15,197 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಶೇ.1.63 ಪಾಸಿಟಿವಿಟಿ ದರ ದಾಖಲು

ಬೆಂಗಳೂರು(ಸೆ. 27): ರಾಜ್ಯದಲ್ಲಿ ಮಂಗಳವಾರ 249 ಮಂದಿಯಲ್ಲಿ ಕೋವಿಡ್‌-19 ವರದಿಯಾಗಿದೆ. 501 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.

15,197 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಶೇ.1.63 ಪಾಸಿಟಿವಿಟಿ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 186, ಮೈಸೂರು 13 ಮತ್ತು ಕೊಡಗು ಜಿಲ್ಲೆಯಲ್ಲಿ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಈವರೆಗೆ 40.63 ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದು, 40.21 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,239 ಮಂದಿ ಮರಣವನ್ನಪ್ಪಿದ್ದಾರೆ.

Covid-19: ಕೋವಿಶೀಲ್ಡ್ ಲಸಿಕೆಯಿಂದ ಪುರುಷತ್ವಕ್ಕೆ ಹಾನಿ ಇದೆಯಾ?

ಲಸಿಕೆ ಅಭಿಯಾನ: 

ಮಂಗಳವಾರ 22,875 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 20,029 ಮಂದಿ ಮುನ್ನೆಚ್ಚರಿಕೆ ಡೋಸ್‌, 2,371 ಮಂದಿ ಎರಡನೇ ಡೋಸ್‌ ಮತ್ತು 475 ಮಂದಿ ಮೊದಲ ಡೋಸ್‌ ಲಸಿಕೆ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 11.99 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.