರಿ ಯಶಸ್ಸು ಕಂಡು ಹಲವಾರು ಚಿತ್ರಗಳ ದಾಖಲೆಗಳನ್ನು ಉಡೀಸ್ ಮಾಡಿರುವುದನ್ನು ನೋಡಿದರೆ ಪ್ರೇಕ್ಷಕರ ಅಭಿರುಚಿ ಯಾವ ಮಟ್ಟಿಗೆ ಹೋಗಿದೆ ಎನ್ನುವುದೂ ಅರ್ಥವಾಗುತ್ತದೆ. ಮಹಿಳೆಯರ ಮೇಲೆ ಮಿತಿಮೀರಿದ ದೌರ್ಜನ್ಯ, ಮೂರು ಪತ್ನಿಯರ ಮೇಲೆ ನಡೆಸುವ ಅತ್ಯಾಚಾರ, ಮಹಿಳೆಯನ್ನು ಕಾಮದ ವಸ್ತು ಎಂದು ಅಂದುಕೊಳ್ಳುವುದು, ಬೂಟನ್ನು ನೆಕ್ಕು ಎಂದು ಪತ್ನಿಗೆ ನಾಯಕ ಹೇಳುವುದು... ಇವೆಲ್ಲವನ್ನೂ ಪ್ರೇಕ್ಷಕರು ತುಂಬು ಮನಸ್ಸಿನಿಂದ ಸ್ವಾಗತಿಸಿ ಅನಿಮಲ್ ಚಿತ್ರಕ್ಕೆ ಭರ್ಜರಿ ಯಶಸ್ಸು ತಂದುಕೊಟ್ಟಿದ್ದಾರೆ.
ಈ ಯಶಸ್ಸನ್ನು ಕಂಡು ಗೀತ ರಚನೆಕಾರ ಜಾವೇದ್ ಅಖ್ತರ್ ಶಾಕ್ ಆಗಿದ್ದಾರೆ. ಔರಂಗಾಬಾದ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಜಂತಾ ಎಲ್ಲೋರಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿದ್ದ ಅವರು, ಪ್ರಸ್ತುತ ಚಲನಚಿತ್ರದ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅನಿಮಲ್ ಚಿತ್ರವನ್ನು ನೇರವಾಗಿ ಉಲ್ಲೇಖಿಸದಿದ್ದರೂ ಅದರಲ್ಲಿರುವ ಮಿತಿ ಮೀರುವ ದೌರ್ಜನ್ಯದ ಬಗ್ಗೆ ಬೇಸರಿಸಿದರು. ಇಂದಿನ ಕಾಲಘಟ್ಟದಲ್ಲಿ ತಯಾರಾಗುತ್ತಿರುವ ಚಿತ್ರಗಳು ಮತ್ತು ಹಾಡುಗಳ ಯಶಸ್ಸಿನ ಜವಾಬ್ದಾರಿ ಕೂಡ ಪ್ರೇಕ್ಷಕರ ಮೇಲೆ ನಿಂತಿದೆ. ಯುವ ಚಲನಚಿತ್ರ ನಿರ್ಮಾಪಕರಿಗೆ ಇದು ಪರೀಕ್ಷಾ ಸಮಯ ಎಂದು ನಾನು ನಂಬುತ್ತೇನೆ. ಉದಾಹರಣೆಗೆ, ಪುರುಷನು ಮಹಿಳೆಗೆ ತನ್ನ ಶೂ ನೆಕ್ಕಲು ಕೇಳುವ ಚಲನಚಿತ್ರವಿದ್ದರೆ ಅಥವಾ ಮಹಿಳೆಗೆ ಕಪಾಳಮೋಕ್ಷ ಮಾಡುವುದು ಸರಿ ಎಂದು ಪುರುಷ ಹೇಳಿದರೆ ಆ ಚಿತ್ರ ಸೂಪರ್ ಹಿಟ್ ಆಗಿದ್ದರೆ ಅದು ತುಂಬಾ ಅಪಾಯಕಾರಿ ಎಂದು ಅಖ್ತರ್ ಹೇಳಿದರು.
ಪುಷ್ಪಾ ಶೂಟಿಂಗ್ ಬಿಟ್ಟು ಮುಂಬೈಗೆ ಹಾರಿದ ರಶ್ಮಿಕಾ: ಪತ್ನಿ ಆಲಿಯಾ ಎದುರೇ ಕಿಸ್ ಕೊಟ್ಟ ರಣಬೀರ್- ವಿಡಿಯೋ ವೈರಲ್
‘ಈಗ ಸಿನಿಮಾದವರಿಗಿಂತಲೂ ಪ್ರೇಕ್ಷಕರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಯಾವ ಸಿನಿಮಾವನ್ನು ಇಷ್ಟಪಡಬೇಕು ಎಂಬುದನ್ನು ಪ್ರೇಕ್ಷಕರು ನಿರ್ಧರಿಸಬೇಕು. ಒಳ್ಳೆಯ ಸಿನಿಮಾ ಮಾಡುವವರೂ ಇದ್ದಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಅವರಿಗೆ ನೀವು ಎಲ್ಲಿಯವರೆಗೆ ಬೆಂಬಲ ನೀಡುತ್ತೀರಿ ಎಂಬುದರ ಮೇಲೆ ಅಂಥ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಿರುತ್ತದೆ’ ಎಂದು ಜಾವೇದ್ ಅಖ್ತರ್ ಹೇಳಿದರು.
ಇದರಿಂದ ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ಅವರು, ಅನಿಮಲ್ ಚಿತ್ರದ ಒಳಾರ್ಥವನ್ನು ಹಾಗೂ ಇದರ ಡೈಲಾಗ್ನ ನಿಜ ಅರ್ಥವನ್ನು ತಿಳಿದುಕೊಳ್ಳದಿದ್ದ ನಿಮ್ಮ ಕಲೆಯೇ ಸುಳ್ಳು. ಪ್ರೀತಿಯು ಯಾವತ್ತಿಗೂ ಲಿಂಗ ರಾಜಕೀಯದಿಂದ ಮುಕ್ತವಾಗಿರಬೇಕು. ಅದನ್ನು ಬಿಟ್ಟು ಈ ರೀತಿ ಹೇಳಿಕೆ ನೀಡುವುದು ಅಲ್ಲ ಎಂದು ತಿರುಗೇಟು ನೀಡಿದ್ದಾರೆ. ಅನಿಮಲ್ ಚಿತ್ರದಲ್ಲಿ ತನ್ನ ಮೂರು ಪತ್ನಿಯರ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ಎಸಗುವ ಪಾತ್ರವನ್ನು ರೊಮ್ಯಾಂಟಿಕ್ ಪಾತ್ರ ಎಂದಿದ್ದರು ಬಾಬಿ ಡಿಯೋಲ್. ಅದೇ ಇನ್ನೊಂದೆಡೆ ಸಂದೀಪ್ ರೆಡ್ಡಿ ಅವರು ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಹೆಣ್ಣೆಂದರೆ ತಮ್ಮದೇ ರೀತಿಯ ವ್ಯಾಖ್ಯಾನ ನೀಡಿದ್ದ ಸಂದೀಪ್ ಅವರು, ನೀವು ನಿಮ್ಮ ಪತ್ನಿಯ ಕಪಾಳಕ್ಕೆ ಹೊಡೆಯದಿದ್ದರೆ, ನೀವು ಎಲ್ಲಿ ಬೇಕು ಅಲ್ಲಿ ನಿಮ್ಮ ಪತ್ನಿಯನ್ನು ಮುಟ್ಟಲು ಸಾಧ್ಯವಾಗದಿದ್ದರೆ, ನೀವು ಮುತ್ತು ಕೊಡಲು ಸಾಧ್ಯವಾಗದಿದ್ದರೆ ಮತ್ತು ಪತ್ನಿಯನ್ನು ಬೈಯ್ಯದಿದ್ದರೆ ಆ ಸಂಬಂಧದಲ್ಲಿ ನಾನು ಭಾವನೆಗಳನ್ನೇ ಕಾಣುವುದಿಲ್ಲ ಎಂದಿದ್ದರು.
ಕಟ್ಟಡದಿಂದ ಜಿಗಿಯುತ್ತಿದ್ದ ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಕಾಪಾಡಿದ 'ಅನಿಮಲ್' ನಟ: ವಿಡಿಯೋ ವೈರಲ್