ಮಂಗಳೂರು(ಏ.03): ಯಾವುದೇ ಕಾರಣಕ್ಕೂ ಕೇರಳ ಗಡಿ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಕೇರಳ, ಕಾಸರಗೋಡು ಭಾಗದ ಎಲ್ಲ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ನಮ್ಮಲ್ಲಿ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಕೇರಳ ಸರ್ಕಾರ ನ್ಯಾಯಾಲಯದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ. ರಾಜ್ಯ ಸರ್ಕಾರದ ಈ ಪ್ರಯತ್ನದಿಂದ ಜಿಲ್ಲೆಯಲ್ಲಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟ​ಪ​ಡಿ​ಸಿ​ದ್ದಾರೆ. 

ಸದ್ಯ ಯಾವುದೇ ವಾಹನಗಳು ಕೇರ​ಳ​ದಿಂದ ಮಂಗ​ಳೂ​ರಿ​ಗೆ ಬರುತ್ತಿಲ್ಲ. ಯಾವುದೇ ಕಾರಣಕ್ಕೂ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ. ಅಲ್ಲದೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಜಿಲ್ಲೆಯ ರೋಗಿಗಳು ಮಾತ್ರ ಇರಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಈ ಜಿಲ್ಲೆಗೆ ಮಾತ್ರ ಸೀಮಿತ ಎಂದು ಅವರು ಸುದ್ದಿ​ಗಾ​ರ​ರಿಗೆ ತಿಳಿ​ಸಿ​ದ್ದಾ​ರೆ.

ನೆರವು ಕೇಳಿದವನ ಮನೆಗೆ 2 ಗಂಟೇಲಿ ಅಕ್ಕಿ ಕಳುಹಿಸಿದ ಪ್ರಧಾನಿ ಮೋದಿ

ಈ ಮಧ್ಯೆ, ಕೊರೋನಾ ತಡೆಗಟ್ಟುವ ಹಿನ್ನಲೆಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಕೇರಳದಿಂದ ಬರುವ ವಾಹನಕ್ಕೆ ನಿರ್ಬಂಧ ಹೇರಿ ಬಂದ್‌ ಮಾಡಲಾಗಿದೆ. ಕೇರಳ ಗಡಿ ಬಂದ್‌ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ ಎಂದು ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಕೂಡ ತಿಳಿಸಿದ್ದಾರೆ.