ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯೆ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರದ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಸದ್ಯ ಬಹುನಿರೀಕ್ಷೆಯ ವಿಕ್ರಾಂತ್ ರೋಣ(Vikrant Rona) ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿರುವ ವಿಕ್ರಾಂತ್ ರೋಣ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಯಾವಾಗ ತೆರೆಗೆ ಬರುತ್ತೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಸುದೀಪ್ ಲುಕ್ ಮತ್ತು ವಿಕ್ರಾಂತ್ ರೋಣನ ಕೆಲವು ಮೇಕಿಂಗ್ ವಿಡಿಯೋಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇದೀಗ ಸಿನಿಮಾತಂಡ ಚಿತ್ರದಿಂದ ಸಖತ್ ಸುದ್ದಿಯನ್ನು ಬಹಿರಂಗ ಪಡಿಸಿದೆ. ಸಿನಿಮಾ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ವಿಕ್ರಾಂತ್ ರೋಣ ತಂಡದಿಂದ ಸಿಕ್ಕ ಅಪ್ ಡೇಟ್ ಥ್ರಿಲ್ ಆಗುವಂತೆ ಮಾಡಿದೆ. ಹೌದು, ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಚಿತ್ರದ ಬಗ್ಗೆ ಏನಾದರು ಅಪ್ ಡೇಟ್ ನೀಡಿ ಎಂದು ಕೇಳಿಕೊಳ್ಳುತ್ತಿದ್ದ ಅಭಿಮಾನಿಗಳಿಗೆ ಈ ಸುದ್ದಿ ಸಂತಸ ತಂದಿದೆ.

'ವಿಕ್ರಾಂತ್ ರೋಣ' ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ಕಾರ್ ಗಿಫ್ಟ್ ಮಾಡಿದ ಕಿಚ್ಚ ಸುದೀಪ್

ಅಂದಹಾಗೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಯುಗಾದಿ ಹಬ್ಬದಂದು ಬಿಡುಗಡೆಯಾಗುತ್ತಿದೆ. ಮಾರ್ಚ್ 29ರಂದು ವಿಕ್ರಾಂತ್ ರೋಣ ಸಿನಿಮಾತಂಡ ಚಿತ್ರದ ಬಗ್ಗೆ ಅಪ್ ನೀಡುವುದಾಗಿ ಹೇಳಿತ್ತು. ಅದರಂತೆ ಇಂದು ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗ ಪಡಿಸಿದೆ. ಅಂದಹಾಗೆ ಬಹನಿರೀಕ್ಷೆಯ ಸಿನಿಮಾದ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಕಿಚ್ಚನ ಅಭಿಮಾನಿಗಳಿಗೆ ಇದು ಡಬಲ್ ಸಂಭ್ರಮ.

ಇದು 'ಡೆವಿಲ್ ಅನೌನ್ಸ್ ಮೆಂಟ್' ಎಂದಿರುವ ಸಿನಿಮಾತಂಡ ಏಪ್ರಿಲ್ ರಂದು ಬೆಳಗ್ಗೆ 9:55ಕ್ಕೆ ಟೀಸರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ವಿಕ್ರಾಂತ್ ರೋಣ ಚಿತ್ರದಲ್ಲಿ ಕಿಚ್ಚ ಸುದೀಪ್ ನಾಯಕನಾಗಿ ಮಿಂಚಿದ್ರೆ, ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಬಂದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕ ಕೂಡ ಸದ್ಯದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.

Scroll to load tweet…

ಇನ್ನು ಸಿನಿಮಾದ ಮತ್ತೊಂದು ವಿಶೇಷ ಎಂದರೆ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಲುಕ್ ಈಗಾಗಲೇ ವೈರಲ್ ಆಗಿದೆ. ಕಿಚ್ಚ ಮತ್ತು ಜಾಕ್ವೆಲಿನ್ ಕಾಂಬಿನೇಷನ್ ನ ಹಾಡು ನೋಡು ಅಭಿಮಾನಿಗಳು ಕಾತರರಾಗಿದ್ದಾರೆ. ಮೊದಲ ಬಾರಿಗೆ ಜಾಕ್ವೆಲಿನ್ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಚಿತ್ರಕ್ಕೆ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇತ್ತೀಚಿಗಷ್ಟೆ ಸುದೀಪ್ ವಿಕ್ರಾಂತ್ ರೋಣ ಸಿನಿಮಾಗೆ ನೃತ್ಯ ನಿರ್ದೇಶನ ಮಾಡಿದ್ದ ಜಾನಿ ಮಾಸ್ಟರ್ ಅವರಿಗೆ ಮಹೇಂದ್ರ ಥಾರ್ ಗಿಫ್ಟ್ ಆಗಿ ನೀಡಿದ್ದರು. ಈ ಬಗ್ಗೆ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದರು. ಸುದೀಪ್ ನಟನೆಯ ವಿಕ್ರಾಂತ್ ರೋಣ ಚಿತ್ರದಲ್ಲಿ ಗಡಂಗ್ ರಕ್ಕಮ್ಮ ಹಾಡಿದೆ. ಇದರಲ್ಲಿ ಸುದೀಪ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ. ಈ ಡಾನ್ಸ್ ಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಸುದೀಪ್ ಅವರಿಗೆ ಜಾನಿ ಅವರ ಕೊರೆಯೋಗ್ರಫಿ ತುಂಬಾ ಇಷ್ಟವಾಗಿತ್ತು. ಈ ಹಾಡಿನ ಶೂಟಿಂಗ್ ವೇಳೆ ಮಹೇಂದ್ರ ಥಾರ್ ತುಂಬಾ ಇಷ್ಟ ಅಂತ ಹೇಳಿದ್ದರು. ಹಾಗಾಗಿ ಸುದೀಪ್ ಅವರು ಮಹೇಂದ್ರ ಥಾರ್ ಉಡುಗೊರೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದರು.