ಗದಗ(ಏ.09): ವಿಶ್ವವನ್ನೇ ಕಂಗೆಡಿಸಿರುವ ಕೊರೋನಾ ಕರ್ನಾಟಕದಲ್ಲಿ ತನ್ನ ಹಾವಳಿ ಆರಂಭಿಸಿ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ದಿನಗಳೆದಂತೆ ಸೋಂಕಿತರ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈ ಮಹಾಮಾರಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಗದಗದ 80 ವರ್ಷದ ವೃದ್ಧೆ ಮಾರಕ ಕೊರೋನಾಗೆ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಈ ಡೆಡ್ಲಿ ವೈರಸ್‌ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿದೆ. 

ಹೌದು ಗದಗ ಜಿಲ್ಲೆಯಯಲ್ಲಿ ಕೊರೋನಾ ವೈರಸ್‌ಗೆ ಮೊದಲಲ ಬಲಿಯಾಗಿದ್ದು, ಇಲ್ಲಿನ ರಂಗನವಾಡಿ ಗಲ್ಲಿಯ ನಿವಾಸಿ, 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸುಮಾರು 12.55ರ ವೇಳೆ ಅವರಿಗೆ ವ್ಯಕ್ತಿಗೆ ಹೃದಯಾಘಾತವಾಗಿತ್ತು ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್​ ದೃಢಪಡಿಸಿದ್ದಾರೆ.

ಕೊರೋ​ನಾಗೆ ರಾಜ್ಯ​ದಲ್ಲಿ ಮತ್ತೊಂದು ಬಲಿ, 65 ವರ್ಷದ ವೃದ್ಧ ಸಾವು!

ಇನ್ನು ಈ ವೃದ್ಧನನ್ನು ಕೊರೋನಾ ಸೋಂಕು ತಗುಲಿರುವ ಹಿನ್ನೆಲೆ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಏಪ್ರಿಲ್ 7ರಂದು ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಅದರೆ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬುಧವಾರವೂ ಓರ್ವ ಸಾವು

ಇನ್ನು ನಿನ್ನೆ ಬುಧವಾರ ಕಲಬುರಗಿಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿತ್ತು. ಈ ಪೈಕಿ ಸೋಂಕು ದೃಢಪಡುವ ವರದಿ ಬರುವ ಮುನ್ನವೇ 65 ವರ್ಷದ ವ್ಯಕ್ತಿಯು ಮಂಗಳವಾರವೇ ಮೃತಪಟ್ಟಿದ್ದರು. ಮೃತ ವ್ಯಕ್ತಿಯು ಕಲಬುರಗಿ ಬಸ್ಸು ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದು, ಏ.4 ರಂದು ತೀವ್ರ ಉಸಿರಾಟ ತೊಂದರೆ (ಎಸ್‌ಎಆರ್‌ಐ) ಹಿನ್ನೆಲೆಯಲ್ಲಿ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸರ್ಕಾರಿ ಕೊರೋನಾ ಆಸ್ಪತ್ರೆಗೆ ಶಿಫಾರಸು ಮಾಡಿದ ಆಸ್ಪತ್ರೆ ವೈದ್ಯರು, ಏ.6ರ ಸಂಜೆ ಕಲಬುರಗಿಯ ಇಎಸ್‌ಐ ಆಸ್ಪತ್ರೆಗೆ ಕಳುಹಿಸಿದ್ದರು. ಇಲ್ಲಿ ದಾಖಲಾದ ನಂತರ ನೀಡಲಾದ ಚಿಕಿತ್ಸೆ ಫಲಕಾರಿಯಾಗದೆ ಹಣ್ಣಿನ ವ್ಯಾಪಾರಿ ಮಂಗಳವಾರ ಮೃತಪಟ್ಟರು. ಬುಧವಾರ ಈ ವ್ಯಕ್ತಿಯ ಗಂಟಲಿನ ದ್ರವದ ವರದಿ ಬಂದಿದ್ದು, ಅವರಿಗೆ ಕೊರೋನಾ ಸೋಂಕು ಇದ್ದದ್ದು ಖಚಿತಪಟ್ಟಿತ್ತು.

ಲಾಕ್‌ಡೌನ್ ತೆರವುಗೊಳಿಸುವುದು ಅಸಾಧ್ಯ: ಸರ್ವಪಕ್ಷ ಸಭೆಯಲ್ಲಿ ಮೋದಿ ಸುಳಿವು!

"