ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಣ್ಣನಿಗೆ ಹೃದಯಾಘಾತ ಆಗುತ್ತಿದ್ದಂತೆ, ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸತ್ಯನಾರಾಯಣ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.
ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅಣ್ಣನಿಗೆ ಹೃದಯಾಘಾತವಾಗಿದೆ. ಇದೀಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲೊಮ್ಮೆ ಕೂಡ ರಜನಿಕಾಂತ್ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ (84) ಅವರಿಗೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ರಜನಿಕಾಂತ್ ಅವರೇ ತಮ್ಮ ಅಣ್ಣನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸೂಪರ್ ಸ್ಟಾರ್ ರಜಿನಿಕಾಂತ್ ಅಣ್ಣನಿಗೆ ಹೃದಯಾಘಾತ
ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಣ್ಣನಿಗೆ ಹೃದಯಾಘಾತ ಆಗುತ್ತಿದ್ದಂತೆ, ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸತ್ಯನಾರಾಯಣ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ 84 ವರ್ಷ ವಯಸ್ಸಾಗಿದೆ.
