ಹಣವೇ ಜೀವನ, ಹಣವೇ ಸರ್ವಸ್ವ, ಹಣವೊಂದಿದ್ದರೆ... ಎನ್ನುತ್ತಲೇ ಬಟ್ಟೆಯ ಗುಟ್ಟನ್ನೂ ರಟ್ಟು ಮಾಡಿದ ಉರ್ಫಿ

ಚಿತ್ರ-ವಿಚಿತ್ರ ಬಟ್ಟೆಗಳಿಂದ ಸದ್ದು ಮಾಡ್ತಿರೋ ಉರ್ಫಿ ಜಾವೇದ್ ದೃಷ್ಟಿಯಲ್ಲಿ ಹಣ ಎಂದರೇನು? ಈಕೆಯ ಮಾತಿಗೆ ಪರ-ವಿರೋಧದ ನಿಲುವು ವ್ಯಕ್ತವಾಗ್ತಿರೋದ್ಯಾಕೆ?  

Urfi Javed says money is everything in life and it can bring happiness and all suc

ಉರ್ಫಿ ಜಾವೇದ್‌ ಎಂದಾಕ್ಷಣ ಕಣ್ಣಿಗೆ ಬರುವುದು ಚಿತ್ರ-ವಿಚಿತ್ರ ಅವತಾರದ ನಟಿಯೇ. ಒಮ್ಮೊಮ್ಮೆ ಬಟ್ಟೆಯೂ ಇಲ್ಲದೆ, ಕೈಗೆ ಸಿಕ್ಕ ವಸ್ತುಗಳಿಂದ ಖಾಸಗಿ ಅಂಗಗಳನ್ನು ಮುಚ್ಚಿಕೊಂಡು ಪೋಸ್​ ನೀಡುವ ನಟಿ ಈಕೆ.  ದಿನವೂ ಬಟ್ಟೆಗಳಿಂದಲೇ ಟ್ರೋಲ್​ (Troll) ಆಗುವುದು ಎಂದರೆ ತುಂಬಾ ಖುಷಿ ಈಕೆಗೆ.  ಇದೇ  ಕಾರಣಕ್ಕೆ  ಮುಂಬೈನ ರೆಸ್ಟೋರೆಂಟ್‌ಗೆ ತಮಗೆ ಎಂಟ್ರಿ ಸಿಗಲಿಲ್ಲ, ಯಾರೂ ಮನೆ ಬಾಡಿಗೆ ಕೊಡುತ್ತಿಲ್ಲ ಎಂದೆಲ್ಲಾ ಗೋಳೋ ಅನ್ನುತ್ತಿದ್ದರೂ ನಟಿಯ ವಿಚಿತ್ರ ವೇಷ ಮಾತ್ರ ಮುಂದುವರೆದೇ ಇದೆ. ಕೆಲ ದಿನಗಳ ಹಿಂದಷ್ಟೇ ನನ್ನದು ಫ್ಲ್ಯಾಟ್​ ಚೆಸ್ಟ್​ ಎಂದು ಹೇಳುವ ಡಿಜಿಟಲ್​ ಬೋರ್ಡ್​ ಹಾಕಿಕೊಂಡು ಸುತ್ತಾಡಿದ್ದ ಉರ್ಫಿ ಕೊನೆಗೆ ಎದೆ ಮೇಲೆ ಉಡ ಬಿಟ್ಕೊಂಡು ಸದ್ದು ಮಾಡಿದ್ದರು.  ಉಡ ಅವರ ಮೈಮೇಲೆ ಹರಿದಾಡುವಂತೆ ಕಾಣುವ ವಿಡಿಯೋ ಶೇರ್‌ ಮಾಡಿದ್ದರು. 

ಇದೀಗ ನಟಿ ತಮ್ಮ ಬಟ್ಟೆ, ಡ್ರೆಸ್ ಸೆನ್ಸ್, ಟೀಕೆ ಸೇರಿದಂತೆ ತಮ್ಮ ಜೀವನದಲ್ಲಿ ಹಣ ಎಷ್ಟು ಮಹತ್ವದ್ದು ಎನ್ನುವ ಬಗ್ಗೆ ಮಾತನಾಡಿದ್ದಾರೆ. ನಾನು ಏನೇ ಮಾಡಿದರೂ ಅದು ನನ್ನ ಸಲುವಾಗಿ. ನಾನು ಯಾರನ್ನೂ ಮೆಚ್ಚಿಸಬೇಕಿಲ್ಲ. ಯಾವುದೇ ಹೆಣ್ಣುಮಕ್ಕಳನ್ನು ಮೆಚ್ಚಿಸುವ ಉದ್ದೇಶವೂ ನನಗೆ ಇಲ್ಲ, ಯಾವುದೇ ಮಹಿಳೆಯರನ್ನು ಸಬಲೀಕರಣ ಮಾಡುವ ಉದ್ದೇಶವೂ ಇಲ್ಲ. ನಾನು ಇದನ್ನು ಫೇಮಸ್ ಆಗಲು ಮತ್ತು ಶ್ರೀಮಂತೆ ಆಗುವುದಕ್ಕಾಗಿ ಮಾಡುತ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ. ಯಾರು ಏನೇ ಹೇಳಿದರೂ ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ನೋಡಿ ಯಾರೂ ಮೆಚ್ಚಿಕೊಳ್ಳಬೇಕಾದದ್ದೂ ಇಲ್ಲ ಎಂದಿದ್ದಾರೆ ಉರ್ಫಿ.

ಕಾಲೇಜ್​ ಫಂಕ್ಷನ್​ನಲ್ಲಿ ಟಾಪ್​ ತೆಗೆಯುತ್ತಾ ಡಾನ್ಸ್​ ಮಾಡಿದ ವಿದ್ಯಾರ್ಥಿನಿ! ವಿಡಿಯೋ ನೋಡಿ ನೆಟ್ಟಿಗರು ಗರಂ

ಹೆಚ್ಚು ಹಣ ಬಂದ ತಕ್ಷಣ ಏನು ಮಾಡುವಿರಿ ಎನ್ನುವ ಪ್ರಶ್ನೆಗೆ ಉರ್ಫಿ, ನಾನು ರಾಯ್ಸ್ರಾಯ್ ಕಾರು ಖರೀದಿ ಮಆಡುತ್ತೇನೆ. ಇದು ನನ್ನ ಆಸೆ ಎಂದಿದ್ದಾರೆ. ಇದೇ ವೇಳೆ, ನಾನು ಹಣವನ್ನು ತುಂಬಾ ಇಷ್ಟಪಡುತ್ತೇನೆ. ಹಣ ಇದ್ದರೆ ಏನು ಬೇಕಾದರೂ ಮಾಡಲು ಸಾಧ್ಯ. ಪ್ರತಿಯೊಬ್ಬರ ಜೀವನದಲ್ಲಿಯೂ ಹಣಕ್ಕಿಂತ ಮುಖ್ಯವಾದದ್ದು ಏನೂ ಇಲ್ಲ. ಹಣ ಇದ್ದರೆ ಸುಖ ಪಡೆದುಕೊಳ್ಳಲು ಸಾಧ್ಯವಿಲ್ಲ ಎನ್ನುತ್ತಾರೆ. ಆದರೆ ಅದು ಸುಳ್ಳು. ಹಣ ಇದ್ದರೆ ಸುಖವನ್ನೂ ಪಡೆದುಕೊಳ್ಳಬಹುದು. ಜೀವನದಲ್ಲಿ ಏನುಬೇಕಾದರೂ ಮಾಡಬಹುದು. ಹಣವೇ ಮುಖ್ಯ. ಹಣವೇ ಜೀವನ. ಹಣದಿಂದ ಎಲ್ಲವೂ ಸಾಧ್ಯ ಎಂದಿದ್ದಾರೆ ನಟಿ. ಹಣ ಇದ್ದರೆ ಮಾತ್ರ ಜನರು ನಿಮ್ಮ ಜೊತೆ ಇರುತ್ತಾರೆ. ನಿಮ್ಮ ಸುತ್ತಲಿನ ಜನರನ್ನು ಖುಷಿಯಾಗಿ ಇಡಲು ಸಾಧ್ಯವಾಗುವುದು ಹಣದಿಂದ ಮಾತ್ರ. ಹಣ ಇಲ್ಲದಿದ್ದರೆ ಈ ಜೀವನದಲ್ಲಿ ಏನೂ ಇಲ್ಲ ಎನ್ನುವುದು ಉರ್ಫಿಯ ಮಾತು.

ಉರ್ಫಿಯ ಮಾತಿಗೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಹಣದಿಂದ ಖುಷಿ ಕೊಳ್ಳಬಹುದು ಎನ್ನುವ ನಟಿಯ ಮಾತಿಗೆ ಸಮ್ಮತಿ ಸೂಚಿಸಲಿಲ್ಲ. ಎಷ್ಟೋ ಆಗರ್ಭ ಶ್ರೀಮಂತರು ಕೋಟಿಗಟ್ಟಲೆ ಹಣ ಸುರಿಯಲು ತಯಾರು ಇದ್ದರೂ, ಅವರ ಜೀವನದಲ್ಲಿ ಖುಷಿ ಸಿಗುವುದಿಲ್ಲ, ಎಲ್ಲಾ ಶ್ರೀಮಂತರ ಬದುಕೂ ಸುಖಮಯವಾಗಿಲ್ಲ ಎನ್ನುತ್ತಿದ್ದಾರೆ.ಕೆಲವು ದಿನಗಳ ಹಿಂದೆ ನಟಿ ಭಾರಿ ಸದ್ದು ಮಾಡಿದ್ದು,  ಕಳೆದ ಮೂರು ವರ್ಷಗಳಿಂದ ಯಾರ ಜೊತೆಯೂ ಸೆಕ್ಸ್ ಮಾಡಿಲ್ಲ ಎಂದು ಸುದ್ದಿಯಾಗಿದ್ದರು. ಯಾವುದೇ ಪುರುಷನಿಗೆ ಕಿಸ್ ಕೂಡ ನೀಡಿಲ್ಲ.   ಯಾರ ಜೊತೆಯೂ ಆಕೆ ರೋಮ್ಯಾಂಟಿಕ್ ಆಗಿ ಮಾತನಾಡಿಲ್ಲ ಎಂದೂ ಸಾರ್ವಜನಿಕವಾಗಿಯೇ ಯಾವುದೇ ಹಿಂಜರಿಕೆ ಇಲ್ಲದೇ ಬಹಿರಂಗಪಡಿಸಿದ್ದ ನಟಿಗೆ ಈಗ ನೇರವಾಗಿ ಇದೇ ಪ್ರಶ್ನೆಯನ್ನು ಮಾಡಿದ್ದಾನೆ 15 ವರ್ಷದ ಬಾಲಕ! ಈ ಕುರಿತು ನಟಿ ಖುದ್ದು ಹೇಳಿಕೊಂಡಿದ್ದು, ಬಾಲಕನೊಬ್ಬನಿಗೆ ಇಂಥ ಪ್ರಶ್ನೆಯನ್ನು ಕೇಳಿರುವುದಕ್ಕೆ ನನಗೆ ಶಾಕ್‌ ಆಯಿತು ಎಂದದ್ದರು. ನನ್ನ ತಾಯಿ ಮತ್ತು ಸಹೋದರಿಯರ ಎದುರೇ ಸಾರ್ವಜನಿಕವಾಗಿಯೇ ಬಾಲಕ ಇಂಥದ್ದೊಂದು ಪ್ರಶ್ನೆ ಕೇಳಿರುವ ಬಗ್ಗೆ ನಟಿ ಶಾಕ್‌ ಆಗಿದ್ದಾರೆ. ಇದರ ಬಗ್ಗೆ ನಟಿ ಬರೆದುಕೊಳ್ಳುತ್ತಲೇ ಪರ-ವಿರೋಧಗಳ ಚರ್ಚೆ ಶುರುವಾಗಿದೆ.

ಸಿನಿಮಾ ಒಪ್ಪಿಕೊಳ್ಳದ್ದಕ್ಕೆ ಕಾರಣ ಕೊಟ್ಟ ಬಿಗ್​ಬಾಸ್​ ನಮ್ರತಾ: ಇದನ್ನು ನಂಬಬೇಕಾ ಕೇಳಿದ ನೆಟ್ಟಿಗರು!

Latest Videos
Follow Us:
Download App:
  • android
  • ios