Asianet Suvarna News Asianet Suvarna News

ಭಾರತ್‌ ಲಾಕ್‌ಡೌನ್‌ ಎಫೆಕ್ಟ್‌: ಮದ್ಯ ಸಿಗದೆ ವ್ಯಕ್ತಿ ಆತ್ಮಹತ್ಯೆ

ಮದ್ಯ ಸಿಗದೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು| ಹುಬ್ಬಳ್ಳಿಯ ಕೆ.ಕೆ. ನಗರದಲ್ಲಿ ನಡೆದ ಘಟನೆ| ಕುಡಿತದ ಚಟಕ್ಕೆ ದಾಸನಾಗಿದ್ದ ಈತನಿಗೆ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯ ಸಿಕ್ಕಿರಲಿಲ್ಲ| ಚ

Person Commits Suicide in Hubballi
Author
Bengaluru, First Published Apr 8, 2020, 7:23 AM IST

ಹುಬ್ಬಳ್ಳಿ(ಏ.08):  ಮದ್ಯ ಸಿಗದೆ ಇಲ್ಲಿನ ಕೆ.ಕೆ. ನಗರದ 2ನೇ ಕ್ರಾಸ್‌ ನಿವಾಸಿ ಶಾನ್‌ನವಾಜ್‌ ಅಬ್ದುಲಖದೀರ ಅರಬ (30) ಸೋಮವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಕುಡಿತದ ಚಟಕ್ಕೆ ದಾಸನಾಗಿದ್ದ ಈತನಿಗೆ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯ ಸಿಕ್ಕಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡಿದ್ದ ಈತ ಮನೆಯ ಮೇಲ್ಚಾವಣಿಯ ಕಬ್ಬಿಣದ ಆ್ಯಂಗ್ಲರ್‌ಗೆ ಸೀರೆ ಕಟ್ಟಿಕೊಂಡು ನೇಣು ಬಿಗಿದುಕೊಂಡು ಉರುಳು ಹಾಕಿಕೊಂಡು ಮೃತಪಟ್ಟಿದ್ದಾನೆ. 

ಈ ಕುರಿತು ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊರೋನಾಗೆ ನೂರರಲ್ಲಿ ಇಬ್ಬರು ಸತ್ತರೆ, ಕುಡಿತದ ಹಿಂತೆಗೆತಕ್ಕೆ ಒಬ್ಬರು ಸಾಯಬಹುದು!

ಕೊರೋನಾ ವೈರಸ್‌ ವಿರುದ್ಧ ಸಮರ ಸಾರಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವೇ ಲಾಕ್‌ಡೌನ್‌ ಆದೇಶ ನೀಡಿದ್ದಾರೆ.  ಹೀಗಾಗಿ ಎಲ್ಲ ರೀತಿಯ ವ್ಯಾಪಾರ, ವಹಿವಾಟು ಬಂದ್ ಆಗಿದೆ. 
 

Follow Us:
Download App:
  • android
  • ios