Asianet Suvarna News Asianet Suvarna News

ರಾಜ್ಯದಲ್ಲಿ ಒಂದೇ ದಿನ 6 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 75ಕ್ಕೇರಿಕೆ!

ಕರ್ನಾಟಕದಲ್ಲಿ ಕೊರೋನಾ ತಾಂಡವ| ಒಂದೇ ದಿನ ಆರು ಮಂದಿಯಲ್ಲಿ ಸೋಂಕು| ಲಾಕ್‌ಡೌನ್ ಪಾಲಿಸಿ ಎಂದ ಆರೋಗ್ಯ ಸಚಿವ ಶ್ರೀರಾಮುಲು

Karnataka reports 6 new cases in single day total positive cases in state mounts to 75
Author
Bangalore, First Published Mar 28, 2020, 1:41 PM IST

ಬೆಂಗಳೂರು(ಮಾ.28): ದೂರದ ಚೀನಾದಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ವೈರಸ್ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ನಮ್ಮ ದೇಶ, ರಾಜ್ಯ, ಜಿಲ್ಲೆ, ಗ್ರಾಮಕ್ಕೂ ಕಾಲಿಟ್ಟಿದೆ. ಈಗಾಗಲೇ ಸೋಂಕಿತರ ಸಂಖ್ಯೆ 900ರ ಗಡಿ ತಲುಪುತ್ತಿದೆ. ಈ ಮಾರಕ ಕೊರೋನಾ ತಡೆಯುವ ನಿಟ್ಟಿನಲ್ಲಿ ಸರ್ಕಾರ ಇಡೀ ದೇಶಾದ್ಯಂತ 21 ದಿನದ ಲಾಕ್‌ಡೌನ್‌ ಹೇರಿದೆಯಾದರೂ ಅನೇಕ ಮಂದಿ ಇದನ್ನು ಗಂಭೀರವಾಗಿ ಪರಿಗಣಿಸದೆ ರಸ್ತೆಗಿಳಿಯುತ್ತಿದ್ದಾರೆ. ಹೀಗಿರುವಾಗ ಕರ್ನಾಟಕದಲ್ಲೂ ಆತಂಕಕಾರಿ ಬೆಳವಣಿಗೆ ಕಂಡು ಬಂದಿದೆ. ಈ ಕುರಿತಾಗಿ ಖುದ್ದು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ಬಿಚ್ಚಿಟ್ಟಿದ್ದಾರೆ.

"

ಹೌದು ರಾಮನಗರದಲ್ಲಿ ಕೊರೋನಾ ವೈರಸ್ ಸಂಬಂಧಿತ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿ ದಿನ 1- 2 ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಇಂದು, ಶನಿವಾರ ಒಂದೇ ದಿನ ಒಟ್ಟು ಆರು ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75ಕ್ಕೇರಿದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯಲ್ಲಿ ಲಾಕ್‌ಡೌನ್‌ ಪಾಲಿಸಿ ಮನೆಯಲ್ಲೇ ಉಳಿಯುವಂತೆಯೂ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶ್ರೀರಾಮುಲು ರಾಮನಗರ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಡಳಿತ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ಯಾವುದೇ ರೀತಿಯ ಒಳಗಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಮನೆಯಲ್ಲಿ ಸುರಕ್ಷಿತವಾಗಿರಬೇಕೆಂದು ವಿನಂತಿಸುತ್ತೇನೆ ಎಂದಿದ್ದಾರೆ.

Follow Us:
Download App:
  • android
  • ios