The Kashmir Files ಚಿತ್ರದ ಬಗ್ಗೆ ವ್ಯಂಗ್ಯವಾಡಿದ ಸ್ವರಾ ಭಾಸ್ಕರ್ ಹಿಗ್ಗಾಮುಗ್ಗಾ ಟ್ರೋಲ್
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಬಾಲಿವುಡ್ ಸ್ವರಾ ಭಾಸ್ಕರ್ ವ್ಯಂಗ್ಯವಾಡಿದ್ದಾರೆ. ಚಿತ್ರ ಮತ್ತು ನಿರ್ದೇಶಕರ ಬಗ್ಗೆ ಪರೋಕ್ಷವಾಗಿ ಟ್ವೀಟ್ ಮಾಡಿರುವ ಸ್ವರಾ ಭಾಸ್ಕರ್ ವಿರುದ್ಧ ನೆಟ್ಟಿಗರು ಮುಗಿಬಿದ್ದಿದ್ದಾರೆ. ಸ್ವರಾ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತಿದೆ.
ಭಾರತೀಯ ಸಿನಿಮಾರಂಗದಲ್ಲಿ ಸದ್ಯ ದಿ ಕಾಶ್ಮೀರ್ ಫೈಲ್ಸ್( The Kashmir Files) ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೋಟಿ ಕೋಟಿ ಗಳಿಕೆ ಮಾಡುತ್ತಾ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. 1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಬಗ್ಗೆ ಈ ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ(Vivek Agnihotri) ಸಾರಥ್ಯದಲ್ಲಿ ಮೂಡಿ ಬಂದಿರುವ ಈ ಚಿತ್ರದ ಬಗ್ಗೆ ಪರ ವಿರೋದ ಚರ್ಚೆ ನಡೆಯುತ್ತಿದೆ.
ಸಿನಿಮಾ ಗಣ್ಯರು ಮಾತ್ರವಲ್ಲದೆ ರಾಜಕೀಯ ಗಣ್ಯರು ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇನ್ನು ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್(Swara Bhaskar) ವ್ಯಂಗ್ಯವಾಡುವ ಮೂಲಕ ಟ್ರೋಲಿಗರಿಗೆ ಗುರಿಯಾಗಿದ್ದಾರೆ. ಚಿತ್ರದ ಹೆಸರು ಮತ್ತು ನಿರ್ದೇಶಕರ ಹೆಸರು ಹೇಳದೆ ಸ್ವರಾ ಪರೋಕ್ಷವಾಗಿ ನಿರ್ದೇಶಕ ವಿವೇಕ್ ಅಗ್ನಿ ಹೋತ್ರಿಯನ್ನು ಕೆಣಕಿ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ.
ಮಾರ್ಚ್ 11ರಂದು ಬಿಡುಗಡೆಯಾದ ಸಿನಿಮಾದ ಬಗ್ಗೆ ಅನೇಕರು ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸಾಮಾನ್ಯರಿಂದ ದೊಡ್ಡ ದೊಡ್ಡ ಸ್ಟಾರ್ ಕಲಾವಿದರು ಸಹ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಕ್ಷಯ್ ಕುಮಾರ್(Akshay Kumar), ಯಾಮಿ ಗೌತಮಿ ಸೇರಿದಂತೆ ಇನ್ನು ಕೆಲವು ಸಿನಿಮಾತಾರೆಯರು ಚಿತ್ರ ವೀಕ್ಷಿಸುವಂತೆ ಪ್ರೇಕ್ಷಕರಲ್ಲಿ ವಿನಂತಿಸುತ್ತಿದ್ದರು. ಇದೀಗ ನಟಿ ಸ್ವರಾ ಭಾಸ್ಕರ್ ಅವರ ವ್ಯಂಗ್ಯ ಟ್ವೀಟ್ ಅಚ್ಚರಿ ಮೂಡಿಸಿದೆ. ಸಿನಿಮಾ ಹೆಸರು ಉಲ್ಲೇಖ ಮಾಡದೆ ಮತ್ತು ನಿರ್ದೇಶಕರ ಬಗ್ಗೆ ಸ್ವರಾ ಭಾಸ್ಕರ್ ಪರೋಕ್ಷವಾಗಿ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
'ನಮ್ಮನೆ ಕೆಲಸದವಳು ಸೀರೆಯಲ್ಲಿ ನಿಮಗಿಂದ ಚೆಂದ ಕಾಣ್ತಾಳೆ'; ನಟಿ ಸ್ವರಾ ಭಾಸ್ಕರ್ ಟ್ರೋಲ್!
ಸ್ವರಾ ಮಾಡಿರುವ ಟ್ವೀಟ್ ದಿ ಕಾಶ್ಮೀರ್ ಫೈಲ್ಸ್ ( The Kashmir Files) ಸಿನಿಮಾದ ಬಗ್ಗೆಯೇ ಎನ್ನುವುದು ಮೊದಲು ನೆಟ್ಟಿಗರ ಗಮನಕ್ಕೆ ಬಂದಿರಲಿಲ್ಲ. ಆದರೆ ಕೆಲವೇ ಕ್ಷಣದಲ್ಲಿ ಟ್ರೋಲಿಗರು ಸ್ವರಾ ವಿರುದ್ಧ ಮುಗಿಬಿದ್ದಿದ್ದಾರೆ. ಸ್ವರಾ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, 'ಎಲ್ಲವನ್ನು ನೀವು ತಪ್ಪಾಗಿ ಗ್ರಹಿಸುತ್ತೀರಿ' ಎಂದು ಹೇಳುತ್ತಿದ್ದಾರೆ. ಮತ್ತೋರ್ವ ಕಾಮೆಂಟ್ ಮಾಡಿ, 'ಅಭಿನಂದನೆಗಳು ಸ್ವರಾ, ಮತ್ತೊಮ್ಮೆ ನೀವು ಮತ್ತೊಬ್ಬರ ಯಶಸ್ಸಿನಲ್ಲಿ ಜನರ ಗಮನವನ್ನು ನಿಮ್ಮ ಕಡೆ ಸೆಳೆದಿದ್ದೀರಿ. ಆದರೆ ಈ ಬಾರಿ ಹೆಚ್ಚು ಪ್ರತಿಕ್ರಿಯೆ ಬಂದಿಲ್ಲ, ಯಾಕೆಂದರೆ ಜನರು ಉಪಯುಕ್ತ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ' ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಸ್ವರಾ ಮಾಡಿರುವ ಟ್ವೀಟ್ ವಿರುದ್ಧ ಅನೇಕರು ಹರಿಹಾಯ್ದಿದ್ದಾರೆ. ಆದರೆ ಈ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂದಹಾಗೆ ಈ ರೀತಿಯಾಗಿ ವ್ಯಂಗ್ಯವಾಡುವುದು ಸ್ವರಾಗೆ ಹೊಸದೇನಲ್ಲ. ಒಂದಲ್ಲೊಂದು ಹೇಳಿಕೆ ಮೂಲಕ ಸದಾ ವಿವಾದಕ್ಕೆ ಸಿಲುಕುತ್ತಿರುತ್ತಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವಿಚಾರದಲ್ಲೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೂವು-ಹಸ್ತಮೈಥುನ: ನಟಿ ಸ್ವರಾ ಭಾಸ್ಕರ್ ಹೇಳಿದ್ದಿಷ್ಟು
ಇನ್ನು ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಹೇಳುವಾದರೆ, ಚಿತ್ರದಲ್ಲಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಶಿ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ವೀಕ್ಷಣೆಗೆ ಅನೇಕ ರಾಜ್ಯಗಳು ತೆರಿಗೆ ವಿನಾಯಿತಿಯನ್ನು ನೀಡಿವೆ. ಕರ್ನಾಟಕ ಸರ್ಕಾರ ಕೂಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದೆ. ದೇಶದಾದ್ಯಂತ ಪ್ರೇಕ್ಷಕರು ಸಿನಿಮಾ ನೋಡಿ ನಿರ್ದೇಶಕ ಅಗ್ನಿಹೋತ್ರಿಯನ್ನು ಹಾಡಿಹೊಗಳುತ್ತಿದ್ದಾರೆ. ಆದರೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.