Asianet Suvarna News Asianet Suvarna News

ಭಾರತ್‌ ಲಾಕ್‌ಡೌನ್: 'ಅನಗತ್ಯ ವಾಹನಗಳನ್ನ ಮುಲಾಜಿಲ್ಲದೆ ಸೀಜ್‌ ಮಾಡಿ'

ತರಕಾರಿ ದರ ದುಪ್ಪಟ್ಟು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ| ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ನೆಹರು ಓಲೇಕಾರ ಸೂಚನೆ|ಐಸೋಲೇಷನ್‌ ವಾರ್ಡ್‌ಗಳಿಗೆ ಅಗತ್ಯವಾದ ಹೆಚ್ಚುವರಿ ಕಟ್ಟಡಗಳನ್ನು ಸಿದ್ಧತೆ ಮಾಡಿಕೊಳ್ಳಿ|

MLA Neharu Olekar Says Siege the unwanted vehicles in Haveri
Author
Bengaluru, First Published Apr 1, 2020, 8:43 AM IST

ಹಾವೇರಿ(ಏ.01): ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಿ. ಜನರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿ, ಉದ್ದೇಶಪೂರ್ವಕವಾಗಿ ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ ಹಾಗೂ ಪರಿಸ್ಥಿತಿಯ ಲಾಭ ಪಡೆದು ದಿನಸಿ ಹಾಗೂ ತರಕಾರಿ ದರ ದುಪ್ಪಟ್ಟು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ನೆಹರು ಓಲೇಕಾರ ಸೂಚಿಸಿದರು.

ಕೊರೋನಾ ಮುನ್ನೆಚ್ಚರಿಕೆ ಕ್ರಮಗಳ ಅನುಷ್ಠಾನ ಕುರಿತಂತೆ ಇಲ್ಲಿಯ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜನದಟ್ಟಣೆಯಾಗದಂತೆ ಕಠಿಣ ಕ್ರಮಕೈಗೊಳ್ಳಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಿ, ಗೃಹ ಪ್ರತ್ಯೇಕತೆಯಲ್ಲಿರುವವರು ಮನೆಯಿಂದ ಹೊರಗೆ ಬರದಂತೆ ಎಚ್ಚರವಹಿಸಿ ಎಂದು ಸಲಹೆ ನೀಡಿದರು.

ಹಿರೇಕೆರೂರು: ಮಹಾಮಾರಿ ಕೊರೋನಾ ಹೊಡೆದೋಡಿಸಲು ಕೌರವನಿಂದ ಜಾಗೃತಿ!

ನಗರ ಸ್ವಚ್ಛತೆ ಹಾಗೂ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕಳೆದ ಎರಡು ದಿನಗಳಿಂದ ಕುಡಿಯುವ ನೀರಿನ ಸಬರಾಜಿನ ಪೈಪ್‌ ಹಾಳಾದರೂ ದುರಸ್ತಿ ಮಾಡದ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.

ಲಾಠಿ ಬಿಡಿ, ದಂಡ ಹಾಕಿ:

ಕರ್ಫ್ಯೂ ಜಾರಿಯಲ್ಲಿದ್ದರೂ ಕೆಲವರು ಉದ್ದೇಶಪೂರ್ವಕವಾಗಿ ರಸ್ತೆಗೆ ಇಳಿಯುವುದು, ಗುಂಪುಗುಂಪಾಗಿ ಸೇರುತ್ತಾರೆ. ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿರುವುದರಿಂದ ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್‌ ಮಾಡಿ ದಂಡ ಹಾಕಿ. ನಿಷೇಧಾಜ್ಞೆ ಮುಗಿಯುವವರೆಗೂ ವಾಹನಗಳನ್ನು ಹಿಂದಿರುಗಿಸಬೇಡಿ. ಆದರೆ ಲಾಠಿ ಪ್ರಯೋಗ ಮಾಡಬೇಡಿ ಎಂದು ಪೊಲೀಸರಿಗೆ ಸಲಹೆ ನೀಡಿದರು.

ದಿನಸಿ ತರಕಾರಿಯನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮಕೈಗೊಳ್ಳಿ. ಪ್ರತಿ ಅಂಗಡಿಗಳ ಮುಂದೆ ದಿನಸಿ ದರಗಳ ಫಲಕಗಳನ್ನು ಪ್ರದರ್ಶಿಸಬೇಕು. ಎಂಆರ್‌ಪಿ ದರದಲ್ಲೇ ಮಾರಾಟ ಮಾಡುವಂತೆ ಕ್ರಮವಹಿಸಬೇಕು. ತಳ್ಳುಗಾಡಿಗಳ ಮೇಲೆ ತರಕಾರಿಗಳ ದರಗಳ ಫಲಕಗಳನ್ನು ಹಾಕಿಕೊಳ್ಳುವಂತೆ ಕ್ರಮವಹಿಸಲು ಸೂಚಿಸಿದರು.

ಐಸೋಲೇಷನ್‌ ವಾರ್ಡ್‌ಗಳಿಗೆ ಅಗತ್ಯವಾದ ಹೆಚ್ಚುವರಿ ಕಟ್ಟಡಗಳನ್ನು ಸಿದ್ಧತೆ ಮಾಡಿಕೊಳ್ಳಿ, ಮೊರಾರ್ಜಿ ಶಾಲೆಗಳು, ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಹಳೆ ಕಚೇರಿ, ರೈಲ್ವೆ ಬೋಗಿಗಳ ಬಳಕೆ ಸೇರಿದಂತೆ ಎಲ್ಲ ಕ್ರಮಗಳನ್ನು ವಹಿಸಿ, ಮಾಸ್ಕ್‌ ಹಾಗೂ ಇತರೆ ವೈದ್ಯಕೀಯ ಸುರಕ್ಷಾ ಉಪಕರಣಗಳ ದಾಸ್ತಾನಿಗೆ ಕ್ರಮವಹಿಸಿ ಎಂದು ಸೂಚನೆ ನೀಡಿದ್ದಾರೆ. 
 

Follow Us:
Download App:
  • android
  • ios