ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ರಿಂದ ಜೀ 5ನಲ್ಲಿ(Zee5) ಸ್ಟ್ರೀಮಿಂಗ್ ಆರಂಭಿಸಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಒಟಿಟಿಯಲ್ಲಿ ಲಭ್ಯವಿದೆ. ವಿಶೇಷ ಎಂದರೆ ಈ ಸಿನಿಮಾ ವಾರಾಂತ್ಯಕ್ಕೆ 90 ಲಕ್ಷ ಜನರು ವೀಕ್ಷಿಸಿದ್ದಾರೆ. ಈ ಮೂಲಕ ಒಟಿಟಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಎಲ್ಲಾ ದಾಖಲೆಯನ್ನು ಮುರಿದು ಹಾಕಿದೆ.
ವಿವೇಕ್ ಅಗ್ನಿಹೋತ್ರಿ(Vivek Agnihotri) ನಿರ್ದೇಶನದಲ್ಲಿ ಮೂಡಿಬಂದಿರುವ ದಿ ಕಾಶ್ಮೀರ್ ಫೈಲ್ಸ್(The Kashmir Files) ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈಗಾಗಲೇ ಹಲವು ದಾಖಲೆಗಳನ್ನು ಬರೆದು ಗೆದ್ದು ಬೀಗಿದ್ದ ಈ ಸಿನಿಮಾ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದೆ. ಅತೀ ಕಡಿಮೆ ವೆಚ್ಚದಲ್ಲಿ ತಯಾರಾಗಿದ್ದ ಈ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿ ದಾಖಲೆ ಬರೆದಿತ್ತು. ಕೊರೊನಾ ಬಳಿಕ ಬಂದ ಸಿನಿಮಾಗಳಲ್ಲಿ ಕಾಶ್ಮೀರ್ ಫೈಲ್ಸ್ ಹಿಂದಿ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿತ್ತು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಕಲೆಕ್ಷನ್ ಹಿಂದಿ ಮಂದಿಯ ಅಚ್ಚರಿಗೂ ಕಾರಣವಾಗಿತ್ತು. ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಸಿನಿಮಾ ಅಲ್ಲಿಯೂ ಸದ್ದು ಮಾಡುತ್ತಿದ್ದು ದಾಖಲೆ ಬರೆದಿದೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ರಿಂದ ಜೀ 5ನಲ್ಲಿ(Zee5) ಸ್ಟ್ರೀಮಿಂಗ್ ಆರಂಭಿಸಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಒಟಿಟಿಯಲ್ಲಿ ಲಭ್ಯವಿದೆ. ವಿಶೇಷ ಎಂದರೆ ಈ ಸಿನಿಮಾ ವಾರಾಂತ್ಯಕ್ಕೆ 90 ಲಕ್ಷ ಜನರು ವೀಕ್ಷಿಸಿದ್ದಾರೆ. ಈ ಮೂಲಕ ಒಟಿಟಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಎಲ್ಲಾ ದಾಖಲೆಯನ್ನು ಮುರಿದು ಹಾಕಿದೆ. ಈ ಒಟಿಟಿ ವೇದಿಕೆಯಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ವೀಕ್ಷಣೆ ಪಡೆದ ಮೊದಲ ಸಿನಿಮಾ ಇದಾಗಿದೆೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಅಗ್ನಿಹೋತ್ರಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದಾಗಿನಿಂದ ಈಗ ಡಿಜಿಟಲ್ ಬಿಡುಗಡೆ ವರೆಗೂ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಪ್ರೇಕ್ಷಕರಿಂದ ಅಪಾರ ಪ್ರೀತಿ ಸಿಕ್ಕಿದೆ. ಈ ಸಿನಿಮಾ ನನ್ನ ಜೀವನದ ಅತ್ಯಂತ ತೃಪ್ತಿಕರ ಯೋಜನೆಯಾಗಿದೆ. ಅದನ್ನು ಸ್ವೀಕರಿಸಿದ ಪ್ರೇಕ್ಷಕರಿಗೆ ನಾನು ಕೃತಜ್ಞನಾಗಿದ್ದೇನೆ. ಒಟಿಟಿಯಲ್ಲ ಹೆಚ್ಚು ಜನ ವೀಕ್ಷಿಸುತ್ತಿದ್ದಾರೆ. ಇನ್ನು ಅಧಿಕ ವೀಕ್ಷಣೆಯಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಮುಸ್ಲಿಮರ ಏಕಪಕ್ಷೀಯ ಚಿತ್ರಣ, ಸಿಂಗಾಪುರದಲ್ಲಿ ಕಾಶ್ಮೀರ ಫೈಲ್ಸ್ ಪ್ರದರ್ಶನಕ್ಕೆ ನಿಷೇಧ!
ಅತ್ಯಂತ ಕಡಿಮೆ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಿದೆ. ಆದರೆಗಳಿಕೆ ಕಂಡು ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಹಿಂದಿ ಬಾಕ್ಸ್ ಆಫೀಸ್ ನಲ್ಲಿಯೇ 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಅಲ್ಲದೇ ದೇಶದಾದ್ಯಂತ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಭರ್ಜರಿ ಕಲೆಕ್ಷನ್ ಆಗಿದೆ. ಇನ್ನು ಒಟಿಟಿ ಸಹ ಕೋಟಿ ಕೋಟಿ ಕೊಟ್ಟು ಹಕ್ಕುಗಳನ್ನು ಖರೀದಿಸಿದೆ. ಕೋಟಿ ಕೋಟಿ ಬಾಚಿಕೊಂಡಿರುವ ಈ ಸಿನಿಮಾ ಒಟಿಟಿಯಲ್ಲೂ ಅಷ್ಟೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಿನಿಮಾತಂಡಕ್ಕೆ ಸಂತಸ ತಂದಿದೆ.
Asianet Suvarna Focus: ಕಾಶ್ಮೀರ್ ಫೈಲ್ಸ್ ಸತ್ಯ ಘಟನೆಯೋ? ಅಥವಾ ಕಟ್ಟು ಕಥೆಯೋ?
ಇನ್ನು ಬ್ಲಾಕ್ ಬಸ್ಟರ್ ಈ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಕಾಶ್ಮೀರ ಫೈಲ್ಸ್ ಸಿನಿಮಾ 90 ದಶಕದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ದೌರ್ಜನ್ಯದ ಬಗ್ಗೆ ಇರುವ ಸಿನಿಮಾ ಇದಾಗಿದೆ.
