Asianet Suvarna News Asianet Suvarna News

ವಿಜಯ್ ವರ್ಮಾ ಜೊತೆಗಿನ ಲವ್ವಿ ಡವ್ವಿ ವದಂತಿ ಬಗ್ಗೆ ಮೌನ ಮುರಿದ ನಟಿ ತಮನ್ನಾ

ನಟ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ವದಂತಿ ಬಗ್ಗೆ ನಟಿ ತಮನ್ನಾ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. 

Tamannaah Bhatia breaks the silence on Dating Rumours with Vijay varma sgk
Author
First Published Mar 12, 2023, 5:36 PM IST | Last Updated Mar 12, 2023, 5:38 PM IST

ನಟಿ ತಮನ್ನಾ ಇತ್ತೀಚೆಗೆ ಪ್ರೀತಿ, ಪ್ರೇಮದ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದು ಮಾಡುತ್ತಿದ್ದಾರೆ.  ಮಿಲ್ಕಿ ಬ್ಯೂಟಿ ನಟ ವಿಜಯ್ ವರ್ಮಾ ಜೊತೆ ಡೇಟಿಂಗ್‌ನಲ್ಲಿದ್ದಾರೆ ಎನ್ನುವ ಸುದ್ದಿ ಈಗಾಗಲೇ ಎಲ್ಲರಿಗೂ ಗೊತ್ತಿದೆ. ಇಬ್ಬರೂ ಪ್ರೀತಿ ವಿಚಾರವನ್ನು ಬಹಿರಂಗವಾಗಿ ಹೇಳಿಕೊಂಡಿಲ್ಲವಾದರೂ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿರುತ್ತಾರೆ. ಪ್ರೇಮಿಗಳ ದಿನಾಚರಣೆ ದಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡುವ ಮೂಲಕ ತಮ್ಮ ಪ್ರೀತಿಯನ್ನು ವಿಜಯ್ ವರ್ಮ ಅಧಿಕೃತಗೊಳಿಸಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿತ್ತು. ಇಬ್ಬರೂ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ, ಪಾಪರಾಜಿಗಳ ಮುಂದೆ ಕಾಣಿಸಿಕೊಳ್ಳುತ್ತಿರುತ್ತಾರೆ. 

ತಮನ್ನಾ ಅವರಿಗೆ ವಿಜಯ್ ವರ್ಮಾ ಕ್ಯೂಟ್ ನಿಕ್‌ನೇಮ್ ಅನ್ನು ಇಟ್ಟಿದ್ದಾರೆ. ತಮನ್ನಾಗೆ ವಿಜಯ್ ವರ್ಮಾ ಟೊಮ್ಯಾಟೋ ಎಂದು ಕರೆಯುತ್ತಿದ್ದಾರೆ. ಇದನ್ನು ಸ್ವತಃ ವಿಜಯ್ ವರ್ಮಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಕ್ಯೂಟ್ ಮಾತುಕತೆ ಇಬ್ಬರ ನಡುವಿನ ಪ್ರೀತಿ, ಡೇಟಿಂಗ್ ವದಂತಿಗೆ ಮತ್ತಷ್ಟು ಪುಷ್ಠಿ ನೀಡುವಂತೆ ಮಾಡಿತ್ತು. ಈ ಬಗ್ಗೆ ವಿಜಯ್ ವರ್ಮಾ ಆಗಲಿ ಅಥವಾ ತಮನ್ನಾ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೀಗ ಮೊದಲ ಬಾರಿಗೆ ವಿಜಯ್ ಜೊತೆಗಿನ ಡೇಟಿಂಗ್ ವದಂತಿ ಬಗ್ಗೆ ಮೌನ ಮುರಿದಿದ್ದಾರೆ. 

ತಮನ್ನಾಗೆ ಬಾಯ್‌ಫ್ರೆಂಡ್ ವಿಜಯ್ ವರ್ಮಾ ಇಟ್ಟ ಕ್ಯೂಟ್ ನಿಕ್‌ನೇಮ್ ಏನು?

ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ನಟಿ ತಮನ್ನಾ ಡೇಟಿಂಗ್ ವಿಚಾರವನ್ನು ತಳ್ಳಿ ಹಾಕಿದ್ದಾರೆ. 'ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ' ಎಂದು ಹೇಳಿದ್ದಾರೆ.  

ಕೈ ಕೈ ಹಿಡಿದು ಒಟ್ಟಿಗೆ ಪೋಸ್ ನೀಡಿದ ತಮನ್ನಾ- ವಿಜಯ್ ವರ್ಮಾ; ಲವ್ ಬರ್ಡ್ಸ್ ಫೋಟೋ ವೈರಲ್

ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ಲಸ್ಟ್ ಸ್ಟೋರಿ -2 ಸಿನಿಮಾ ಸೆಟ್ ನಲ್ಲಿ ಮೊದಲು ಭೇಟಿಯಾಗಿದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿದೆ ಎನ್ನಲಾಗುತ್ತಿದೆ. ಇಬ್ಬರೂ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಇಬ್ಬರ ಪ್ರೀತಿ ಬಹಿರಂಗವಾಗಿದೆ. ಬಹುಬೇಡಿಕೆಯ ನಟಿಯಾಗಿರುವ ತಮನ್ನಾ ತಮಿಳು, ತೆಲುಗು ಜೊತೆಗೆ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಬೋಲ ಶಂಕರ್. ಗುರ್ತುಂದ ಸೀತಕಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 

Latest Videos
Follow Us:
Download App:
  • android
  • ios