ಹುಬ್ಬಳ್ಳಿ(ಏ.04): ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮಧ್ಯೆಯೂ ಈವರೆಗೂ ಅನಗತ್ಯವಾಗಿ ಹೊರಬಂದ 855 ಬೈಕ್‌ಗಳನ್ನು ವಶಕ್ಕೆ ಪಡೆದು 4.70 ಲಕ್ಷಕ್ಕೂ ದಂಡ ವಸೂಲಿ ಮಾಡಲಾಗಿದೆ.

ಇದರಲ್ಲಿ ಗ್ರಾಮೀಣ ಭಾಗದಲ್ಲಿ 337 ಬೈಕ್‌ಗಳನ್ನು ವಶಕ್ಕೆ ಪಡೆದು 1.17 ಲಕ್ಷ ದಂಡ ವಿಧಿಸಲಾಗಿದೆ. ಈ ಪೈಕಿ 128 ಬೈಕ್‌ಗಳನ್ನು ಶುಕ್ರವಾರ ವಶಕ್ಕೆ ಪಡೆದು 35 ಸಾವಿರ ರೂ. ದಂಡ ವಿಧಿಸಲಾಗಿದೆ.

ಕೊರೋನಾ ಕಾಟ: ನೈರುತ್ಯ ರೈಲ್ವೆಯಿಂದ ಮಾಸ್ಕ್‌, ಸ್ಯಾನಿಟೈಸರ್‌ ಉತ್ಪಾದನೆ 

ಇನ್ನೂ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಈವರೆಗೆ 518 ಬೈಕ್‌ಗಳನ್ನು ವಶಕ್ಕೆ ಪಡೆದು 3.30 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಈ ಪೈಕಿ 20 ಬೈಕ್‌ಗಳನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ಅನಗತ್ಯವಾಗಿ ಮನೆ ಬಿಟ್ಟು ಹೊರಗಡೆ ಬರಬೇಡಿ ಎಂದು ಹಲವಾರಿ ಬಾರಿ ಮನವಿ ಮಾಡಿದರೂ ಜನರು ಮಾತ್ರ ಕ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಅನಗತ್ಯವಾಗಿ ಮನೆ ಬಿಟ್ಟು ಹೊರಗಡೆ ಬಂದ ವಾಹನಗಳನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.