4,473 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.0.4 ರಷ್ಟು ದಾಖಲಾಗಿದೆ. ಗುರುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 900 ಅಧಿಕ ನಡೆಸಲಾಗಿದೆ. ಹೊಸ ಪ್ರಕರಣಗಳು 1 ಹೆಚ್ಚಳವಾಗಿದೆ. 

ಬೆಂಗಳೂರು(ಡಿ.24):  ರಾಜ್ಯದಲ್ಲಿ ಶುಕ್ರವಾರ 17 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 40 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರು ಸಾವಿಗೀಡಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

4,473 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.0.4 ರಷ್ಟು ದಾಖಲಾಗಿದೆ. ಗುರುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 900 ಅಧಿಕ ನಡೆಸಲಾಗಿದೆ. ಹೊಸ ಪ್ರಕರಣಗಳು 1 ಹೆಚ್ಚಳವಾಗಿದೆ. (ಗುರುವಾರ 17 ಪ್ರಕರಣ, ಶೂನ್ಯ ಸಾವು). 

ಶೀಘ್ರ ಕೋವಿಡ್‌ ಮಾರ್ಗಸೂಚಿ ಬಿಡುಗಡೆ: ಸಚಿವ ಸುಧಾಕರ್‌

ಬೆಂಗಳೂರಿನಲ್ಲಿ 16, ಶಿವಮೊಗ್ಗದಲ್ಲಿ ಒಬ್ಬರಿಗೆ ಸೋಂಕು ತಗುಲಿದೆ. 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪ್ರಸ್ತುತ 1,238 ಸಕ್ರಿಯ ಸೋಂಕಿತರಿದ್ದು, ಈ ಪೈಕಿ 21 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿ ಐಸಿಯು, 5 ಮಂದಿ ಆಕ್ಸಿಜನ್‌, 6 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 1,217 ಮಂದಿ ಮನೆಯ ಆರೈಕೆಯಲ್ಲಿದ್ದಾರೆ.