ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಆಮ್ ಆದ್ಮಿ ಪಕ್ಷದ ನಾಯಕ ರಾಘವ್​ ಚಡ್ಡಾ ಅವರ ಮದುವೆ ಡೇಟ್​ ಫಿಕ್ಸ್​ ಆಗಿದ್ದು, ಅದರ ಡಿಟೇಲ್ಸ್​ ಇಲ್ಲಿದೆ.  

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರೊಂದಿಗೆ ಮೇ 13 ರಂದು ದೆಹಲಿಯಲ್ಲಿ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದು, ಅವರ ಮದುವೆಗಾಗಿ ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದರು. ಎಂಗೇಜ್​ಮೆಂಟ್​ಗೂ ಮೊದಲು ಈ ಪ್ರೇಮ ಪಕ್ಷಿಗಳು ಸ್ವಲ್ಪ ಸಮಯದವರೆಗೆ ಪರಸ್ಪರ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹಲವು ತಿಂಗಳುಗಳಿಂದ ಸುದ್ದಿಯಾಗಿದ್ದರೂ, ಜೋಡಿ ಮಾತ್ರ ಇದರ ಬಗ್ಗೆ ತುಟಿಕ್​ ಪಿಟಿಕ್​ ಎಂದಿರಲಿಲ್ಲ. ನಂತರ ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಪರಿಣಿತಿ (Parineeti Chopra) ಮತ್ತು ಎಎಪಿ ಸಂಸದ ರಾಘವ್ ಚಡ್ಡಾ ಒಟ್ಟಿಗೆ ಕಾಣಿಸಿಕೊಂಡಿದ್ದಾಗ ಸುದ್ದಿ ಮತ್ತಷ್ಟು ಹರಡಿತ್ತು. ಕೊನೆಗೆ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜೀವ್ ಅರೋರಾ ಟ್ವೀಟ್ ಮಾಡಿ ಸುದ್ದಿಯನ್ನು ಕನ್​ಫರ್ಮ್​ ಮಾಡಿದ್ದರೂ ಜೋಡಿ ಮಾತ್ರ ಮೌನ ತಾಳಿತ್ತು. ನಂತರ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಎಲ್ಲರ ಕುತೂಹಲಕ್ಕೆ ತೆರೆ ಎಳೆದಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ಈ ಜೋಡಿಯ ಮದುವೆಯ ಕುರಿತು ಬಿಗ್​ ಅಪ್​ಡೇಟ್​ ಹೊರಬಿದ್ದಿದೆ. ಸೆಪ್ಟೆಂಬರ್ 23 ಮತ್ತು 24 ರಂದು ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯವಿಲಾಸ್‌ನಲ್ಲಿ ನಡೆಯಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಪಿಚೋಲಾ ಸರೋವರದ ಮೇಲೆ ನಿರ್ಮಿಸಲಾದ ಐಷಾರಾಮಿ ಹೋಟೆಲ್‌ನಲ್ಲಿ ಈ ಮದುವೆ ನಡೆಯಲಿದೆ. ಈ ಹೋಟೆಲ್​ನ ದಿನದ ಬಾಡಿಗೆ ಗರಿಷ್ಠ 10 ಲಕ್ಷದವರೆಗೆ ಇದೆ. ಈ ಐಷಾರಾಮಿ ಹೋಟೆಲ್‌ನಲ್ಲಿ ಮದುವೆ ನಡೆಯಲಿದೆ. ಪರಿಣಿತಿ ಚೋಪ್ರಾ ಅವರ ಸೋದರ ಸಂಬಂಧಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್ ವಿವಾಹದ ಭಾಗವಾಗಲಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಅದ್ದೂರಿ ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಕೌಂಟರ್ ಭಗವಂತ್ ಮಾನ್ ಮತ್ತು ಇತರರು ಭಾಗವಹಿಸುವ ಸಾಧ್ಯತೆ ಇದೆ.

ಮಾಲೆ ಧರಿಸಿ ಮಹಾಕಾಲ್​ ​ದೇಗುಲದಲ್ಲಿ ಮಂತ್ರಘೋಷಗಳ ನಡುವೆ ಪರಿಣಿತಿ-ರಾಘವ್​ ಜೋಡಿ!

 ಹಳದಿ ಶಾಸ್ತ್ರ, ಮೆಹಂದಿ ಮತ್ತು ಸಂಗೀತವು ಸೆಪ್ಟೆಂಬರ್ 23 ರಂದು ಪ್ರಾರಂಭವಾಗಲಿದೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮ್‌ನಲ್ಲಿ ಆರತಕ್ಷತೆ ನಡೆಯಲಿದ್ದು, ಈ ಮದುವೆಗೆ 200 ಕ್ಕೂ ಹೆಚ್ಚು ಅತಿಥಿಗಳು ಮತ್ತು 50 ಕ್ಕೂ ಹೆಚ್ಚು ವಿವಿಐಪಿ ಅತಿಥಿಗಳಿಗೆ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಇಬ್ಬರ ವಿವಾಹವು ಪಂಜಾಬಿ ಶೈಲಿಯಲ್ಲಿ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಕೆಲ ದಿನಗಳ ಹಿಂದೆ ಪರಿಣಿತಿ ಚೋಪ್ರಾ ಮತ್ತು ರಾಘವ್​ ಚಡ್ಡಾ ಉಜ್ಜಯಿನಿಯ ಮಹಾಕಾಲ್​ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಸೀರೆಯುಟ್ಟ ಪರಿಣಿತಿ ಅಪ್ಪಟ ಗೃಹಿಣಿಯಂತೆಯೇ ವಿಡಿಯೋದಲ್ಲಿ ಕಂಗೊಳಿಸುತ್ತಿದ್ದರೆ, ರಾಘವ್​ ಚಡ್ಡಾ ಅವರೂ ರಾಜಕಾರಣಿ ಹೊರತಾಗಿ ಪಂಚೆತೊಟ್ಟು ಮಂದಿರಲ್ಲಿ ಕಾಣಿಸಿಕೊಂಡಿದ್ದರು. ಇಬ್ಬರೂ ಮಾಲೆ ಧರಿಸಿ ಕುಂಕುಮ ಹಚ್ಚಿಕೊಂಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ಹಾಗೂ ನಂತರ ಹೊರಕ್ಕೆ ಬಂದಿರುವ ದೃಶ್ಯ ವೈರಲ್​ ಆಗಿದ್ದವು. 

ಅಂದಹಾಗೆ ನಟಿ (Parineeti Chopra), ಈ ಮೊದಲು ರಾಜಕಾರಣಿಯನ್ನು ಮದುವೆಯಾಗುವುದಿಲ್ಲ ಎಂದಿದ್ದರು. ಅದರ ವಿಡಿಯೋ ಈಚೆಗೆ ಸಕತ್​ ವೈರಲ್​ ಆಗಿತ್ತು. ಸಿನಿಮಾವೊಂದರ ಪ್ರಚಾರದ ಸಂದರ್ಭದಲ್ಲಿ ಪತ್ರಕರ್ತರು ಮದುವೆಯ ಕುರಿತು ಕೇಳಿದ್ದ ಪ್ರಶ್ನೆಗೆ ನಟಿ ಪರಿಣಿತಿ, ಒಬ್ಬ ರಾಜಕಾರಣಿ ನನ್ನ ಗಂಡನಾಗಲು ಸಾಧ್ಯವಿಲ್ಲ. ಅದು ನನ್ನ ಮೊದಲ ಆಯ್ಕೆಯಾಗುವುದಿಲ್ಲ ಎಂದಿದ್ದರು. ನಾನು ರಾಜಕಾರಣಿಯನ್ನು ಮದುವೆಯಾಗಲು ಬಯಸುವುದಿಲ್ಲ. ಹಲವು ಉತ್ತಮ ಆಯ್ಕೆಗಳು ಇರುವಾಗ ರಾಜಕಾರಣಿಯನ್ನು ಯಾರು ಮದುವೆಯಾಗುತ್ತಾರೆ ಎಂದಿದ್ದರು. ಸ್ವಯಂ ನಿರ್ಮಿತ ಪುರುಷನನ್ನು ಜೀವನ ಸಂಗಾತಿಯನ್ನಾಗಿ ಬಯಸುತ್ತೇನೆ. ನಾನು ಸ್ವಾಭಿಮಾನ ಹೊಂದಿರುವ, ತಮ್ಮನ್ನು ತಾವು ರೂಪಿಸಿಕೊಂಡ ಪುರುಷರನ್ನು ಇಷ್ಟಪಡುತ್ತೇನೆ. ರಾಜಕಾರಣಿ ನನ್ನ ಆಯ್ಕೆಯಾಗಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಮದುವೆ ಸ್ವರ್ಗದಲ್ಲಿಯೇ ಆಗಿರುತ್ತದೆ ಎನ್ನುವ ಮಾತಿನಂತೆ ಈಗ ರಾಜಕಾರಣಿಗೇ ನಟಿ ಒಲಿದಿದ್ದಾರೆ. 

ಅಮಾನತಿಗೂ ಮೊದಲು ಪರಿಣಿತಿ ಚೋಪ್ರಾ ಜೊತೆ ರಾಘವ್ ಚಡ್ಡಾ, ವಿಡಿಯೋ ವೈರಲ್!