Asianet Suvarna News Asianet Suvarna News

KGF 2; ತೂಫಾನ್ ಬಳಿಕ ಬರ್ತಿದೆ ಮತ್ತೊಂದು ಸಾಂಗ್, ಇದು ಅಮ್ಮಂದಿರ ಧ್ವನಿ ಎಂದ ಸಿನಿಮಾತಂಡ

ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್-2 (KGF 2) ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಏಪ್ರಿಲ್ 14ರಂದು(April 14th) ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಇದೀಗ ಸಿನಿಮಾದಿಂದ 2ನೇ ಹಾಡು ಬಿಡುಗಡೆಯಾಗುತ್ತಿದೆ. ಏಪ್ರಿಲ್ 6ರಂದು ಮಧ್ಯಾಹ್ನ 1 ಗಂಟೆಗೆ ಹಾಡು ಬಿಡುಗಡೆಯಾಗುತ್ತಿದೆ.

yash starrer kgf 2 second song will release on april 6th
Author
Bengaluru, First Published Apr 6, 2022, 9:31 AM IST

ರಾಕಿಂಗ್ ಸ್ಟಾರ್ ಯಶ್(Yash) ನಟನೆಯ ಕೆಜಿಎಫ್-2 (KGF 2) ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಏಪ್ರಿಲ್ 14ರಂದು(April 14th) ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ. ದಾಖಲೆಯ ವೀಕ್ಷಣೆ ಪಡೆದುಕೊಂಡಿದೆ. ಅಲ್ಲದೆ ಚಿತ್ರದಿಂದ ಬಂದ ಮೊದಲು ಹಾಡು ತೂಫಾನ್ ಕೂಡ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ದಿನದಿಂದ ದಿನಕ್ಕೆ ಕುತೂಹಲ, ನಿರೀಕ್ಷೆ ಹೆಚ್ಚಿಸುತ್ತಲೇ ಇರುವ ಕೆಜಿಎಫ್-2 ಚಿತ್ರದಿಂದ ಮತ್ತೊಂದ ಅಪ್ ಡೇಟ್ ಹೊರಬಿದ್ದಿದೆ. ಚಿತ್ರದಿಂದ ಮತ್ತೊಂದು ಹಾಡನ್ನು ರಿಲೀಸ್ ಮಾಡುವುದಾಗಿ ಸಿನಿಮಾತಂಡ ಘೋಷಣೆ ಮಾಡಿದೆ.

ತೂಫಾನ್ ಬಳಿಕ ಕೆಜಿಎಫ್-2 ಚಿತ್ರದಿಂದ ತಂಗಾಳಿ ಬೀಸುತ್ತಿದೆ. ಅಂದರೆ ಚಿತ್ರದಿಂದ ಮೆಲೋಡಿ ಹಾಡು ಬಿಗುಡಗೆಯಾಗುತ್ತಿದೆ. ಏಪ್ರಿಲ್ 6ರಂದು ಮಧ್ಯಾಹ್ನ 1 ಗಂಟೆಗೆ ಚಿತ್ರದ ಬಹುನಿರೀಕ್ಷೆಯ 2ನೇ ಹಾಡು ಬಿಡುಗಡೆಯಗುತ್ತಿದೆ. ಗಗನ ನೀ ಎಂಬ ಹಾಡನ್ನು ರಿಲೀಸ್ ಮಾಡುತ್ತಿದ್ದು, ಇದು ಪ್ರತಿ ಅಮ್ಮಂದಿರ ಧ್ವನಿ ಎಂದು ಬಣ್ಣಿಸಲಾಗಿದೆ. ಈ ಹಾಡು ಸಹ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಯಲ್ಲೂ ಬಿಡುಗಡೆಯಾಗುತ್ತಿದೆ. ಈ ಬ್ಗಗೆ ಸಿನಿಮಾತಂಡ ಮಾಹಿತಿ ಹಂಚಿಕೊಂಡಿದೆ. ಹೊಂಬಾಳೆ ಫಿಲ್ಸ್ಮ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ.

ಅಂದಹಾಗೆ ಕೆಜಿಎಫ್ ಪಾರ್ಟ್1ರಲ್ಲಿ ತಾಯಿ ಸೆಂಟಿಮೆಂಟ್ ಪ್ರೇಕ್ಷಕರ ಮನಮುಟ್ಟಿತ್ತು. ಇದೀಗ ಪಾರ್ಟ್-2ನಲ್ಲೂ ತಾಯಿ ಸೆಂಟಿಮೆಂಟ್ ಹಾಡು ಬಿಡುಗಡೆಯಾಗುತ್ತಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ. ಅಂದಹಾಗೆ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಗೀತ ಸಂಯೋಜನೆ ಮಾಡಿದ್ದು ಈ ಹಾಡಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಂದಹಾಗೆ ಕೆಜಿಎಫ್-2 ತಂಡ ಈಗಾಗಲೇ ಭರ್ಜರಿ ಪ್ರಚಾರಕ್ಕೆ ಇಳಿದಿದೆ.

KGF 2; ದೆಹಲಿ ಬಳಿಕ ಮುಂಬೈನಲ್ಲಿ ಯಶ್, ಸಂಜಯ್ ದತ್, ರವೀನಾ ಭರ್ಜರಿ ಪ್ರಚಾರ

ಬೆಂಗಳೂರಿನಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದಂತೆ ಉತ್ತರ ಭಾರತದ ಕಡೆ ಪಯಣ ಬೆಳೆಸಿರುವ ಕೆಜಿಎಫ್-2 ತಂಡ ಅಬ್ಬರದ ಪ್ರಚಾರ ಮಾಡುತ್ತಿದೆ. ರಾಕಿಂಗ್ ಸ್ಟಾರ್ ಯಶ್, ರವೀನಾ ಟಂಡನ್, ಸಂಜಯ್ ದತ್ ಮತ್ತು ಶ್ರೀನಿಧಿ ಶೆಟ್ಟಿ ಅವರ ಪ್ರಚಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೈಲಿಶ್ ಲುಕ್ ನಲ್ಲಿ ಮಿಂಚುತ್ತಿರುವ ರಾಕಿ ಭಾಯ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು ಕೆಜಿಎಫ್-2 ಕೇವಲ ಭಾರತ ಮಾತ್ರವಲ್ಲದೆ ಯುರೋಪ್, ಅಮೇರಿಕಾ, ರಷ್ಯಾ ಸೇರಿದಂತೆ ವಿಶ್ವದ ಹಲವು ಪ್ರದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲೆಡೆ ಕನ್ನಡ ಸೇರಿದಂತೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲೂ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ. ವಿಶೇಷ ಎಂದರೆ ಗ್ರೀಸ್ ​ನಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಮೂಲಕ ಗ್ರೀಸ್ ನಲ್ಲಿ ಬಿಡುಗಡೆಯಾಗುತ್ತಿರುವ ದಕ್ಷಿಣ ಭಾರತದ ಮೊದಲ ಸಿನಿಮಾ ಎಂಬ ಖ್ಯಾತಿಯನ್ನು ಕೆಜಿಎಫ್2 ಪಡೆದುಕೊಂಡಿದೆ.

ಟಿಕೆಟ್‌ ಬುಕ್ಕಿಂಗ್‌ನಲ್ಲೂ ದಾಖಲೆ ಮಾಡಿದ ಕೆಜಿಎಫ್ ಚಾಪ್ಟರ್ 2!

ವಿಶ್ವದಾದ್ಯಂತ ತೆರೆಗೆ ಬರುತ್ತಿರುವ ಕೆಜಿಎಫ್-2 ಸಿನಿಮಾ ನೋಡಲು ಕೋಟ್ಯಂತರ ಅಭಿಮಾನಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ. ಕೆಜಿಎಫ್ ಮೊದಲ ಭಾಗಕ್ಕಿಂತ 2ನೇ ಭಾಗ ಮತ್ತಷ್ಟು ರೋಚಕವಾಗಿದ್ದು ರಾಕಿ ಭಾಯ್ ಅನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಂಜಯ್ ದತ್ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅಧೀರಾ ಎನ್ನುವ ಭಯಾನಕ ಪಾತ್ರ ನಿರ್ವಾಹಿಸಿರುವ ಸಂಜಯ್ ದತ್ ಅವರನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಏಪ್ರಿಲ್ 14ರಂದು ಎಲ್ಲಾ ಕುತೂಹಲ, ನಿರೀಕ್ಷೆ ಗಳಿಗೆ ತೆರೆ ಬೀಳಲಿದೆ.

Latest Videos
Follow Us:
Download App:
  • android
  • ios