ಆಯುಷ್ಮಾನ್ ಭಾರತ್ ಯೋಜನೆ ವ್ಯಾಪ್ತಿಗೆ ಕೊರೋನಾ ಚಿಕಿತ್ಸೆ ಸೇರ್ಪಡೆ!
ಆಯುಷ್ಮಾನ್ ಭಾರತ್ ಯೋಜನೆ ವ್ಯಾಪ್ತಿಗೆ ಕೊರೋನಾ ಚಿಕಿತ್ಸೆ ಸೇರ್ಪಡೆ| ಖಾಸಗಿ ಆಸ್ಪತ್ರೆಯಲ್ಲಿ ಈ ಯೋಜನೆಯಡಿ ಸೌಲಭ್ಯ ದೊರೆಯಲಿದ್ದು, ಬಡವರು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು.
ನವದೆಹಲಿ(ಮಾ.25): ಕೊರೋನಾ ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್ ಯೋಜನೆಗೆ ಸೇರ್ಪಡೆಗೊಳಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ನಿರ್ಧರಿಸಿದೆ.
ಖಾಸಗಿ ಆಸ್ಪತ್ರೆಯಲ್ಲಿ ಈ ಯೋಜನೆಯಡಿ ಸೌಲಭ್ಯ ದೊರೆಯಲಿದ್ದು, ಬಡವರು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದೆರಡು ದಿನದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಇನ್ನೊಂದು ವಾರದಲ್ಲಿ ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಂಕಿತ ಸೋಂಕು ಭಾದಿತ ಖಾಸಗಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆದರೂ ಈ ಯೋಜನೆಯಡಿ ಚಿಕಿತ್ಸೆ ಉಚಿತವಾಗಿರಲಿದೆ.