ನಾನು ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತೇನೆ ಎಂದು ಗರ್ಲ್‌ಫ್ರೆಂಡ್ ತಮನ್ನಾ ಬಗ್ಗೆ ವಿಜಯ್ ವರ್ಮಾ ಪ್ರೀತಿಯ ಮಾತನಾಡಿದ್ದಾರೆ. 

ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಪ್ರೀತಿ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರು ಪ್ರೀತಿಯಲ್ಲಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಸದಾ ಜೊತೆಯಲ್ಲೇ ಕಾಣಿಸಿಕೊಳ್ಳುವ ಈ ಜೋಡಿ ಹಕ್ಕಿ ತಮ್ಮ ಪ್ರೀತಿ ವಿಚಾರವನ್ನು ಮಾಧ್ಯಮದ ಮುಂದೆ ಬಹಿರಂಗವಾಗಿ ಬಿಚ್ಚಿಟ್ಟಿದ್ದಾರೆ. ಇತ್ತೀಚೆಗಷ್ಟೆ ತಮನ್ನಾ ತನ್ನ ಬಾಯ್ ಫ್ರೆಂಡ್ ವಿಜಯ್ ವರ್ಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದರು. ಅವರು ತನ್ನ ಪ್ರೀತಿಯ ಖಜಾನೆ ಎಂದು ಹೊಗಳಿದ್ದರು. ಇದೀಗ ವಿಜಯ್ ವರ್ಮಾ ತನ್ನ ಪ್ರೇಯಸಿ ತಮನ್ನಾ ಬಗ್ಗೆ ಪ್ರೀತಿಯ ಮಾತುಗಳನ್ನು ಹೇಳಿದ್ದಾರೆ. ತಮನ್ನಾರನ್ನು ಹೇಗೆ ಪ್ರೀತಿಸುತ್ತಾರೆ ಎಂದು ಬಹಿರಂಗ ಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮಾಧ್ಯಮದ ಜೊತೆ ಮಾತನಾಡಿದ ವಿಜಯ್ ವರ್ಮಾ, 'ನಾವು ಒಬ್ಬರಿಗೊಬ್ಬರು ಡೇಟಿಂಗ್ ಮಾಡುತ್ತಿದ್ದೇವೆ ಎಂಬುದು ಈಗ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಅವಳೊಂದಿಗೆ ತುಂಬಾ ಸಂತೋಷದಿಂದ ಇದ್ದೀನಿ ಹಾಗೂ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತೇನೆ' ಎಂದು ಹೇಳಿದರು. 'ನಾನು ಇದನ್ನು ನನ್ನ ವಿಲನ್ ಯುಗ ಮುಗಿಯಿತು, ರೊಮ್ಯಾಂಟಿಕ್ ಯುಗ ಪ್ರಾರಂಭವಾಗಿದೆ' ಎಂದು ವಿಜಯ್ ಮರ್ಮಾ ಹೇಳಿದರು. 

ದುಡ್ಡಿಗಾಗಿ ಬೆಡ್‌ರೂಮ್ ದೃಶ್ಯಗಳಲ್ಲಿ ಕಾಣಿಸಿಕೊಂಡ್ರಾ ತಮನ್ನಾ? ಮಿಲ್ಕಿ ಬ್ಯೂಟಿ ಅಪ್‌ಸೆಟ್ ಆಗಿದ್ದೇಕೆ?

ತಮನ್ನಾ ಕೂಡ ವಿಜಯ್ ವರ್ಮಾ ಅವರನ್ನು ಹಾಡಿಹೊಗಳಿದ್ದರು. ಫಿಲ್ಮ್ ಕಂಪ್ಯಾನಿಯನ್ ಜೊತೆ ಮಾತನಾಡಿದ್ದ ತಮನ್ನಾ ಭಾಟಿಯಾ ವಿಜಯ್ ವರ್ಮಾ ಬಗ್ಗೆ 'ಅವರು (ವಿಜಯ್ ವರ್ಮಾ) ನಾನು ತುಂಬಾ ಬಾಂಧವ್ಯ ಹೊಂದಿದ ವ್ಯಕ್ತಿ. ಯಾರೋ ಒಬ್ಬರು ನಿಮ್ಮ ಸಹನಟರಾಗಿದ್ದ ಮಾತ್ರಕ್ಕೆ ಅವರೊಡನೆ ಆಕರ್ಷಿತರಾಗಲು ಸಾಧ್ಯವಿಲ್ಲ. ಏಕೆಂದರೆ ನಾನು ಈಗಾಗಲೇ ಹಲವಾರು ನಟರೊಡನೆ ನಟಿಸಿದ್ದೇನೆ. ಯಾರ ಕಡೆಗೂ ನಾನು ಆಕರ್ಷಿತಳಾಗಿಲ್ಲ. ಯಾರ ಬಗ್ಗೆಯಾದರೂ ನೀವು ನಿಜಕ್ಕೂ ಮನಸೋತಿರೆಂದರೆ, ಭಾವನೆಗಳು ಹುಟ್ಟಿದವೆಂದರೆ ಅದು ಬಹಳ ವೈಯಕ್ತಿಕವಾಗಿದೆ. ಆ ವ್ಯಕ್ತಿ ಹೇಗಿದ್ದಾನೆ, ಏನು ಮಾಡುತ್ತಿದ್ದಾನೆ, ಯಶಸ್ವಿ ವ್ಯಕ್ತಿಯೋ ಎಂಬುದೆಲ್ಲವೂ ಗಣನೆಗೆ ಬರುವುದೇ ಇಲ್ಲ' ಎಂದಿದ್ದಾರೆ.

ಲಸ್ಟ್ ಸ್ಟೋರೀಸ್ 2 ಸ್ಕ್ರೀನಿಂಗ್‌: ಒಟ್ಟಿಗೇ ಕಾಣಿಸಿಕೊಂಡ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ!

ಲಸ್ಟ್ ಸ್ಟೋರೀಸ್ 2 ಸೆಟ್‌ಗಳಲ್ಲಿ ವಿಜಯ್‌ ವರ್ಮಾ ಜೊತೆ ಪ್ರೀತಿ ಶುರುವಾಯಿತಾ ಎಂದು ಕೇಳಿದ ಪ್ರಶ್ನೆಗೆ ತಮನ್ನಾ, 'ಹೌದು' ಎಂದು ಹೇಳಿದರು. ಬಳಿಕ ವಿಜಯ್ ವರ್ಮರನ್ನು ವಿವರಿಸಿದರು. ವಿಜಯ್ ವರ್ಮಾ ನನ್ನ ಖುಷಿಯ ಖಜಾನೆ ಎಂದು ಹೇಳಿದರು. 'ನಮ್ಮ ಸಂಬಂಧ ಬಹಳ ನೈಸರ್ಗಿಕ ರೀತಿಯಲ್ಲಿ ಯಾವುದೇ ಒತ್ತಡಗಳಿಲ್ಲದೆ ಶುರುವಾಯ್ತು' ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ತಮನ್ನಾ ಸಂದರ್ಶನವೊಂದರಲ್ಲಿ ಡೇಟಿಂಗ್ ವಿಚಾರ ತಳ್ಳಿ ಹಾಕಿದ್ದರು. ಅವೆಲ್ಲ ಗಾಳಿಸುದ್ದಿ ಆ ಬಗ್ಗೆ ನಾನು ಸ್ಪಷ್ಟನೆ ನೀಡಬೇಕಿಲ್ಲ ಎಂದಿದ್ದರು. ಆದರೆ ಈಗ ತಮ್ಮ ಹಾಗೂ ವಿಜಯ್ ನಡುವಿನ ಸಂಬಂಧವನ್ನು ಒಪ್ಪಿಕೊಂಡಿದ್ದಾರೆ.