ನವದೆಹಲಿ, (ಏ.05): ಕೊರೋನಾ ಲಾಕ್‌ಡೌನ್ ಮುಗಿದ ಬಿಳಿಕ ಶಾಲಾ-ಕಾಲೇಜು ಪುನಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಕ್ರಿಯಾಲ್​ ನಿಶಾಂಕ್​ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 14ರ ಬಳಿಕ ಪರಿಸ್ಥಿತಿ ಹೇಗಿರಲಿದೆ ಎನ್ನುವುದನ್ನು ಅವಲೋಕಿಸಲಾಗುವುದು. ನಂರವಷ್ಟೇ ಶಾಲಾ-ಕಾಲೇಜುಗಳನ್ನು ಆರಂಭಿಸಬೇಕೋ ಅಥವಾ ರಜೆ ವಿಸ್ತರಿಸಬೇಕೋ ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಕೊರೋನಾದಿಂದ ಸಿಕ್ತು ಗ್ರೇಸ್

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಸುರಕ್ಷತೆ ಸರ್ಕಾರಕ್ಕೆ ಮುಖ್ಯವಾಗಿದೆ. ಇದರಿಂದ ಏ.14ರ ನಂತರವೂ ಶಾಲೆ-ಕಾಲೇಜುಗಳನ್ನು ಕ್ಲೋಸ್ ಮಾಡುವ ಸಂದರ್ಭ ಎದುರಾದರೆ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಶೈಕ್ಷಣಿಕ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ತಿಳಿಸಿದರು.

ನಮ್ಮ ದೇಶದಲ್ಲಿ ಒಟ್ಟು 34 ಕೋಟಿ ವಿದ್ಯಾರ್ಥಿಗಳಿದ್ದಾರೆ. ಇದು ಅಮೆರಿಕದ ಜನಸಂಖ್ಯೆಗಿಂತಲೂ ಹೆಚ್ಚಿದ್ದು, ಅವರು ನಮ್ಮ ಆಸ್ತಿ. ಹೀಗಾಗಿ ಅವರ ಸುರಕ್ಷತೆ ಬಗ್ಗೆ ಅತ್ಯಂತ ಕಾಳಜಿ ವಹಿಸಲಾಗುತ್ತಿದೆ. ಇದ್ರಿಂದ ಲಾಕ್‌ಡೌನ್ ಮುಗಿದ ನಂತರ ಪರಿಸ್ಥಿತಿ ಬಗ್ಗೆ ಈಗಲೇ ದಿಟ್ಟ ನಿರ್ಧಾರ ಕೈಗೊಳ್ಳಲಾಗದು ಎಂದರು.

ಲಾಕ್‌ಡೌನ್ ಅವಧಿಯಲ್ಲಿ ಈಗಾಗಲೇ ವಿವಿಧ ಆನ್‌ಲೈನ್ ವೇದಿಕೆ ಬಳಸಿಕೊಂಡು ತರಗತಿಗಳನ್ನು ನಡೆಸಲಾಗುತ್ತಿದೆ. ಇವುಗಳ ಬಗ್ಗೆ ದಿನವೂ ಪರಾಮರ್ಶೆ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೇ ಈಗಾಗಲೇ ಬಾಕಿ ಇರುವ ಪರೀಕ್ಷೆಗಳನ್ನು ನಡೆಸಲು ಪ್ಲಾನ್ ಮಾಡಲಾಗುತ್ತಿದೆ ಎಂದು ವಿಶ್ಲೇಷಿಸಿದರು.