KGF 2 ಅಬ್ಬರದ ನಡುವೆ ವಿಜಯ್ 'ಬೀಸ್ಟ್' ಸಿನಿಮಾ ಗಳಿಸಿದೆಷ್ಟು?
ರಾಕಿಂಗ್ ಸ್ಟಾರ್ ನಟನೆಯ ಕೆಜಿಎಫ್-2 ಅಬ್ಬರದ ನಡುವೆ ತಮಿಳು ನಟ ವಿಜಯ್ ನಟನೆಯ ಬೀಸ್ಟ್ ಸಿನಿಮಾ 2ನೇ ದಿನಕ್ಕೆ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಲಾಗಿದೆ ಎಂದು ಸಿನಿಮಾ ವಿಶ್ಲೇಷಕ ರಮಶ್ ಬಾಲಾ ಮಾಹಿತಿ ಹಂಚಿಕೊಂಡಿದ್ದಾರೆ.
ತಮಿಳಿನ ಖ್ಯಾತ ನಟ ವಿಜಯ್(Thalapathy Vijay) ಅಭಿನಯದ ಬೀಸ್ಟ್ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ವಿಶ್ವದಾದ್ಯಂತ ಕೆಜಿಎಫ್-2(KGF 2) ಸಿನಿಮಾದ ಕ್ರೇಜ್ ಹೆಚ್ಚಾಗಿದ್ದರೂ ಸಹ ವಿಜಯ್ ಬೀಸ್ಟ್(Beast) ಸಿನಿಮಾತಂಡ ಅದೇ ಸಮಯದಲ್ಲಿ ಸಿನಿಮಾ ಬಿಡುಗಡೆ ಮಾಡುವ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ತಮಿಳಿನ ಖ್ಯಾತ ನಟ, ಅಪಾರ ಸಂಖ್ಯೆಯ ಫ್ಯಾನ್ಸ್ ಫಾಲೋವರ್ಸ್ ಹೊಂದಿರುವ ನಟ ವಿಜಯ್ ಕೆಜಿಎಫ್-2 ವಿರುದ್ಧ ಗೆದ್ದೇ ಗೆಲ್ಲುತ್ತೀವಿ ಎನ್ನುವ ಚಾಲೆಂಜ್ ಮೇಲೆ ಸಿನಿಮಾ ಬಿಡುಗಡೆ ಮಾಡಿದ ಹಾಗಿತ್ತು. ಆದರೆ ರಾಕಿ ಭಾಯ್ ಹವಾದಲ್ಲಿ ಬೀಸ್ಟ್ ಮುಳುಗೇ ಹೋಗಿದೆ. ಆದರೆ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಮಾಯಿ ಮಾಡಿದೆ ಎಂದು ಸಿನಿ ಪಂಡಿತರು ಹೇಳುತ್ತಿದ್ದಾರೆ.
ಪ್ರೇಕ್ಷಕರಿಂದ ವಿಜಯ್ ಬೀಸ್ಟ್ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಬಿಡುಗಡೆಯಾಗಿ 2ನೇ ದಿನಗಳಲ್ಲಿ ವಿಶ್ವದಾದ್ಯಂತ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ(Beast Collection). ಈ ಬಗ್ಗೆ ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಬೀಸ್ಟ್ ಸಿನಿಮಾ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಿದ್ದಾರೆ. ಕೆಜಿಎಫ್-2 ಬಿಡುಗಡೆ ದಿನ ಹಿಂದಿಯಲ್ಲಿ ಬೀಸ್ಟ್ ಸಿನಿಮಾ 50 ಲಕ್ಷ ರೂಪಾಯಿ ಬಾಚಿಕೊಂಡಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
Thalapathy Vijay ಕಲಿಸಿದ ಆ ಒಂದು ಪಾಠ Priyanka Chopra ಇನ್ನೂ ಮರೆತಿಲ್ಲ
ಬೀಸ್ಟ್ ಸಿನಿಮಾದಲ್ಲಿ ದಳಪತಿ ವಿಜಯ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯಾದಾಗಿಂತ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆ ಪ್ರಾರಂಭವಾಗಿತ್ತು. ಭಯೋತ್ಪಾದಕರಿಂದ ಜನರನ್ನು ಏಕಾಂಗಿಯಾಗಿ ಹೋರಾಡಿ ರಕ್ಷಿಸುವ ಸೈನಿಕನ ಪಾತ್ರದಲ್ಲಿ ವಿಜಯ್ ಕಾಣಿಸಿಕೊಂಡಿದ್ದರು. ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದರು. ಮೊದಲ ಬಾರಿಗೆ ಪೂಜಾ ಹೆಗ್ಡೆ, ವಿಜಯ್ ಜೊತೆ ನಟಿಸಿದ್ದರು. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುತ್ತಿರುವ ನಟಿ ಪೂಜಾ ಹೆಗ್ಡೆ ಬೀಸ್ಟ್ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
10 ವರ್ಷಗಳ ಬಳಿಕ ನೀಡಿದ ಸಂದರ್ಶನದಲ್ಲಿ ರಾಜಕೀಯ ಎಂಟ್ರಿ ಬಗ್ಗೆ ದಳಪತಿ ವಿಜಯ್ ಸುಳಿವು
ವಿಜಯ್ 10 ವರ್ಷದ ಬಳಿಕ ಸಂದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಸನ್ ಟಿವಿಯಲ್ಲಿ ಪ್ರಸಾರವಾಗಿದ್ದ ಸಂದರ್ಶನದಲ್ಲಿ ಅನೇಕ ವಿಚಾರಗಳ ಬಗ್ಗೆ ಬಹಿರಂಗ ಪಡಿಸಿದ್ದರು. ಮಗನ ಸಿನಿಮಾ ಎಂಟ್ರಿ, ರಾಜಕೀಯ ಪ್ರವೇಶ ಸೇರಿದಂತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದರು. 10 ವರ್ಷಗಳಿಂದ ಸಂದರ್ಶನದಿಂದ ದೂರ ಉಳಿದ ಕಾರಣವನ್ನು ವಿಜಯ್ ಬಹಿರಂಗ ಪಡಿಸಿದ್ದರು. 10 ವರ್ಷಗಳ ಹಿಂದೆ ನೀಡಿದ್ದ ಸಂದರ್ಶನದಲ್ಲಿ ವಿಜಯ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವಿವಾದ ಮಾಡಲಾಗಿತ್ತು ಎನ್ನುವ ಕಾರಣಕ್ಕೆ ವಿಜಯ್ ಸಂದರ್ಶನ ನೀಡುವುದನ್ನೇ ನಿಲ್ಲಿಸಿದ್ದರು. ಆದರೆ ಬೀಸ್ಟ್ ಸಿನಿಮಾ ಬಿಡುಗಡೆ ವೇಳೆ ವಿಜಯ್ ಮತ್ತು ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಮಾತುಕತೆಯನ್ನು ಸನ್ ಟಿವಿ ಪ್ರಸಾರ ಮಾಡಿತ್ತು.