ಮಂಗಳೂರು(ಎ.01): ಮಂಗಳೂರಿನಲ್ಲಿ ಕೊನೆಗೂ ಕೋವಿಡ್‌ 19 ಪ್ರಕರಣಗಳನ್ನು ಪತ್ತೆ ಹಚ್ಚುವ ಪ್ರಯೋಗಾಲಯ ಸಿದ್ಧ​ವಾ​ಗಿದ್ದು, ಕಾರ್ಯ ನಿರ್ವಹಣೆ ಶೀಘ್ರ ಆರಂಭವಾಗುವ ನಿರೀಕ್ಷೆ ಇದೆ.

ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೊರೋನಾ ಶಂಕಿತರ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಹಾಸನಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗುತ್ತಿತ್ತು. ಇನ್ನು ಮುಂದೆ ನಗರದ ವೆನ್ಲಾಕ್‌ ಆಸ್ಪತ್ರೆಯಲ್ಲಿಯೇ ಈ ಪರೀಕ್ಷೆಗಳು ನಡೆಯಲಿವೆ.

ಮಧ್ಯಾ​ಹ್ನ​ದ ವೇಳೆಗೆ ತರ​ಕಾರಿ, ಹಣ್ಣು, ಮಾಂಸ ಖಾಲಿ

ಈ ಕುರಿತು ಶಾಸಕ ಡಿ.ವೇದವ್ಯಾಸ ಕಾಮತ್‌ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದು, ಮಂಗಳವಾರ ರಾತ್ರಿಯಿಂದಲೇ ಪ್ರಾಯೋಗಿಕವಾಗಿ ಸ್ಯಾಂಪಲ್‌ಗಳ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂದಿದ್ದಾರೆ. ಮಂಗಳೂರಿನಲ್ಲಿ ಟೆಸ್ಟಿಂಗ್‌ ಲ್ಯಾಂಬ್‌ ಆರಂಭವಾದರೆ ಇಲ್ಲಿ ಕಂಡು ಬರುವ ಕೊರೋನಾ ಶಂಕಿತ ಪ್ರಕರಣದ ವರದಿಗಳು ಅತಿಶೀಘ್ರ ಲಭ್ಯವಾಗಲಿವೆ.

ವಿವಿಧೆಡೆ ಜ್ವರದ ಕ್ಲಿನಿಕ್‌ ಆರಂಭ

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಜ್ವರ ಕ್ಲಿನಿಕ್‌ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು, ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು ಕೋರಲಾಗಿದೆ.

ಕೇಂದ್ರಾಡಳಿತ ಪ್ರದೇಶವಾಗಲಿದೆಯಾ ಕಾಸರಗೋಡು..?

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆಗಳು, ಎ.ಜೆ.ವೈದ್ಯಕೀಯ ಕಾಲೇಜು ಕುಂಟಿಕಾನ, ಕಂಕನಾಡಿಯ ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜು, ಅತ್ತಾವರದ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ದೇರಳಕಟ್ಟೆಯ ಯೇನೆಪೋಯ ವೈದ್ಯಕೀಯ ಕಾಲೇಜು, ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜು, ದೇರಳಕಟ್ಟೆಯ ಕೆ.ಎಸ್‌.ಹೆಗ್ಡೆ ವೈದ್ಯಕೀಯ ಕಾಲೇಜು, ಸುಳ್ಯ ಕೆ.ವಿ.ಜಿ. ವೈದ್ಯಕೀಯ ಕಾಲೇಜು, ಕಣಚೂರು ವೈದ್ಯಕೀಯ ಕಾಲೇಜು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಗಳಲ್ಲಿ ಜ್ವರದ ಕ್ಲಿನಿಕ್‌ ತೆರೆಯಲಾಗಿದೆ.