ಮೈಸೂರು: ಅನಗತ್ಯ ಓಡಾಡಿದ 303 ವಾಹನಗಳ ವಶ

ಕೊರೋನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಸಾರ್ವಜನಿಕರು ಹೊರಬರದಂತೆ ಸೂಚಿಸಲಾಗಿದ್ದರೂ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಮೈಸೂರು ನಗರದಲ್ಲಿ ಸೋಮವಾರ ಹೀಗೆ ಓಡಾಡಿದ 303 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

303 vehicles seized in mysore for breaking lockdown rule

ಮೈಸೂರು(ಎ.01): ಕೊರೋನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಸಾರ್ವಜನಿಕರು ಹೊರಬರದಂತೆ ಸೂಚಿಸಲಾಗಿದ್ದರೂ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಮೈಸೂರು ನಗರದಲ್ಲಿ ಸೋಮವಾರ ಹೀಗೆ ಓಡಾಡಿದ 303 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರ ವ್ಯಾಪ್ತಿಯಲ್ಲಿ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸಿ, ಲಾಕ್‌ಡೌನ್‌ ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದಂತಹ 285 ದ್ವಿಚಕ್ರವಾಹನಗಳು, 8 ನಾಲ್ಕು ಚಕ್ರವಾಹನಗಳು, 10 ಆಟೋಗಳು ಸೇರಿದಂತೆ ಒಟ್ಟು 303 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ.ಎ.ಎನ್‌. ಪ್ರಕಾಶ್‌ ಗೌಡ ತಿಳಿಸಿದ್ದಾರೆ.

ಲಾಕ್‌ಡೌನ್‌: 2 ತಿಂಗಳ ರೇಷನ್ ವಿತರಣೆ, ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ಪಡೆಯಲು ಅವಕಾಶ'

ಈ ಕಾರ್ಯಾಚರಣೆ ಮಂಗಳವಾರ ಸಹ ಮುಂದುವರೆದಿದ್ದು, ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದು, ಲಾಕ್‌ಡೌನ್‌ ಮುಗಿದ ನಂತರ ಮಾಲೀಕರಿಗೆ ವಾಹನಗಳು ಸಿಗಲಿವೆ. ಅಲ್ಲದೆ, ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧಾರದ ಮೇಲೆ ವಾಹನ ಮಾಲೀಕರಿಗೆ ಕಾರಣ ಕೇಳಿ ನೋಟೀಸ್‌ ಸಹ ಪೊಲೀಸರು ಜಾರಿಗೊಳಿಸಿದ್ದಾರೆ.

Latest Videos
Follow Us:
Download App:
  • android
  • ios