Kushi: ದೇವರಕೊಂಡ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್; ಸಮಂತಾಗೆ 'ನನ್ನ ರೋಜಾ ನೀನೇ' ಎಂದ ಸೆನ್ಸೇಷನಲ್ ಸ್ಟಾರ್

ತೆಲುಗು ಸ್ಟಾರ್ ವಿಜಯ್ ದೇವರಕೊಂಡ ಹುಟ್ಟುಹಬ್ಬದ ಪ್ರಯುಕ್ತ ಖುಷಿ ಸಿನಿಮಾದ ಹಾಡನ್ನು ರಿಲೀಸ್ ಮಾಡಲಾಗಿದೆ. 

vijay devarakonda and Samantha starrer Kushi movie song released sgk

ಟಾಲಿವುಡ್ ಚಿತ್ರರಂಗದ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅವರಿಗೆ ಇಂದು (ಮೇ 9) ಹುಟ್ಟುಹಬ್ಬದ ಸಂಭ್ರಮದ. ವಿಜಯ್ ದೇವರಕೊಂಡ ಅವರಿಗೆ ಅಭಿಮಾನಿಗಳು ಹಾಗೂ ಸಿನಿಮಾ ಗಣ್ಯರು ವಿಶೇಷವಾಗಿ ಬರ್ತಡೇ ವಿಶ್ ಮಾಡುತ್ತಿದ್ದಾರೆ. ಇನ್ನು ವಿಶೇಷ ಎಂದರೆ ವಿಜಯ್ ಜನುಮದಿನದ ವಿಶೇಷವಾಗಿ ಖುಷಿ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡಲಾಗಿದೆ. ತೆಲುಗು ಸೇರಿದಂತೆ ಅನೇಕ ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕನ್ನಡದಲ್ಲೂ ವಿಜಯ್ ದೇವರಕೊಂಡ ಮತ್ತು ಸಮಂತಾ ಮೋಡಿ ಮಾಡಿದ್ದಾರೆ. ನನ್ನ ರೋಜಾ ನೀನೇ ಎಂಬ ಮೆಲೋಡಿ ಟ್ರ್ಯಾಕ್ ಇದಾಗಿದ್ದು ಕೇಳುಗರನ್ನು ಇಂಪ್ರೆಸ್ ಮಾಡುತ್ತಿದೆ.

ಕನ್ನಡ ವರ್ಷನ್‌ ಖುಷಿ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಈ ಹಾಡಿಗೆ ಹೇಶಾಮ್ ಅಬ್ದುಲ್ ವಹಾಬ್ ಧ್ವನಿಯಾಗುವುದರ ಜೊತೆಗೆ ಟ್ಯೂನ್ ಹಾಕಿದ್ದಾರೆ. ಲವರ್ ಬಾಯ್ ಆಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ಸಮಂತಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಇಡೀ ಸಾಂಗ್ ಅನ್ನು ಚಿತ್ರೀಕರಿಸಲಾಗಿದೆ. ಈ ಸಿನಿಮಾದ ಪೋಸ್ಟರ್ ಹಾಗೂ ಹಾಡುಗಳನ್ನು ನೋಡಿದ್ರೆ ಸಮಂತಾ ಮುಸ್ಲಿಂ ಯುವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಲವ್ ಸ್ಟೋರಿ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.  

ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನಿರ್ವಣ ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ರಶ್ಮಿಕಾ ಆಯ್ತು ಈಗ ಕನ್ನಡದ ಮತ್ತೋರ್ವ ನಟಿ ಜೊತೆ ದೇವರಕೊಂಡ ರೊಮ್ಯಾನ್ಸ್; ಶ್ರೀಲೀಲಾನೂ ಡಿಲೀಟ್ ಎಂದ ಫ್ಯಾನ್

ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

ರಶ್ಮಿಕಾ-ವಿಜಯ್ ದೇವರಕೊಂಡ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದಾರಾ? 'ಪುಷ್ಪ' ನಟಿಯ ರಿಯಾಕ್ಷನ್ ವೈರಲ್

ವಿಜಯ್ ದೇವರಕೊಂಡ ಬಳಿ ಇರುವ ಸಿನಿಮಾಗಳು 

ವಿಜಯ್ ದೇವರಕೊಂಡ ಲೈಗರ್ ಸಿನಿಮಾ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಲೈಗರ್ ಸೋಲಿನಿಂದ ದೊಡ್ಡ ಹಿನ್ನಡೆ ಅನುಭವಿಸಿದ್ದ ವಿಜಯ್ ದೇವರಕೊಂಡ ಗ್ಯಾಪ್‌ನ ಬಳಿಕ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಜಯ್ ದೇವರಕೊಂಡ ಹೊಸ ಸಿನಿಮಾಗೆ ಕನ್ನಡದ ನಟಿ ಶ್ರೀಲಾಲಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ವಿಜಯ್ ದೋವರಕೊಂಡ ಮತ್ತ ಶ್ರೀಲೀಲಾ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿದ್ದಾರೆ. ಅಂದಹಾಗೆ ಇಬ್ಬರ ಸಿನಿಮಾಗೆ  ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ನಿರ್ದೇಶನ ಮಾಡುತ್ತಿದ್ದಾರೆ. 

   

Latest Videos
Follow Us:
Download App:
  • android
  • ios