ಮುಂಬೈ(ಏ.05): ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ, ಸೆಲೆಬ್ರಿಟಿ, ರಾಜಕೀಯ ನಾಯಕರು ಹಾಗೂ ಗಣ್ಯರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಉಳಿದಿದ್ದಾರೆ. ಈ ಲಾಕ್‌ಡೌನ್ ಪರಿಣಾಮ ಕೇಂದ್ರ ಸಚಿವ ರಾಮ್‌ದಾಸ್ ಅಠಾವಳೆ ಮೇಲೂ ಬಿದ್ದಿದೆ. 

ಹೌದು ಲಾಕ್‌ಡೌನ್ ನಿಯಮ ಪಾಲಿಸುತ್ತಿರುವ ಕೇಂದ್ರ ಸಚಿವ ಸದ್ಯ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅಠಾವಳೆ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಇದರಲ್ಲಿ ಆfಲೇಟ್ ಮಾಡುತ್ತಿರುವ ದೃಶ್ಯಗಳು ಕಂಡು ಬಂದಿವೆ.

ಇನ್ನು ಕೊರೋನಾ ತಾಂಡವಕ್ಕೆ ದೇಶದಾದ್ಯಂತ 68 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿ ದಾಟಿದೆ. ಹೀಗಿರುವಾಗ ಲಾಕ್‌ಡೌನ್ ನಿಗದಿಯಂತೆ ತೆರವಾಗುತ್ತಾ ಅಥವಾ ಮುಂದುವರೆಯುತ್ತಾ? ಕಾದು ನೊಡಬೇಕಷ್ಟೇ