ಸುಶ್ಮಿತಾ ಸೇನ್ ತಮಗಿಂತ 15 ವರ್ಷ ಕಿರಿಯ ರೋಹ್ಮನ್ ಶಾಲ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಹಳೆಯ ಸುದ್ಧಿ. ಇದೀಗ ರೋಹ್ಮನ್ ಶಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಶುರುವಾಗಿದೆ.

ಇತ್ತೀಚಿಗೆ ಸುಶ್ಮಿತಾ ಸೇನ್ ಪ್ರಿಯಕರ ರೋಹ್ಮಲ್ ಜೊತೆಗಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ನೀಲಿ ಬಣ್ಣದ ಉಂಗುರ ಧರಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಇಬ್ಬರೂ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ ಎಂದು ಹೇಳಿಕೊಳ್ಳಲು ಶುರು ಮಾಡಿದ್ದಾರೆ.

 

ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಭಾವಿಸಿದ ಅಭಿಮಾನಿಗಳು ವಿಶ್ ಮಾಡಿದ್ದಾರೆ. ಆದರೆ ಈ ಬಗ್ಗೆ ಸುಶ್ಮಿತಾ ಆಗಲಿ, ರೋಹ್ಮಲ್ ಆಗಲಿ ಪ್ರತಿಕ್ರಿಯೆ ನೀಡಿಲ್ಲ.