Asianet Suvarna News Asianet Suvarna News
breaking news image

ಡ್ರೆಸ್​ನಿಂದ ಉದುರಿದ ಹೂವು, ಎಲೆಗಳು... ಅಬ್ಬಬ್ಬಾ ಉರ್ಫಿಗೆ ಉರ್ಫಿನೇ ಸಾಟಿ ಕಣ್ಲಾ ಅಂತಿದ್ದಾರೆ ಫ್ಯಾನ್ಸ್​..

ಉರ್ಫಿ ಮ್ಯಾಜಿಕ್​ ಡ್ರೆಸ್​ ಧರಿಸಿದ್ದು, ಅದರಿಂದ ಹೂವು, ಎಲೆಗಳು ಉದುರುವುದನ್ನು ನೋಡಬಹುದು. ಇದನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. 
 

Urfi is wearing a magic dress from which flowers and leaves can be seen falling suc
Author
First Published May 2, 2024, 9:49 PM IST

ಕೆಲ ದಿನಗಳ ಹಿಂದೆ ನಟಿ ಉರ್ಫಿ ಜಾವೇದ್​ ಬಟ್ಟೆಗೇ ಎರಡು ಫ್ಯಾನ್​ ಸಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದರು.  . ಅದೂ ದೇಹದ ಭಾಗದ ಅತ್ತ ಇತ್ತ ಫ್ಯಾನ್​ ಜೋಡಿಸಿಕೊಂಡಿದ್ದರು. ಅದು ತಿರುಗಿತ್ತು ಕೂಡ.  ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು,  ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು. ಇದೀಗ ನಟಿ ಬಟ್ಟೆಯ ಮೇಲೆ ಹೂವು, ಎಲೆಗಳನ್ನು ಇರಿಸಿಕೊಂಡು, ಅದು ಮ್ಯಾಜಿಕ್​ ರೀತಿಯಲ್ಲಿ ಉದುರುವ ಹಾಗೆ ಮಾಡಿದ್ದಾರೆ. ಇದನ್ನು ನೋಡಿ ಉರ್ಫಿ ಜಾವೇದ್​ ಫ್ಯಾನ್ಸ್​ ಫಿದಾ ಆಗಿದ್ದು, ನಿಮಗೆ ನೀವೇ ಸಾಟಿ ಎನ್ನುತ್ತಿದ್ದಾರೆ. 

ಅಷ್ಟಕ್ಕೂ,  ಉರ್ಫಿ ಎಂದರೆ, ಚಿತ್ರ ವಿಚಿತ್ರ ಡ್ರೆಸ್​ಗಳಿಂದಲೇ ಸೋಷಿಯಲ್​ ಮೀಡಿಯಾ ಸೆನ್ಸೇಷನ್​ ಆದವರು.  ಉರ್ಫಿ ಜಾವೇದ್​ (Uorfi Javed) ಎಂದಾಕ್ಷಣ ಎಲ್ಲರ ಕಣ್ಣುಮುಂದೆ ಬರುವುದು ಅತ್ಯಂತ ಕನಿಷ್ಠ ಉಡುಪು ಅಥವಾ ಉಡುಪೇ ಇಲ್ಲದ ನಟಿಯ ರೂಪ. ಚುಮುಚುಮು ಚಳಿಯಲ್ಲಿಯೂ ಮೈಮೇಲೆ ತುಂಡು ಬಟ್ಟೆಯುಟ್ಟು ಪಡ್ಡೆ ಹುಡುಗರ ಬಿಸಿ ಏರಿಸ್ತಿರೋ ಈ ನಟಿ  ಸೋಷಿಯಲ್ ಮೀಡಿಯಾದಲ್ಲಿ  (Social media) ಸೆನ್ಸೇಷನ್ ಕ್ರಿಯೇಟ್​ ಮಾಡ್ತಿರೋದು ಹೊಸ ವಿಷಯವೇನಲ್ಲ. ಪ್ರತಿದಿನವೂ ಎಂಬಂತೆ ವಿಶಿಷ್ಟ ರೀತಿಯಲ್ಲಿ ಉಡುಗೆ ತೊಟ್ಟು ಅದರ ಫೋಟೋಶೂಟ್​ ಮಾಡಿಸಿಕೊಂಡು ಜಾಲತಾಣದಲ್ಲಿ ಪೋಸ್ಟ್​ ಮಾಡುವುದರಲ್ಲಿ ಉರ್ಫಿಯದ್ದು ಎತ್ತಿದ ಕೈ. 

ಉರ್ಫಿ ಎದುರಿದ್ದರೆ ತಿರುಗುತ್ತೆ ಫ್ಯಾನ್​, ಕೂಲೋ ಕೂಲ್​: ಇಂಥ ಐಡಿಯಾ ಯಾರಿಗೂ ಬರಲು ಸಾಧ್ಯನೇ ಇಲ್ಲ ಬಿಡಿ!

ಒಮ್ಮೊಮ್ಮೆ ಬಟ್ಟೆಯೂ ಇಲ್ಲದೆ, ಕೈಗೆ ಸಿಕ್ಕ ವಸ್ತುಗಳಿಂದ ಖಾಸಗಿ ಅಂಗಗಳನ್ನು ಮುಚ್ಚಿಕೊಂಡು ಪೋಸ್​ ನೀಡಿರುವ ಫೋಟೋಗಳೂ ಕಮ್ಮಿಯೇನಲ್ಲ. ದಿನವೂ ಬಟ್ಟೆಗಳಿಂದಲೇ ಟ್ರೋಲ್​ (Troll) ಆಗುವುದು ಎಂದರೆ ತುಂಬಾ ಖುಷಿಯ ಹಾಗೆ ಕಾಣಿಸುತ್ತಿದೆ. ಇದೇ  ಕಾರಣಕ್ಕೆ  ಮುಂಬೈನ ರೆಸ್ಟೋರೆಂಟ್‌ಗೆ ತಮಗೆ ಎಂಟ್ರಿ ಸಿಗಲಿಲ್ಲ, ಯಾರೂ ಮನೆ ಬಾಡಿಗೆ ಕೊಡುತ್ತಿಲ್ಲ ಎಂದೆಲ್ಲಾ ಗೋಳೋ ಅನ್ನುತ್ತಿದ್ದರೂ ನಟಿ  ಅರೆಬರೆ ಡ್ರೆಸ್​ ರುಚಿ ನೋಡಿ ಅದನ್ನು ಮಾತ್ರ ಬಿಡುತ್ತಿಲ್ಲ.

ಅಷ್ಟಕ್ಕೂ ನಟಿ, ಕೆಲ ದಿನಗಳ ಹಿಂದೆ  ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು.  ಇದಕ್ಕಾಗಿ ಈಕೆಯನ್ನು ಆಧುನಿಕ ಶ್ರೀಕೃಷ್ಣ ಎಂದಿದ್ದರು ಅಭಿಮಾನಿಗಳು. ಉಡುಪಿನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಈಕೆಯ ಉಡುಪು ತಿರುಗುವಂತೆ ಮಾಡಲಾಗಿದ್ದು, ಅದರಲ್ಲಿ ಗ್ರಹಗಳನ್ನು ನೋಡಬಹುದಾಗಿದೆ. ಆರಂಭದಲ್ಲಿ ಕೆಲವರು ನಟಿಯ ಕೈಹಿಡಿದು ಕರೆದುಕೊಂಡು ಬಂದಿದ್ದರು. ಆ ಬಳಿಕ ನಟಿಯ ಉಡುಪನ್ನು ಗಮನಿಸಿದರೆ, ಬ್ರಹ್ಮಾಂಡವನ್ನು ನೋಡಬಹುದಾಗಿದೆ. ಇದನ್ನು ನೋಡಿ ಅಭಿಮಾನಿಗಳು ಉಫ್​ ಎನ್ನುತ್ತಿದ್ದಾರೆ. ನಿಮಗೆ ನೀವೇ ಸಾಟಿ ಎನ್ನುತ್ತಿದ್ದರೆ, ನಿಮ್ಮ ಡ್ರೆಸ್ಸಿಂಗ್​ ಸೆನ್ಸ್​ಗೆ ಹ್ಯಾಟ್ಸ್​ ಆಫ್​ ಎನ್ನುತ್ತಿದ್ದಾರೆ. ಮತ್ತೆ ಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವು ಎನ್ನುತ್ತಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಸೌಂಡ್​ ಮಾಡುತ್ತಿದೆ. 

ನಿಜಕ್ಕೂ ಈ ಹಾಟ್​ ಬ್ಯೂಟಿ ಅದೇ ಜಾಹೀರಾತಿನ ಬಾಲಕಿನಾ? ಊಹಿಸಲು ಸಾಧ್ಯವೇ ಇಲ್ಲ ನೋಡಿ..!

 

Latest Videos
Follow Us:
Download App:
  • android
  • ios