Asianet Suvarna News Asianet Suvarna News

'ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ, ಬಂದೇ ಬಿಟ್ಟ ಪುಷ್ಪರಾಜ್; 'ಪುಷ್ಪ 2' ಸಾಂಗ್ ಬಿಡುಗಡೆ!

ಪುಷ್ಪ.. ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ.

Telugu Star actor All Arjun lead Pushpa 2 movie first song Release on May 01 srb
Author
First Published May 2, 2024, 6:05 PM IST

ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪಾ 2' ಚಿತ್ರಕ್ಕೆ ಭಾರೀ ನಿರೀಕ್ಷೆ ಸೃಷ್ಟಿಯಾಗಿರುವುದು ಗೊತ್ತೇ ಇದೆ. ಈಗ ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ 'ಪುಷ್ಪ 2 (Pushpa 2) ಸಿನಿಮಾದ ಮೊದಲ ಹಾಡನ್ನು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ಪುಷ್ಪ.. ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. 

ಶ್ರೀನಿಧಿ ಶೆಟ್ಟಿಯೋ, ರಾಧಿಕಾ ಪಂಡಿತ್ ಆ? ಯಶ್ ಆಯ್ಕೆ ಯಾರೆಂಬ ಪ್ರಶ್ನೆಗೆ ಸಿಕ್ಕಿದೆ ಉತ್ತರ!

ಪುಷ್ಪ ಸಿನಿಮಾಗೆ ನಿರ್ದೇಶಕ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಕತ್ತಲೆಯಿದ್ದಾಗಲೇ ನಕ್ಷತ್ರಗಳನ್ನು ನೋಡಲು ಸಾಧ್ಯ ಅಂದಿದ್ಯಾಕೆ ನಟಿ ಅನುಪಮಾ ಗೌಡ?

ಅಲ್ಲು ಅರ್ಜುನ್ ಜೋಡಿಯಾಗಿ 'ಶ್ರೀವಲ್ಲಿ' ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ 'ಪುಷ್ಪ 2: ದಿ ರೂಲ್' ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಕನ್ನಡದ 'ಕಥಾನಾಯಕ' ಸಿನಿಮಾದಲ್ಲೂ ಹಾಡಿದ್ದ ತಮಿಳು ಗಾಯಕಿ ಉಮಾ ರಮಣನ್ ನಿಧನ

ಅಂದಹಾಗೆ, ನಟ ಅಲ್ಲು ಅರ್ಜುನ್ ಅವರು ಪುಷ್ಪಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ತೆಲುಗು ಸ್ಟಾರ್ ಅಲ್ಲು ಅರ್ಜುನ್ ಹಾಗು ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪಾ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ದಾಖಲಿಸಿದೆ.  ಈ ಮೂಲಕ ನಟ ಅಲ್ಲು ಅರ್ಜುನ್‌ ಅವರು ತೆಲುಗು ಗಡಿಯನ್ನು ದಾಟಿ, ನಾರ್ತ್-ಸೌತ್ ಭೇದವಿಲ್ಲದೇ ಇಡೀ ಇಂಡಿಯಾ ಲೆವಲ್‌ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಈಗ ಅದೇ ಜೋಡಿ, ಅಂದರೆ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪಾ 2' ಶೂಟಿಂಗ್ ಹಂತದಲ್ಲಿದೆ. ಇದೀಗ ಮೊದಲ ಹಾಡು ಬಿಡುಗಡೆಯಾಗಿದೆ.

ಭಾರೀ ಟ್ರೆಂಡಿಂಗ್‌ನಲ್ಲಿ 'ನಿರ್ಗತಿಕ' ಪದ.., ಬಿಸಿಬಿಸಿ ಚರ್ಚೆ; ಫುಲ್ ಟ್ರೋಲ್ ಆಗುತ್ತಿರುವ ಪ್ರಕಾಶ್ ರಾಜ್!

Latest Videos
Follow Us:
Download App:
  • android
  • ios