Lal Salaam: ರಜನಿಕಾಂತ್ ಪೋಸ್ಟರ್ ಹಿಗ್ಗಾಮುಗ್ಗಾ ಟ್ರೋಲ್; ನಿರ್ದೇಶನದಿಂದ ಮಗಳನ್ನು ತೆಗೆದಾಕಿ ಎಂದ ಫ್ಯಾನ್ಸ್

ರಜನಿಕಾಂತ್ ನಟನೆಯ ಲಾಲ್ ಸಲಾಮ್ ಪೋಸ್ಟರ್ ರಿಲೀಸ್ ಆಗಿದ್ದು ಹಿಗ್ಗಾಮುಗ್ಗಾ ಟ್ರೋಲ್ ಆಗಿದೆ. ಮೊದಲು ನಿರ್ದೇಶನದಿಂದ ಮಗಳನ್ನು ತೆಗೆದಾಕಿ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.  

Superstar Rajinikanth's Lal Salaam poster gets brutally trolled sgk

ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಜೈಲರ್ ಸಿನಿಮಾದ ಟೀಸರ್ ರಿಲೀಸ್ ಮಾಡುವ  ಮೂಲಕ ಅಭಿಮಾನಿಗಳಿಗೆ ಸಖತ್ ಥ್ರಿಲ್ ನೀಡಿದ್ದರು. ಇದರ ಬೆನ್ನಲ್ಲೇ ಸೂಪರ್ ಸ್ಟಾರ್ ಲಾಲ್ ಸಲಾಮ್ ಆಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಲಾಲ್ ಸಲಾಂ  ಚಿತ್ರಕ್ಕೆ ತಲೈವಾ ಮಗಳು ಐಶ್ವರ್ಯಾ ರಜನಿಕಾಂತ್ ಅವರೇ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್ ಕಾಂತ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇಂದು (ಮೇ 8) ರಜನಿಕಾಂತ್ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಆದರೆ ಮೊದಲ ಪೋಸ್ಟರ್ ರಿಲೀಸ್ ಮಾಡುತ್ತಿದ್ದಂತೆ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. 

ಪೋಸ್ಟರ್ ಡಿಸೈನ್ ನೋಡಿ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಇಂಥ ಪೋಸ್ಟರ್ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳುತ್ತಿದ್ದಾರೆ. ಪೋಸ್ಟರ್ ಡಿಸೈನ್ ಕೆಟ್ಟದಾಗಿ ಮಾಡಿದ್ದಾರೆ ಎಂದು ಮತ್ತೋರ್ವ ಹೇಳಿದ್ದಾರೆ. ಐಶ್ವರ್ಯಾ ಅವರನ್ನು ಮೊದಲು ನಿರ್ದೇಶಕಿ ಸ್ಥಾನದಿಂದ ಕೆಳಗೆ ಇಳಿಸಿ ಎಂದು ಹೇಳುತ್ತಿದ್ದಾರೆ.

ಲಾಲ್ ಸಲಾಮ್ ಸಿನಿಮಾ ಬಗ್ಗೆ 

ಲೈಕಾ ಪ್ರೊಡಕ್ಷನ್ ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಸಿನಿಮಾದ ಮೊದಲ ಲುಕ್ ಶೇರ್ ಮಾಡಿದೆ. ಫಸ್ಟ್ ಲುಕ್ ನೋಡಿ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಅನೇಕರು ಬೇಸರ ಹೊರಹಾಕುತ್ತಿದ್ದಾರೆ. ಐಶ್ವರ್ಯಾ ಅವರ ಆಯ್ಕೆಯನ್ನು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಲಾಲ್ ಸಲಾಮ್ ಮೂಲಕ ಐಶ್ವರ್ಯಾ ರಜನಿಕಾಂತ್ ಮತ್ತೆ ನಿರ್ದೇಶಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲೈಕಾ ಪ್ರೊಡಕ್ಷನ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

Latest Videos
Follow Us:
Download App:
  • android
  • ios