ಸುಬ್ರಹ್ಮಣ್ಯ(ಮಾ.24): ಮಹಾರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಸುಬ್ರಹ್ಮಣ್ಯ ಸಮೀಪದ ಯುವತಿಯೋರ್ವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಪರೀಕ್ಷೆಗೆ ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿ, ಯುವತಿಯಲ್ಲಿ ಕೊರೋನಾದ ಯಾವುದೇ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕಳುಹಿಸಲಾಗಿದೆ. ಮಹಾರಾಷ್ಟ್ರದಲ್ಲಿ ಈ ಮೊದಲೇ ಕೊರೋನಾ ವೈರಸ್‌ ಪತ್ತೆಯಾಗಿರುವುದರಿಂದ ಅಲ್ಲಿ ಉದ್ಯೋಗದಲ್ಲಿದ್ದ ಯುವತಿ ಊರಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕವನ್ನುಟ್ಟು ಮಾಡಿತ್ತು.

ಕಸದ ಜೊತೆಯಲ್ಲೇ ಗ್ಲೌಸ್, ಮಾಸ್ಕ್: ಪೌರ ಕಾರ್ಮಿಕರಿಗೆ ಆತಂಕ

ಯುವತಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ತಪಾಸಣೆ ನಡೆಸಿದರು. ಬಳಿಕ ಮುಂಜಾಗ್ರತೆಯಾಗಿ ಹೆಚ್ಚಿನ ತಪಾಸಣೆಗಾಗಿ ಮಂಗಳೂರಿಗೆ ಕಳುಹಿಸಿ ಕೊಡಲಾಯಿತು. ಆಕೆ ಮುಂದಿನ 15 ದಿನ ಮನೆಯಿಂದ ಹೊರ ಬಾರದೆ, ಸಾರ್ವಜನಿಕವಾಗಿ ತಿರುಗಾಡದಂತೆ ಜಾಗೃತಿ ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.