ಪ್ರಾಣಿಗಳ ಬಳಕೆ; ರಶ್ಮಿಕಾ ಮಂದಣ್ಣ ತಮಿಳು ಸಿನಿಮಾಗೆ ನೋಟಿಸ್
ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ವರಿಸು ಸಿನಿಮಾ ಸಂಕಷ್ಟದಲ್ಲಿ ಸಿಲುಕಿದೆ. ಪ್ರಾಣಿ ದಯಾ ಸಂಘದವರು ಚಿತ್ರತಂಡಕ್ಕೆ ನೋಟಿಸ್ ನೀಡಿದೆ.
ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ವರಿಸು ಸಿನಿಮಾ ಸಂಕಷ್ಟದಲ್ಲಿ ಸಿಲುಕಿದೆ. ಸದ್ಯ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ನಡುವೆ ಪ್ರಾಣಿ ದಯಾ ಸಂಘದವರು ಚಿತ್ರತಂಡಕ್ಕೆ ನೋಟಿಸ್ ನೀಡಿದೆ. ಅಧಿಕಾರಿಗಳ ಅನುಮತಿ ಇಲ್ಲದೆ ಸಿನಿಮಾತಂಡ ಚಿತ್ರೀಕರಣದಲ್ಲಿ ಆನೆಗಳನ್ನು ಬಳಸಿಕೊಂಡ ಪರಿಣಾಮ ಪ್ರಾಣಿ ದಯಾ ಸಂಘ ನೋಟಿಸ್ ನೀಡಿದೆ. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವಿವರಣೆ ನೀಡುವಂತೆ ಅರಣ್ಯಾದಿಕಾರಿಗಳು ವರಿಸು ತಂಡಕ್ಕೆ ಸೂಚಿಸಿದ್ದಾರೆ. ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಿಯಮಗಳ ಪ್ರಕಾರ ಪ್ರಾಣಿಗಳನ್ನು ಶೂಟಿಂಗ್‌ನಲ್ಲಿ ಬಳಸಬಾರದು. ಪ್ರಾಣಿಗಳನ್ನು ಬಳಸಿದರೆ ಪ್ರತಿಯೊಬ್ಬ ವ್ಯಕ್ತಿಯು ನೋಂದಾಯಿಸಿಕೊಳ್ಳಬೇಕು. ಆದರೆ ವರಿಸು ತಂಡ ನಿಯಮದ ಪ್ರಕಾರ ಪ್ರಾಣಿಗಳನ್ನು ಬಳಸಿಕೊಂಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವರಿಸು ನಿರ್ಮಾಪಕರು ಯಾವುದೇ ಹೇಳಿಕೆ ನೀಡಿಲ್ಲ.
ದಳಪತಿ ವಿಜಯ್ ನಾಯಕನಾಗಿ ನಟಿಸುತ್ತಿರುವ ವರಿಸು ಸಿನಿಮಾಗೆ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ನಿರ್ಮಾಪಕ ದಿಲ್ ರಾಜು ಬಂಡವಾಳ ಹೂಡಿದ್ದಾರೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇತ್ತೀಚಿಗಷ್ಟೆ ಸಿನಿಮಾದ ಮೇಕಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದಳಪತಿ ವಿಜಯ್ ಅವರ ಸ್ಟೈಲಿಶ್ ಲುಕ್ ಅಭಿಮಾನಿಗಳ ಗಮನ ಸೆಳೆದಿತ್ತು. ಅಂದಹಾಗೆ ಈ ಸಿನಿಮಾದಲ್ಲಿ ವಿಜಯ್ ವಿದೇಶದಿಂದ ತಾಯ್ನಾಡಿಗೆ ವಾಪಾಸ್ ಆಗಿರುವ ಎನ್ ಆರ್ ಐ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ನಿರ್ದೇಶಕ ವಂಶಿ ಪೈಡಿಪುಲಿ ಮತ್ತು ತೆಲುಗು ಸ್ಟಾರ್ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಬಂದ ಮಹರ್ಷಿ ಸಿನಿಮಾದಲ್ಲೂ ಇದೇ ರೀತಿಯ ಕಥೆ ಇತ್ತು. ಮಹೇಶ್ ಬಾಬು ವಿದೇಶದಿಂದ ವಾಪಾಸ್ ಆಗುವ ಕಥೆ ಇತ್ತು. ಮಹರ್ಷಿ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದ ಮೇಲು ನಿರೀಕ್ಷೆ ಹೆಚ್ಚಾಗಿದೆ.
ದಳಪತಿ ವಿಜಯ್ ತೋಳಲ್ಲಿ ಪುಟ್ಟ ಕಂದ; ವೈರಲ್ ಫೋಟೋದಲ್ಲಿರುವ ಮಗು ಯಾರದ್ದು?
ವರಿಸು ಸಿನಿಮಾದಲ್ಲಿ ವಿಜಯ್ ಮತ್ತು ರಶ್ಮಿಕಾ ಜೊತೆಗೆ ಯೋಗಿ ಬಾಬಾ, ಶರತ್ ಕುಮಾರ್, ಪ್ರಭು, ಪ್ರಕಾಶ್ ರಾಜ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ನಟ ವಿಜಯ್ ಈ ಕೊನನೆಯದಾಗಿ ಬೀಸ್ಟ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.ಈ ಸಿನಿಮಾ ಕೆಜಿಎಫ್-2 ರಿಲೀಸ್‌ಗೂ ಒಂದು ದಿನ ಮೊದಲು ರಿಲೀಸ್ ಆಗಿತ್ತು. ಆದರೆ ಈ ಸಿನಿಮಾ ಹೇಳಿಕೊಳ್ಳುವಷ್ಟು ಯಶಸ್ಸು ಕಾಣಲಿಲ್ಲ. ಬಾಕ್ಸ್ ಆಫೀಸ್ ನಲ್ಲೂ ಸೋಲು ಕಂಡಿತ್ತು. ಇದೀಗ ವರಿಸುಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಕೈ ತುತ್ತು ಕೊಟ್ಟು ಬೆಳೆಸಿದ ಮನೆಯನ್ನೇ ಮರೆತ ಕಿರಿಕ್ ಹುಡುಗಿ: ತಿರುಗೇಟು ಕೊಟ್ಟ ರಿಷಬ್ ಶೆಟ್ಟಿ
ಇನ್ನು ರಶ್ಮಿಕಾ ಮಂದಣ್ಣ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಇತ್ತೀಚಿಗಷ್ಟೆ ರಶ್ಮಿಕಾ ಗುಡ್‌ಬೈ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಸದ್ಯ ರಣಬೀರ್ ಕಪೂರ್ ಜೊತೆ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಪುಷ್ಪ-2ನಲ್ಲಿ ಬ್ಯುಸಿಯಾಗಿದ್ದಾರೆ.