1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಕೊರೋನಾದಿಂದ ಸಿಕ್ತು ಗ್ರೇಸ್
ಕೊರೋನಾ ಎಫೆಕ್ಟ್: CBSE, ICSE ಮತ್ತು ISC ಪರೀಕ್ಷೆ ಮುಂದೂಡಿಕೆ!
ಈ ಬಗ್ಗೆ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. 1 ರಿಂದ 8ನೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಮುಂದಿನ ತರಗತಿಗೆ ಸೇರಿಸಿಕೊಳ್ಳು ಆದೇಶಿಸಲಾಗಿದೆ.
ಇನ್ನು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಆಯಾ ಶಾಲೆಗಳಲ್ಲಿ ನೀಡಿದ ಪ್ರಾಜೆಕ್ಟ್ ಹಾಗೂ ಪರೀಕ್ಷೆ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣ ಮಾಡಬಹುದಾಗಿದೆ. ಒಂದು ವೇಳೆ ಇದರಲ್ಲಿ ಪಾಸ್ ಆಗದೇ ಇರುವವರು ಶಾಲೆಗಳು ನಡೆಸುವ ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳಿಗೆ ಹಾಜರಾಗಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬಹುಮುಖ್ಯವಾಗಿ ಸಿಬಿಎಸ್‌ಇ 10 ಮತ್ತು 12ನೇ ತರಗತಿಗೆ ಪ್ರಧಾನ 29 ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಿದೆ. ಮುಂದಿನ ಶಿಕ್ಷಣ ಪಡೆಯಲು ಬೇಕಾಗಿರುವ ಮತ್ತು ಉತ್ತೀರ್ಣಗೊಳ್ಳಲು ಅತ್ಯಗತ್ಯವಾಗಿರುವ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.