ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವಿಕೇೆಂಡ್ ನಲ್ಲಿ ದಾಖಲೆ ಗಳಿಕೆ ಮಾಡಿದೆ. ಶನಿವಾರ ಒಂದೇ ದಿನ ಸಿನಿಮಾ 24.80 ಕೋಟಿ ಬಾಚಿಕೊಂಡರೆ ಭಾನುವಾರ 26.20 ಕೋಟಿ ಕಲೆಕ್ಷನ್ ಮಾಡಿದೆ. ಇದುವರೆಗೂ ಒಟ್ಟು 168 ಕೋಟಿ ಬಾಚಿಕೊಂಡಿದೆ ಎಂದು ವರದಿಯಾಗಿದೆ. 

ದಿ ಕಾಶ್ಮೀರ್ ಫೈಲ್ಸ್(The Kashmir Files) ಸಿನಿಮಾ ಭಾರತದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಕೋಟಿ ಕೋಟಿ ಬಾಚಿಕೊಳ್ಳುತ್ತಿರುವ ದಿ ಕಾಶ್ಮೀರ್ ಫೈಲ್ಸ್ ವೀಕೆಂಡ್ ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿ ಗಮನ ಸೆಳೆದಿದೆ. ದಿ ಕಾಶ್ಮೀಕ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಸಿನಿಮಾ ನೋಡಿ ಅನೇಕರು ಮೆಚ್ಚಿಕೊಂಡರೆ ಇನ್ನು ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಿ 10 ದಿನಗಳಾದರೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ.

1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಬಗ್ಗೆ ಈ ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ((Vivek Agnihotri) ಸಾರಥ್ಯದಲ್ಲಿ ಬಂದ ಈ ಚಿತ್ರಕ್ಕೆ ಸಿನಿ ಗಣ್ಯರು ಮಾತ್ರವಲ್ಲದೆ ಅನೇಕ ರಾಜಕೀಯ ಗಣ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಹಾಡಿಹೊಗಳುತ್ತಿದ್ದಾರೆ. ಎಂತಹ ಸಿನಿಮಾ ನೀಡಿದ್ದೀರಿ ಎಂದು ಅಗ್ನಿಹೋತ್ರಿಗೆ ಗಣ್ಯಾತಿಗಣ್ಯರು ಶಹಭಾಷ್ ಗಿರಿ ನೀಡುತ್ತಿದ್ದಾರೆ.

ಕಲೆಕ್ಷನ್ ವಿಚಾರದಲ್ಲಿ ದಾಖಲೆ ನಿರ್ಮಿಸಿರುವ ದಾ ಕಾಶ್ಮೀರ್ ಫೈಲ್ಸ್ ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಈಗಾಗಲೇ ಕಾಶ್ಮೀರ್ ಫೈಲ್ಸ್ ಸಿನಿಮಾ ಇದುವೆರೆಗೂ ಅಂದರೆ 10 ದಿನಗಳಲ್ಲಿ ಒಟ್ಟು 168 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿಯಾಗಿದೆ(The Kashmir Files boxoffice collection Day 10). ಶನಿವಾರ ಮತ್ತು ಭಾನುವಾರ ರಜೆದಿನಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ದಾಖಲೆ ಗಳಿಕೆ ಮಾಡಿದೆ. ಶನಿವಾರ ಒಂದೇ ದಿನ ಸಿನಿಮಾ 24.80 ಕೋಟಿ ಬಾಚಿಕೊಂಡರೆ ಭಾನುವಾರ 26.20 ಕೋಟಿ ಕಲೆಕ್ಷನ್ ಮಾಡಿದೆ. ಈ ಬಗ್ಗೆ ಬಾಲಿವುಡ್ ಸಿನಿಮಾ ವಿಶ್ಲೇಶಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ. ಈಗಾಗಲೆ 168 ಕೋಟಿ ರೂ. ಗಳಿಸಿರುವ ಸಿನಿಮಾ ಸದ್ಯದಲ್ಲೇ 200 ಕೋಟಿ ಕ್ಲಬ್ ದಾಟಿ ಮುನ್ನುಗ್ಗಲಿದೆ ಎಂದು ಅಂದಾಜಿಸಲಾಗಿದೆ.

The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಬಚ್ಚನ್ ಪಾಂಡೆ ಸಿನಿಮಾ ಪೈಪೋಟಿ ನೀಡಲಿದೆ ಎನ್ನಲಾಗಿತ್ತು. ಅಕ್ಷಯ್ ಕುಮಾರ್ ನಟನೆಯ ಬಚ್ಚನ್ ಪಾಂಡೆ ಸಿನಿಮಾ ಕೂಡ ಬಿಡುಗಡೆಯಾಗಿದ್ದು ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ಅಕ್ಷಯ್ ಸಿನಿಮಾವನ್ನು ಮೀರಿಸಿ ಕಾಶ್ಮೀರ್ ಫೈಲ್ಸ್ ದಾಖಲೆ ಗಳಿಕೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಕಾಶ್ಮೀರ್ ಫೈಲ್ಸ್ ಕಲೆಕ್ಷನ್ ಇದೇ ವೇಗದಲ್ಲಿ ಮುನ್ನುಗ್ಗಿದರೆ ಸದ್ಯದಲ್ಲೇ 300 ಕೋಟಿ ಕ್ಲಬ್ ಸೇರಿದರೂ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ ವಿಶ್ಲೇಶಕರು.

ಆಮೀರ್ ಖಾನ್ ಪ್ರತಿಕ್ರಿಯೆ

ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್(Aamir Khan) ಪ್ರತಿಕ್ರಿಯೆ ನೀಡಿದ್ದಾರೆ. ಖಂಡಿತವಾಗಿಯೂ ಈ ಸಿನಿಮಾ ನೋಡುತ್ತೇನೆ ಎಂದು ಆಮೀರ್ ಖಾನ್ ಹೇಳಿದ್ದಾರೆ. 'ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ. ಈ ಕತೆ ನಮ್ಮ ಇತಿಹಾಸದ ಒಂದು ಭಾಗವಾಗಿದೆ. ಕಾಶ್ಮೀರಿ ಪಂಡಿತರಿಗೆ ಏನಾಯಿತು ಎನ್ನುವುದು ನಿಜಕ್ಕೂ ದುಃಖಕರವಾಗಿದೆ. ಅಂತಹ ವಿಷಯದ ಮೇಲೆ ಯಾವುದೇ ಸಿನಿಮಾ ಬಂದರೂ ಭಾರತೀಯರು ನೋಡಬೇಕು. ಈ ಚಿತ್ರ ಮಾನವೀತೆ ಇರುವ ಎಲ್ಲಾ ಜನರ ಭಾವನೆಗಳನ್ನು ಮುಟ್ಟಿದೆ' ಎಂದು ಹೇಳಿದ್ದಾರೆ. 

The Kashmir Files ಚಿತ್ರ ನೋಡಿ ವಾಪಸಾಗುವ ವೇಳೆ ಬಿಜೆಪಿ ಸಂಸದನ ಮೇಲೆ ಬಾಂಬ್ ದಾಳಿ!

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ.